ಕನ್ನಡ ಸುದ್ದಿ  /  Karnataka  /  Rowdys Joining Bjp Issue Congress Has Opened Rowdy Morcha Website For Tong To Bjp

Rowdys joining BJP issue: ಬಿಜೆಪಿಗೆ ರೌಡಿಗಳ ಸೇರ್ಪಡೆ ವಿಚಾರ; ರೌಡಿ ಮೋರ್ಚಾ ವೆಬ್ ಸೈಟ್ ತೆರೆದು ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

ಬಿಜೆಪಿ ರೌಡಿ ಮೋರ್ಚಾ ಡಾಟ್ ಕಾಮ್ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಪ್ರತ್ಯೇಕ ವೆಬ್ ಸೈಟ್ ಬಿಡುಗಡೆ ಮಾಡಿದೆ. ಈ ವೆಬ್ ಸೈಟ್ ನಲ್ಲಿ ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೆಸರಿನಲ್ಲಿ 9 ರೌಡಿಗಳ ಹೆಸರುಗಳನ್ನು ಪ್ರಕಟಿಸಿ ಕಾಲೆಳೆದಿದೆ.

ರೌಡಿಗಳ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ ತಾರಕಕ್ಕೇರಿದೆ
ರೌಡಿಗಳ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ ತಾರಕಕ್ಕೇರಿದೆ

ಬೆಂಗಳೂರು: ರಾಜ್ಯ ಬಿಜೆಪಿಗೆ ರೌಡಿಗಳ ಸೇರ್ಪಡೆ ವಿಚಾರ ಆಡಳಿತ ಪಕ್ಷ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಕೈ ಪಕ್ಷ ಇದೀಗ ವಿನೂತನ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿ ರೌಡಿ ಮೋರ್ಚಾ ಡಾಟ್ ಕಾಮ್ ಹೆಸರಿನಲ್ಲಿ ಪ್ರತ್ಯೇಕ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಿದೆ. ಈ ವೆಬ್ ಸೈಟ್ ನಲ್ಲಿ ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೆಸರಿನಲ್ಲಿ ರೌಡಿಗಳ ಹೆಸರುಗಳನ್ನು ಪ್ರಕಟಿಸಿದೆ.

ಕರ್ನಾಟಕ, ಬಿಜೆಪಿ ರೌಡಿ ಶೀಟರ್‌ಗಳು ಮತ್ತು ಸಮಾಜವಿರೋಧಿಗಳ ತಾಣವಾಗಿ ಮಾರ್ಪಟ್ಟ ನಂತರ, ದಿನಕ್ಕೊಂದು ಹೊಸ ರೌಡಿಗಳು ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ರಾಜ್ಯ ಬಿಜೆಪಿ ಅಭ್ಯರ್ಥಿಯಾಗಲು ಮಾನದಂಡಗಳ ಫೋಟೋಗಳೊಂದಿಗೆ 'ಸೋರಿಕೆಯಾದ' ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದೆ. ವೆಬ್‌ಸೈಟ್ https://www.leakedbjp.com/ ಕೊನೆಯ ದಿನಗಳಲ್ಲಿ ಬಿಜೆಪಿಯ ಕಪಾಟಿನಿಂದ ಅಸ್ಥಿಪಂಜರಗಳು ಉರುಳುತ್ತಿರುವಾಗ, INC KARNATAKA 2023 ರ ಚುನಾವಣೆಯ ಪೂರ್ವದಲ್ಲಿ ಬಿಜೆಪಿಯ ಅನೌಪಚಾರಿಕತೆಯನ್ನು ಪ್ರದರ್ಶಿಸಲು ಸಂಪೂರ್ಣ ವೆಬ್‌ಸೈಟ್ ಅನ್ನು ಮೀಸಲಿಟ್ಟಿದೆ.

ಹೊಸ ವೆಬ್‌ಸೈಟ್‌ ಬೆಂಗಳೂರಿನ ರೌಡಿ ಶೀಟರ್‌ಗಳು ಮತ್ತು ಸ್ಲಂ ಲಾರ್ಡ್‌ಗಳನ್ನು ಬಿಜೆಪಿ ತನ್ನ ಕಾರ್ಯಕರ್ತರನ್ನಾಗಿ ಸೇರಿಸಿಕೊಳ್ಳುವ ಮೂಲಕ ರಾಜಕೀಯವನ್ನು ಹೇಗೆ ಅಪರಾಧೀಕರಿಸುತ್ತಿದೆ ಎಂಬುದರ ಕುರಿತು ವಿವರಗಳನ್ನು ಹೊಂದಿರುತ್ತದೆ ಎಂದು ಹೇಳಿದೆ.

ಬೆಂಗಳೂರು ನಗರದ ದೊಡ್ಡ ಕೊಳೆಗೇರಿಯೊಂದರಲ್ಲಿ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಗ್ಯಾಂಗ್ ಸ್ಟಾರ್ ಸೈಲೆಂಟ್ ಸುನಿಲ್ ಜೊತೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ರೌಡಿಶೀಟರ್ ಗಳು ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಒಂದು ವಾರದಿಂದ ಬಿಜೆಪಿ ಸರ್ಕಾರದ ಈ ಕ್ರಮವನ್ನು ವಿರೋಧಿಸುತ್ತಾ ಬರುತ್ತಿದೆ. ಬಿಜೆಪಿಯ ಜನಪ್ರತಿನಿಧಿಗಳು ಕೂಡಾ ರೌಡಿಗಳೊಂದಿಗೆ ನಿಕಟ ಸಂಬಧ ಹೊಂದಿದ್ದು ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬಲವಾಗಿ ಖಂಡಿಸುತ್ತಾ ಬಂದಿದೆ ಎಂದು ಹೇಳಿದೆ.

ಚುನಾವಣೆ ಹತ್ತಿರ ಬರುತ್ತಿದೆ. ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ಬಿಜೆಪಿ ರೌಡಿ ಮೋರ್ಚಾ ಸ್ಥಾಪಿಸುವುದಕ್ಕಾಗಿ ಆಪರೇಷನ್ ರೌಡಿ ಶೀಟರ್ ಪ್ರಾರಂಭಿಸಿದ್ದೇವೆ ಎಂದು ವೆಟ್ ಸೈಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯವಾಗಿ ಹೇಳಿದೆ. ಜೊತೆಗೆ ಕೆಲವು ರೌಡಿ ಶೀಟರ್ ಗಳನ್ನು ಫೋಟೋ ಸಹಿತ ಅವರ ಅಪರಾಧದ ಹಿನ್ನೆಲೆಯನ್ನು ಪ್ರಸ್ತಾಪಿಸಿದೆ. ಒಟ್ಟು 9 ಮಂದಿಯ ಹೆಸರುಗಳು ಹಾಗೂ ಅವರ ಅಪರಾಧದ ಹಿನ್ನೆಲೆಯನ್ನು ಕಾಂಗ್ರೆಸ್ ಸಾಧನೆಗಳು ಎಂದು ಹೇಳಿದೆ.

ನಂತರ ನಮ್ಮ ಅಭ್ಯರ್ಥಿಗಳ ಅರ್ಹತೆಗಳು ಏನೇನು ಅಂತ ಹೇಳಿದ್ದು, ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರ್ಯಾಕ್ ರೆಕಾರ್ಡ್ ಅಂತ ಕಾಂಗ್ರೆಸ್ ಬಿಜೆಪಿಯ ಕಾಲೆಳೆದಿದೆ.

ಬಿಜೆಪಿ ಹೆಸರಿನಲ್ಲಿ ಕಾಂಗ್ರೆಸ್ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೆತ್ತನಗೆರೆ ಶಂಕರ, ಫೈಟರ್ ರವಿ, ನಾರ್ವೆ ಸೋಮಶೇಖರ್, ರೌಡಿ ಶೀಟರ್ ಉಪ್ಪಿ, ಮಣಿಕಂಠ ರಾಥೋಡ್, ರಾಜೇಂದ್ರ, ಸಂಗಾತಿ ವೆಂಕಟೇಶ್ ಇವರ ಹೆಸರುಗಳನ್ನು ಪ್ರಕಟಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರವೊಂದರಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ ನೊಂದಿಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿದ್ದರು. ಆಗ ಸುನೀಲ ಬಿಜೆಪಿ ಸೇರುತ್ತಾನೆ ಎಂದು ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್ ನನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಹೆಸರು ಬದಲಾಯಿಸಿಕೊಂಡು ಬೆತ್ತನಗೆರೆ ಶಂಕರ ಕೂಡ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ.

IPL_Entry_Point