RV Deshpande: ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ; ಸೋಮವಾರದಿಂದ ಮೂರು ದಿನ ನೂತನ ಸಿಎಂ ಸಿದ್ದರಾಮಯ್ಯ ಸರ್ಕಾರದ ಅಧಿವೇಶನ
ಕನ್ನಡ ಸುದ್ದಿ  /  ಕರ್ನಾಟಕ  /  Rv Deshpande: ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ; ಸೋಮವಾರದಿಂದ ಮೂರು ದಿನ ನೂತನ ಸಿಎಂ ಸಿದ್ದರಾಮಯ್ಯ ಸರ್ಕಾರದ ಅಧಿವೇಶನ

RV Deshpande: ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ; ಸೋಮವಾರದಿಂದ ಮೂರು ದಿನ ನೂತನ ಸಿಎಂ ಸಿದ್ದರಾಮಯ್ಯ ಸರ್ಕಾರದ ಅಧಿವೇಶನ

ಕಾಂಗ್ರೆಸ್ ಹಿರಿಯ ಶಾಸಕ ಆರ್‌ವಿ ದೇಶಪಾಂಡೆ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕಾಗಿ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆ (Cabinet Meeting) ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ (RV Deshpande) ಅವರು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿದ್ದು (Interim Speaker), ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಇದೇ ಸೋಮವಾರ (ಮೇ 22)ದಿಂದ ಬುಧವಾರದ (ಮೇ 24) ವರೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಲಾಗಿದೆ.

ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರು ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರ‌ಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಅಂತಲೂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರಾಗಿರುವ ಆರ್‌ ವಿ ದೇಶಪಾಂಡೆಯವರನ್ನೇ ವಿಧಾನಸಭೆಯ ಪೂರ್ಣ ಪ್ರಮಾಣದ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದ ದೇಶಪಾಂಡೆಯವರು, ಸ್ಪೀಕರ್ ಸ್ಥಾನ ಎಂಬುದು ದೊಡ್ಡ ಜವಾಬ್ದಾರಿ. ನನಗೆ ವಿಧಾನಸಭೆ ಸಭಾಧ್ಯಕ್ಷರಾಗುವ ಅರ್ಹತೆ ಇಲ್ಲ ಎಂದು ಹೇಳಿದ್ದಾರೆ. ಆರ್‌ ವಿ ದೇಶಪಾಂಡೆಯವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

Whats_app_banner