ಕನ್ನಡ ಸುದ್ದಿ  /  ಕರ್ನಾಟಕ  /  Darshan Case:ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್ಪಿಪಿ ಬದಲಾವಣೆಗೆ ಒತ್ತಡವೂ ಇಲ್ಲ, ಮಾಡುವುದೂ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ

Darshan Case:ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್ಪಿಪಿ ಬದಲಾವಣೆಗೆ ಒತ್ತಡವೂ ಇಲ್ಲ, ಮಾಡುವುದೂ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ

Darshan Case ನಟ ದರ್ಶನ್‌ ಆರೋಪ ಎದುರಿಸುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕರನ್ನು ಬದಲಿಸುವ ಒತ್ತಡ ಇಲ್ಲ.ಬದಲಾವಣೆ ಮಾಡುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸರ್ಕಾರಿ ವಕೀಲರ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್‌ ಹೇಳಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸರ್ಕಾರಿ ವಕೀಲರ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರು: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ನಟ ದರ್ಶನ್‌ ಅವರು ಆರೋಪ ಎದುರಿಸುತ್ತಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಿಂದ ಕರ್ನಾಟಕ ಪೊಲೀಸರೂ ಕೂಡ ಗಮನ ಸೆಳೆದಿದ್ದಾರೆ. ಹತ್ತು ದಿನದಿಂದ ನಡೆದಿರುವ ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುವ ಪ್ರಯತ್ನ ನಡೆದಿರುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಸರ್ಕಾರಿ ಅಭಿಯೋಜಕರನ್ನು ಬದಲಾಯಿಸಬಹುದು. ಈ ಮೂಲಕ ದರ್ಶನ್‌ಗೆ ಪರೋಕ್ಷವಾಗಿ ಸರ್ಕಾರ ಸಹಕರಿಸಬಹುದು ಎನ್ನುವ ಮಾತುಗಳು ಕೇಳಿ ಬಂದಿವೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ತಿಳಿಸಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಬುಧವಾರ ಸಿಎಂ ಪ್ರತಿಕ್ರಿಯೆ ನೀಡಿದರು.

ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ . ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.

ಟ್ರೆಂಡಿಂಗ್​ ಸುದ್ದಿ

ಕೊಲೆ ಪ್ರಕರಣದ ತನಿಖೆ ಸಡಿಲ ಮಾಡುವ ಉದ್ದೇಶವಿಲ್ಲ: ಗೃಹ ಸಚಿವ ಪರಮೇಶ್ವರ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸಲಹೆಗಾರರು ಏನೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಎಲ್ಲರು ಸ್ಡ್ರಿಕ್ಟ್ ಆಗಿಯೇ ಇರಬೇಕಲ್ಲವೇ? ಕಾನೂನು ಬಿಟ್ಟು ಯಾರು ಕೆಲಸ ಮಾಡಲಾಗುವುದಿಲ್ಲ. ಕಾನೂನು ಪ್ರಕಾರವೇ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಕೆಲಸ ಮಾಡಬೇಕು. ಯಾರನ್ನೇ ನೇಮಿಸಿದರು ಸಹ ಕಾನೂನು ಪುಸ್ತಕ ಒಂದೇ ಅಲ್ಲವೇ? ಅದರ ಪ್ರಕಾರವೇ ಕೆಲಸ ಮಾಡಬೇಕಾಗುತ್ತದೆ ಎಂದರು.

ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಬದಲಾವಣೆ ಮಾಡಿದರು ಸಹ ಅದರಲ್ಲೇನು ತಪ್ಪಿಲ್ಲ. ಕಾರಣ ಇಟ್ಟುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ರೇಣುಕಾಸ್ವಾಮಿ‌ ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಮುಲಾಜಿಲ್ಲದೇ, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಪ್ರಕರಣದ ತನಿಖೆ ನಡೆಯುತ್ತಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾಯಿಸುವ ಸಂದರ್ಭ ಬಂದರೆ ಕಾರಣ ಇರುತ್ತದೆ. ಇಲ್ಲದೇ ಮಾಡುವುದಿಲ್ಲ‌ ಎಂದು ಹೇಳಿದರು‌.

ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ‌. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.

ಶ್ರೀಧರ್ ಎಂಬುವನ ಆತ್ಮಹತ್ಯೆ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದರ್ಶನ್ ಪ್ರಕರಣಕ್ಕೂ ಶ್ರೀಧರ್ ಎಂಬುವರ ಆತ್ಮಹತ್ಯೆಗೂ ಸಂಬಂಧ ಇದ್ದರೆ ತನಿಖೆ ಮಾಡುತ್ತಾರೆ. ಪ್ರತ್ಯೇಕವಾಗಿ ತನಿಖೆ ನಡೆಸಬೇಕು ಅಂತ ಸರ್ಕಾರವನ್ನು ಕೇಳುತ್ತಾರೆ. ಕಾರಣಗಳನ್ನು ಆಧರಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮರುತನಿಖೆ ನಡೆಸಲು ಅನುಮತಿ ಕೇಳಿದರೆ ನೀಡಲಾಗುವುದು ಎಂದರು.