ಕನ್ನಡ ಸುದ್ದಿ  /  Karnataka  /  Sarvodaya Karnataka Party Congress Marks One Seat For Sarvodaya Karnataka Party In 2nd List Of Candidates

Sarvodaya Karnataka Party: ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್‌ ಪುಟ್ಟಣಯ್ಯಗೆ ಕಾಂಗ್ರೆಸ್‌ ಬೆಂಬಲ

Sarvodaya Karnataka Party: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮೀಸಲಿಟ್ಟಿರುವುದಾಗಿ ಕಾಂಗ್ರೆಸ್ ತನ್ನ ಪಟ್ಟಿಯಲ್ಲಿ ಹೇಳಿಕೊಂಡಿದೆ. ಈ ಎರಡನೇ ಪಟ್ಟಿಯೊಂದಿಗೆ ಕಾಂಗ್ರೆಸ್‌ ಪಕ್ಷವು 224 ಕ್ಷೇತ್ರಗಳ ಪೈಕಿ ಒಟ್ಟು 166 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದಂತೆ ಆಗಿದೆ.

ಕೆಪಿಸಿಸಿ ತನ್ನ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇದೆ. ಈ 42 ಕ್ಷೇತ್ರಗಳ ಪೈಕಿ ಒಂದನ್ನು ತನ್ನ ಪ್ರಾದೇಶಿಕ ಮಿತ್ರ ಪಕ್ಷ ಸರ್ವೋದಯ ಕರ್ನಾಟಕ ಪಾರ್ಟಿಗೆ ಮೀಸಲಿಟ್ಟಿದೆ.
ಕೆಪಿಸಿಸಿ ತನ್ನ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇದೆ. ಈ 42 ಕ್ಷೇತ್ರಗಳ ಪೈಕಿ ಒಂದನ್ನು ತನ್ನ ಪ್ರಾದೇಶಿಕ ಮಿತ್ರ ಪಕ್ಷ ಸರ್ವೋದಯ ಕರ್ನಾಟಕ ಪಾರ್ಟಿಗೆ ಮೀಸಲಿಟ್ಟಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಾರ್ಟಿ (ಕೆಪಿಸಿಸಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದರೆ, ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇದೆ. ಈ 42 ಕ್ಷೇತ್ರಗಳ ಪೈಕಿ ಒಂದನ್ನು ತನ್ನ ಪ್ರಾದೇಶಿಕ ಮಿತ್ರ ಪಕ್ಷ ಸರ್ವೋದಯ ಕರ್ನಾಟಕ ಪಾರ್ಟಿಗೆ ಮೀಸಲಿಟ್ಟಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮೀಸಲಿಟ್ಟಿರುವುದಾಗಿ ಕಾಂಗ್ರೆಸ್ ತನ್ನ ಪಟ್ಟಿಯಲ್ಲಿ ಹೇಳಿಕೊಂಡಿದೆ. ಈ ಎರಡನೇ ಪಟ್ಟಿಯೊಂದಿಗೆ ಕಾಂಗ್ರೆಸ್‌ ಪಕ್ಷವು 224 ಕ್ಷೇತ್ರಗಳ ಪೈಕಿ ಒಟ್ಟು 166 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದಂತೆ ಆಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಮುಖ್ಯಸ್ಥ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕರ್ನಾಟಕದ ಪ್ರಮುಖ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆ ಮಾರ್ಚ್ 25 ರಂದು ಚುನಾವಣೆಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಪ್ರಕಟಿಸಿತ್ತು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರುಗಳಿವೆ.

ನಮ್ಮ ಆಯ್ಕೆ ಸಮಿತಿಯ ಸಭೆ ಇದೆ, ಉಳಿದ 100 ಸ್ಥಾನಗಳ ಬಗ್ಗೆ ಚರ್ಚಿಸಲಾಗುವುದು, ಸಮಿತಿಯಲ್ಲಿರುವವರು ತಮ್ಮ ಅಭಿಪ್ರಾಯವನ್ನು ತಿಳಿಸುತ್ತಾರೆ, ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಖರ್ಗೆ ಅಂದು ಹೇಳಿದ್ದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಡಿಕೆ ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸಲಿದ್ದಾರೆ. ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದರು ಆದರೆ ಕ್ಷೇತ್ರದ ಸ್ಥಳೀಯ ಮುಖಂಡರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಕೋಲಾರ ಗೋಲ್ಡ್ ಫೀಲ್ಡ್ ಕ್ಷೇತ್ರದಿಂದ ಎಂ ರೂಪಕಲಾ ಅವರನ್ನು ಪಕ್ಷ ಕಣಕ್ಕಿಳಿಸಿದೆ ಎಂದು ಪಿಟಿಐ ವರದಿ ಹೇಳಿದೆ.

ಕೇಸರಿ ಪಕ್ಷವು ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.