ಕನ್ನಡ ಸುದ್ದಿ  /  Karnataka  /  Separate Website In The Name Of Bjp Rowdy Morcha Dot Com Bjp Hits Back To Congress With Series Of Tweets

BJP hits back to Congress: ಬಿಜೆಪಿ ರೌಡಿ ಮೋರ್ಚಾ ಡಾಟ್ ಕಾಮ್ ಹೆಸರಿನಲ್ಲಿ ಪ್ರತ್ಯೇಕ ವೆಬ್ ಸೈಟ್; ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು

ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆ ಶಿವಕುಮಾರ್ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿದೆ.

ಕೇಸರಿ ಪಕ್ಷದ ಹೆಸರಲ್ಲಿ ರೌಡಿ ಮೋರ್ಚಾ ವೆಸ್ ಸೈಟ್ ತೆರೆದ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ
ಕೇಸರಿ ಪಕ್ಷದ ಹೆಸರಲ್ಲಿ ರೌಡಿ ಮೋರ್ಚಾ ವೆಸ್ ಸೈಟ್ ತೆರೆದ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ಬಿಜೆಪಿ ರೌಡಿ ಮೋರ್ಚಾ ಡಾಟ್ ಕಾಮ್ ಹೆಸರಿನಲ್ಲಿ ಪ್ರತ್ಯೇಕ ವೆಬ್ ಸೈಟ್ ತೆರೆದು ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೆಸರಿನಲ್ಲಿ ರೌಡಿಗಳ ಹೆಸರುಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ಇದಕ್ಕೆ ಬಿಜೆಪಿ ಕೂಡ ತಿರುಗೇಟು ನೀಡಿದೆ.

ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ವಿರುದ್ಧ ಕೇಸರಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ ರಾಜ್ಯ ಕಾಂಗ್ರೆಸ್ ರೌಡಿ‌ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ. ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ ಡಿಕೆ ಶಿವಕುಮಾರ್ ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ ಎಂದಿದೆ.

ಇನ್ನು ಸೌಮ್ಯಾ ರೆಡ್ಡಿಯವರು ಹೇಗೆ ಗೆದ್ದರು ಎಂಬುದನ್ನು ನಾವು ಹೇಳಲು ಹೋಗುವುದಿಲ್ಲ ಬಿಡಿ. ಹೀಗೆ ಕೊತ್ವಾಲನ ರೈಟ್‌ಹ್ಯಾಂಡಾಗಿ ಡಿಕೆ ಶಿವಕುಮಾರ್ ಇದ್ದರೆ ಲೆಫ್ಟ್‌ಹ್ಯಾಂಡಲ್ಲಿ ನಿಂತವರೇ ನಮ್ಮ ನಿಮ್ಮೆಲ್ಲರ ಸೋಲಿನ ಸರದಾರ ಬಿಕೆ ಹರಿಪ್ರಸಾದ್. ರೌಡಿಗಳಿಂದ ಇವರು ಈಗಲೂ ಸೆಲ್ಯೂಟ್ ಹೊಡೆಯುವಷ್ಟು ಹವಾ ಇಟ್ಟಿದ್ದಾರೆ ಎಂಬುದು ಹಳೆ‌ ವಿಷಯ ಎಂದು ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಕಾಂಗ್ರೆಸ್ ನ ಕಾಲೆಳೆದಿದೆ.

ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ @DKShivakumar ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ‌ ಹೊಡೆದ ಮರಿರೌಡಿ @nalapad ವರೆಗೂ ಇದೆ ಎಂದಿದೆ.

ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ, ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್ಸಿಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ. @INCkarnataka ಮುನ್ನೆಲೆಯ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದು, ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದೆ ಎಂದು ಸರಣಿ ಟ್ವೀಟ್ ಮಾಡಿದೆ.

ರಾಜ್ಯ ಬಿಜೆಪಿಗೆ ರೌಡಿಗಳ ಸೇರ್ಪಡೆ ವಿಚಾರ ಆಡಳಿತ ಪಕ್ಷ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಕೈ ಪಕ್ಷ ಇದೀಗ ವಿನೂತನ ಅಭಿಯಾನವನ್ನು ಆರಂಭಿಸಿದೆ.

ಬಿಜೆಪಿ ರೌಡಿ ಮೋರ್ಚಾ ಡಾಟ್ ಕಾಮ್ ಹೆಸರಿನಲ್ಲಿ ಪ್ರತ್ಯೇಕ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಿದೆ. ಈ ವೆಬ್ ಸೈಟ್ ನಲ್ಲಿ ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೆಸರಿನಲ್ಲಿ ರೌಡಿಗಳ ಹೆಸರುಗಳನ್ನು ಪ್ರಕಟಿಸಿದೆ.

ಕರ್ನಾಟಕ, ಬಿಜೆಪಿ ರೌಡಿ ಶೀಟರ್‌ಗಳು ಮತ್ತು ಸಮಾಜವಿರೋಧಿಗಳ ತಾಣವಾಗಿ ಮಾರ್ಪಟ್ಟ ನಂತರ, ದಿನಕ್ಕೊಂದು ಹೊಸ ರೌಡಿಗಳು ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ರಾಜ್ಯ ಬಿಜೆಪಿ ಅಭ್ಯರ್ಥಿಯಾಗಲು ಮಾನದಂಡಗಳ ಫೋಟೋಗಳೊಂದಿಗೆ 'ಸೋರಿಕೆಯಾದ' ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದೆ. ಇದಕ್ಕೆ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಕೂಡ ತಿರುಗೇಟು ನೀಡುತ್ತಿದೆ.

IPL_Entry_Point