Seva Sindhu: ಸೇವಾಸಿಂಧು ಪೋರ್ಟಲ್‌ಗೆ ಲಾಗಿನ್ ಆಗಲು ಹೀಗೆ ಮಾಡಿ, ಗೃಹಲಕ್ಷ್ಮಿ ಯೋಜನೆಯ ಜೊತೆಗೆ ಇನ್ನೂ ಹಲವು ಸೌಲಭ್ಯಗಳು ಇಲ್ಲಿ ಲಭ್ಯ
ಕರ್ನಾಟಕ ಸೇವಾ ಸಿಂಧು ಮೂಲಕ ಕರ್ನಾಟಕ ಸರ್ಕಾರದ ಹಲವು ಯೋಜನೆಗಳ ಸೌಲಭ್ಯ ಪಡೆಯಬಹುದು. ಸೇವಾ ಸಿಂಧು ಓಪನ್ ಮಾಡುವುದು ಹೇಗೆ ಎಂಬುದು ಸೇರಿದಂತೆ ಇತರೆ ಪ್ರಮುಖ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Govt) ಜಾರಿಗೆ ತಂದಿರುವ ಐದು ಗ್ಯಾರಂಟಿಗಳ (Congress 5 Guarantees) ಪೈಕಿ ಪ್ರತಿ ತಿಂಗಳು ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಹಣ ನೀಡುವ ಗೃಹಲಕ್ಷ್ಮಿ ಯೋಜನೆಗೆ (Gruhalakshmi scheme Scheme) ಅರ್ಜಿ ಸಲ್ಲಿಸಲು ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು.
ಗೃಹಲಕ್ಷ್ಮಿಗೆ ಇಂದಿನಿಂದ (ಜುಲೈ 20, ಗುರುವಾರ) ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಸೇವಾ ಸಿಂಧು ಪೋರ್ಟಲ್ ಮೂಲಕ ಗೃಹಲಕ್ಷ್ಮಿಗೆ ನೋಂದಣಿ ಮಾಡಿಕೊಳ್ಳಲು ಆಗುವುದಿಲ್ಲ. ಆದರೆ ಇತರೆ ಸೌಲಭ್ಯಗಳನ್ನು ಪಡೆಯಬಹುದು. ಮೊದಲಿಗೆ ಸೇವಾ ಸಿಂಧು ಓಪನ್ ಮಾಡುವುದು ಹೇಗೆ ಅನ್ನೋದನ್ನು ತಿಳಿದುಕೊಳ್ಳೋಣ.
ನಿಮ್ಮ ಇಂಟರ್‌ನೆಟ್ ಇರುವ ಮೊಬೈಲ್, ಲ್ಯಾಪ್‌ಟಾಪ್ ಅಥವಾ ಡೆಸ್ಟ್‌ಟಾಪ್‌ನಲ್ಲಿ ಗೂಗಲ್ ಸರ್ಚ್‌ಗೆ ಹೋಗಿ ಅಲ್ಲಿ ಸೇವಾ ಸಿಂಧು ಎಂದು ಟೈಪ್ ಮಾಡಿ ಸರ್ಚ್ ಕೊಟ್ಟರೆ Seva sindhu 1 ಅಂತ ತೋರಿಸುತ್ತದೆ. ಇದರ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಎರಡು ಆಯ್ಕೆ ಕಾಣಿಸುತ್ತವೆ. ಮೇಲಿನ ಚಿತ್ರದಲ್ಲಿರುವಂತೆ ಅಪ್ಲೇ ಫಾರ್ ಸರ್ವೀಸ್ ಹಾಗೂ ಚೆಕ್ ಯುವರ್ ಅಪ್ಲಿಕೇಷನ್ ಸ್ಟೇಟಸ್ ಇರುತ್ತದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user ? Register here ಇಲ್ಲಿ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಾಕಿ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ಆಪ್ಷನ್ ನಲ್ಲಿ ಯಾವ ಯೋಜನೆ ಎಂಬುದನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ.
ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ ಸಂಖ್ಯೆ, ಗುರುತಿನ ಚೀಟಿ ಹಾಗೂ ಇತರೆ ಅಗತ್ಯ ಮಾಹಿತಿಯನ್ನು ವಿವರಗಳನ್ನು ನಮೂದಿಸಿ.
ಹಂತ 5: ಶಕ್ತಿ ಸ್ಮಾರ್ಟ್ ಕಾರ್ಡ್ ಪಿಡಿಎಫ್ ಫೈಲ್ ಓಪನ್ ಆಗುತ್ತದೆ. ಡೌನ್‌ಲೋಡ್ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್‌ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶಕ್ತಿ ಕಾರ್ಡ್ ಮಾತ್ರವಲ್ಲದೆ, ಗೃಹ ಜ್ಯೋತಿ ಸೇರಿದಂತೆ ಇತರೆ ಯಾವುದೇ ಯೋಜನೆಗಳನ್ನು ಪಡೆಯಬೇಕಾದರೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ.