Prajwal Revanna: ಮೇ 31ಕ್ಕೆ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ಆಗಮನ; ಈವರೆಗೆ ತಿಳಿಯಬೇಕಾದ 5 ವಿಷಯಗಳಿವು
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ಮೇ 31ಕ್ಕೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಸಂಬಂಧ ಈವರೆಗೆ ತಿಳಿಯಬೇಕಾದ ಪ್ರಮುಖ 5 ಅಂಶಗಳನ್ನು ತಿಳಿಯಿರಿ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿದೇಶಕ್ಕೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Sexual Assault Case) ಇಂದು (ಮೇ 30, ಗುರುವಾರ) ಜರ್ಮನಿಯ ಮ್ಯೂನಿಚ್‌ನಿಂದ ಹೊರಡಲಿದ್ದು, ತಡರಾತ್ರಿ ಅಥವಾ ನಾಳೆ (ಮೇ 31, ಶುಕ್ರವಾರ) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನಿ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ದ ಕೋರ್ಟ್ ವಾರೆಂಟ್ ಇರುವುದಿಂದ ಅವರನ್ನು ಬಂಧಿಸಲು ವಿಶೇಷ ತನಿಖಾ ದಳ-ಎಸ್‌ಐಟಿ ಬಂಧಿಸಲು ಸಿದ್ಧತೆ ಮಾಡಿಕೊಂಡಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಜ್ವಲ್ ರೇವಣ್ಣ ಕುರಿತ ಅಶ್ಲೀಲ ವಿಡಿಯೊಗಳು ವೈರಲ್ ಆದ ಬಳಿಕ ಏಪ್ರಿಲ್ 27 ರಂದು ಅವರು ವಿದೇಶಕ್ಕೆ ತೆರಳಿದ್ದರು.
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಜ್ವಲ್ ಮೇ 30 ರಂದು ಮ್ಯೂನಿಚ್ ನಿಂದ ಬೆಂಗಳೂರಿಗೆ ವಿಮಾನವನ್ನು ಕಾಯ್ದಿರಿಸಿದ್ದು, ಶುಕ್ರವಾರ ಮುಂಜಾನೆ ಇಳಿಯುವ ನಿರೀಕ್ಷೆಯಿದೆ.
"ಅವರು ಮ್ಯೂನಿಚ್‌ನಿಂದ ಬೆಂಗಳೂರಿಗೆ ಲುಫ್ತಾನ್ಸಾ ಏರ್ಲೈನ್ಸ್‌ನಿಂದ ವಿಮಾನವನ್ನು ಕಾಯ್ದಿರಿಸಿದ್ದಾರೆ. ವಿಮಾನವು ಗುರುವಾರ ಮಧ್ಯಾಹ್ನ ಮ್ಯೂನಿಚ್‌ನಿಂದ ಹೊರಟು ಶುಕ್ರವಾರ ಬೆಳಿಗ್ಗೆ 12.05 ಕ್ಕೆ ಬೆಂಗಳೂರು ತಲುಪಲಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಕಳಂಕಿತ ಸಂಸದನನ್ನು ಬಂಧಿಸಲು ವಿಶೇಷ ತನಿಖಾ ತಂಡ (ಎಸ್ ಐಟಿ) ಸಿದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬುಧವಾರ (ಮೇ 29) ದೃಢಪಡಿಸಿದ್ದಾರೆ. ಪ್ರಜ್ವಲ್ ವಿರುದ್ಧ ವಾರಂಟ್ ಹೊರಡಿಸಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆತನನ್ನು ಬಂಧಿಸಬೇಕು. ಎಸ್ಐಟಿ ಕಾಯುತ್ತಿದೆ, ಎಸ್‌ಐಟಿ ಅವರನ್ನು ಬಂಧಿಸುತ್ತಾರೆ ಮತ್ತು ಅವರ ಹೇಳಿಕೆಯನ್ನು ತೆಗೆದುಕೊಳ್ಳುತ್ತಾರೆ. ಎಸ್‌ಐಟಿ ಅಧಿಕಾರಿಗಳಿಂದ ಎಲ್ಲ ಪ್ರಕ್ರಿಯೆಗಳು ಶುರುವಾಗುತ್ತದೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.
- ಪ್ರಜ್ವಲ್ ರೇವಣ್ಣ ಇತ್ತೀಚೆಗೆ ರಿಲೀಸ್ ಮಾಡಿದ್ದ ವಿಡಿಯೊ ಜರ್ಮನಿಯಿಂದ ಅಲ್ಲ ಬದಲಾಗಿ ಹಂಗೇರಿಯಾ ಬುಡಾಪೆಸ್ಟ್‌ನಿಂದ ಎಂಬುದನ್ನು ಎಸ್‌ಐಟಿ ಪತ್ತೆ ಹಚ್ಚಿದೆ
- ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ವಿಚಾರಣೆ ಗೈರಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪುನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮೇ 31ಕ್ಕೆ ಕಾಯ್ದಿರಿಸಿದೆ.
- ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆ, ಹೊಳೇನರಸೀಪುರ, ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಮೂರು ಪ್ರಕರಣಗಳು ದಾಖಲು
ಇದನ್ನೂ ಓದಿ: ಹಾಸನ ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್, ಧ್ವನಿ ಪರೀಕ್ಷೆ ನಡೆಸಲು ಎಸ್‌ಐಟಿ ಸಜ್ಜು, ಇನ್ನೂ 5 ವಿದ್ಯಮಾನಗಳ ವಿವರ
- ಈ ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಎಸ್‌ಐಟಿ ಬಂಧಿಸಲಿದೆ. ಈ ಬಂಧನವನ್ನು ತಪ್ಪಿಸಲು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಕೋರ್ಟ್ ಜಾಮೀನ ಅರ್ಜಿಯನ್ನು ವಜಾ ಗೊಳಿಸಿದೆ.
- ಮೇ 31ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿಗೆ ಆಗಮಿಸಿ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗುವುದಾಗಿ ವಿಡಿಯೊ ಮೂಲಕ ಮಾಹಿತಿ ನೀಡಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)