ಕನ್ನಡ ಸುದ್ದಿ  /  ಕರ್ನಾಟಕ  /  Shakthi Yojane: ಶಕ್ತಿ ಯೋಜನೆಯ ಅಧಿಸೂಚನೆ ಪ್ರಕಟ, ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್‌ ಕಾರ್ಡ್‌

Shakthi Yojane: ಶಕ್ತಿ ಯೋಜನೆಯ ಅಧಿಸೂಚನೆ ಪ್ರಕಟ, ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್‌ ಕಾರ್ಡ್‌

Shakthi Yojane: ಸಾರಿಗೆ ಸಂಸ್ಥೆಗಳ ಆಯ್ದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆಯ ಅಧಿಸೂಚನೆ ಸೋಮವಾರ (ಜೂ.5) ಪ್ರಕಟವಾಗಿದೆ. ಇದರ ವಿವರ ಇಲ್ಲಿದೆ.

ಸಾರಿಗೆ ಸಂಸ್ಥೆಗಳ ಆಯ್ದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆಯ ಅಧಿಸೂಚನೆ ಪ್ರಕಟ (ಸಾಂಕೇತಿಕ ಚಿತ್ರ)
ಸಾರಿಗೆ ಸಂಸ್ಥೆಗಳ ಆಯ್ದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆಯ ಅಧಿಸೂಚನೆ ಪ್ರಕಟ (ಸಾಂಕೇತಿಕ ಚಿತ್ರ) (HT Kannada)

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಶಕ್ತಿ ಯೋಜನೆ (Shakthi Yojane) ಜಾರಿಗೊಳಿಸುವ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ (Karnataka Govt) ಸೋಮವಾರ ಪ್ರಕಟಿಸಿದೆ.

ಈ ಅಧಿಸೂಚನೆಯ ಪ್ರಕಾರ, ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಾದರೆ ʻಶಕ್ತಿ ಸ್ಮಾರ್ಟ್‌ ಕಾರ್ಡ್‌ʼ (Shakti Smart Card) ಹೊಂದುವುದು ಕಡ್ಡಾಯ. ಕರ್ನಾಟಕ ರಾಜ್ಯದ ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ವಿದ್ಯಾರ್ಥಿನಿಯರು ಸೇರಿ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದು ಎಂದು ಅಧಿಸೂಚನೆ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್​ 2ರಂದು ಸಚಿವ ಸಂಪುಟ ಸಭೆಯ ಬಳಿಕ ಶಕ್ತಿ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಶಕ್ತಿ ಯೋಜನೆಯನ್ನು ಜೂನ್ 11ರಿಂದ ಶುರುಮಾಡುವುದಾಗಿ ಹೇಳಿದ್ದರು.

ಟ್ರೆಂಡಿಂಗ್​ ಸುದ್ದಿ

ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಆದರೆ,ಕೆಲವು ಷರತ್ತುಗಳನ್ನು ಅನ್ವಯಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಶಕ್ತಿ ಸ್ಮಾರ್ಟ್‌ ಕಾರ್ಡ್‌ ದೊರೆಯುವವರೆಗೆ ಉಚಿತ ಪ್ರಯಾಣ ಹೇಗೆ?

ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು.

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಉಚಿತ ಪ್ರಯಾಣದ ವೇಳೆ ಮಹಿಳೆಯರು ಗಮನಿಸಬೇಕಾದ ಅಂಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಆದರೆ, ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳು ಹಾಗೂ \ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಅಂದರೆ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್​ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್​ ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅದೇ ರೀತಿ, ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ ಇಲ್ಲ.

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಶೇ 50 ಆಸನಗಳನ್ನು ಪುರುಷರಿಗೆ ಮೀಸಲು ಇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.