ಕನ್ನಡ ಸುದ್ದಿ  /  Karnataka  /  Shivamogga Airport To Be Named Rastrakavi Kuvempu, Says Bs Yadiyurppa

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಪ್ರಧಾನಿ ನರೇಂದ್ರ ಮೋದಿಯಿಂದ ಫೆ. 17ಕ್ಕೆ ಉದ್ಘಾಟನೆ

Shivamogga Airport: ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ) (Verified Twitter)

ಶಿವಮೊಗ್ಗ: ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿಎಸ್‌ವೈ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಬರುವುದು ಖಚಿತವಾಗಿದೆ. ಅವರೇ ರಾಷ್ಟ್ರಕವಿ ಕುವೆಂಪು ಎಹಸರಿನ ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದರು.

ನೂತನ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಇಡಲಾಗುತ್ತದೆ. ವಿಶ್ವಮಾನವ ಸಂದೇಶ ಸಾರಿರುವ ಕುವೆಂಪು ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ನಿರ್ಣಯ ಮಾಡಲಾಗಿದ್ದು, ಈ ಕುರಿತು ನಾನೇ ಸದನದಲ್ಲಿ ಮಂಡಿಸುವೆ. ಅಧಿವೇಶನದ ತೀರ್ಮಾನವನ್ನು ಸರ್ವಾನುಮತದಿಂದ ನಿರ್ಣಯಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಮೊದಲು ನನ್ನ ಹೆಸರು ಇಡಬೇಕೆಂದು ಕೆಲವರು ತಿಳಿಸಿದ್ದರು. ಬಿಎಸ್‌ವೈ ಹೆಸರು ಬೇಡ, ಕುವೆಂಪು ಹೆಸರು ಇಡುವುದು ಸೂಕ್ತವೆಂದು ರಾಷ್ಟ್ರಕವಿ ಹೆಸರು ಇಡಲು ನಿಶ್ಚಿಯಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನಗಳ ಲ್ಯಾಂಡಿಂಗ್‌ ಸೇರಿದಂತೆ ಎಲ್ಲಾ ವ್ಯವಸ್ಥೆ ಇದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ವಸುದೈವ ಕುಟುಂಬಕಂ ತತ್ವ ಸಾರುವ ಕಾರ್ಯ ಮಾಡುತ್ತಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಬರವಣಿಗೆ ಮೂಲಕ ಸಾರಿದ್ದರು. ಅದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರು ಶ್ರಮಿಸುತ್ತಿದ್ದಾರೆ. ಕುವೆಂಪು ಅವರ ಹೆಸರನ್ನು ಇಡಬೇಕು ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪನವರ ಹೆಸರು ಇಡಬೇಕೆಂದು ಬಯಸಿತ್ತು. ಆದರೆ ಇದನ್ನು ಯಡಿಯೂರಪ್ಪ ನಿರಾಕರಿಸಿದ್ದರು. ಇದೀಗ ಮತ್ತೆ ತಮ್ಮ ಹೆಸರು ಬೇಡವೆಂದು ಹೇಳಿರುವ ಅವರು, ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಪ್ರವಾಸ ಕೈಗೊಂಡಿದ್ದಾರೆ. 140 ಸ್ಥಾನ ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುವೆ. ನನಗೆ 80 ವರ್ಷ ವಯಸ್ಸು ತುಂಬುತ್ತಿದೆ. ಈ ಚುನಾವಣೆ ಮತ್ತು ಮುಂದಿನ ಚುನಾವಣೆಯಲ್ಲಿ ಸಕ್ರೀಯವಾಗಿ ಭಾಗವಹಿಸುವೆ. ಎಲ್ಲರೂ ಯಡಿಯೂರಪ್ಪ ಎಂಬ ಘೋಷಣೆ ಕೇಳಿಬರುತ್ತಿದ್ದು, ಇದೊಂದು ಸವಾಲಾಗಿದ್ದು, ಸವಾಲು ಸ್ವೀಕರಿಸಿ ಜನರ ಬಳಿಗೆ ಹೋಗುವೆ. ಶ್ರಮವಹಿಸಿ ಪ್ರವಾಸ ಕೈಗೊಳ್ಳುವೆ. ಮತ್ತೆ ಬಿಜೆಪಿಗೆ ಗೆಲುವು ತರಲು ಪ್ರಯತ್ನಿಸುವೆ ಎಂದು ಅವರು ಹೇಳಿದರು.

ನಿನ್ನೆ ಕರಾವಳಿಗೆ ಆಗಮಿಸಿರುವ ಅಮಿತ್‌ ಶಾ ಅವರು ಕಾರ್ಯಕರ್ತರ ಸಭೆ ನಡೆಸಿದ್ದು, ಹಳ್ಳಿಗೆ ಪ್ರವಾಸ ಕೈಗೊಳ್ಳಲು ನನಗೆ ಸಲಹೆ ನೀಡಿದ್ದಾರೆ. ಅಧಿವೇಶನದ ಬಳಿಕ ಪ್ರವಾಸ ಆರಂಭಿಸುವೆ ಎಂದು ಅವರು ಹೇಳಿದ್ದಾರೆ.

ಬಿಡುವಿಲ್ಲದ ಪ್ರಧಾನಿ ನರೇಂದ್ರ ಮೋದಿಯ ಅಚ್ಚರಿಯ ದಿನಚರಿ

ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಕೇಂದ್ರ ನಾಯಕರುಗಳು, ವಿರೋಧ ಪಕ್ಷಗಳ ಪ್ರಮುಖ ನಾಯಕರು ಮತದಾರರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ನಿನ್ನೆಯಷ್ಟೇ ಅಮಿತ್‌ ಶಾ ಅವರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ ಏರ್‌ ಶೋ ಉದ್ಘಾಟಿಸಲಿದ್ದಾರೆ. ಅಂದಹಾಗೆ, ಕಳೆದ ಎರಡು ದಿನ ಸೇರಿದಂತೆ ನಾಲ್ಕು ದಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಡುವಿಲ್ಲದ ದಿನಚರಿ. ನಾಲ್ಕು ದಿನಗಳ ಕಾಲ ಇವರು ವಿವಿಧ ರಾಜ್ಯಗಳ 10 ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.

IPL_Entry_Point