ಕನ್ನಡ ಸುದ್ದಿ  /  ಕರ್ನಾಟಕ  /  Shivamogga News: ಕೆಳದಿ ಶಿವಪ್ಪನಾಯಕ ವಿವಿ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Shivamogga News: ಕೆಳದಿ ಶಿವಪ್ಪನಾಯಕ ವಿವಿ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Shivamogga: ಆನಂದಪುರಕ್ಕೆ ಸಮೀಪದ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ 8ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು.

ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಆನಂದಪುರಕ್ಕೆ ಸಮೀಪದ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ 8ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು.

ಇದೇ ವೇಳೆ ಮಾತನಾಡಿದ ಗೇಹ್ಲೋಟ್, ರಾಜ್ಯ ಕಂಡ ಧೀಮಂತ ನಾಯಕ, ಜನಪರ ಹೋರಾಟಗಾರ ಜನಹಿತ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಗೌರವ ಡಾಕ್ಟರೇಟ್ ಲಭಿಸಿರುವುದು ಸಂತಸದಾಯಕವಾದ ವಿಷಯ ಎಂದರು.

ಟ್ರೆಂಡಿಂಗ್​ ಸುದ್ದಿ

ಪದವಿ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಈ ನಾಡಿನ ಅನ್ನದಾತರು ಕಷ್ಟಪಡುತ್ತಿರುವುದನ್ನು ಕಂಡು ಅವರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ನನ್ನೆಲ್ಲಾ ಹೋರಾಟದ ಉದ್ದೇಶ ರೈತರ ಕಲ್ಯಾಣ, ರೈತರ ಸರ್ವತೋಮುಖ ಅಭಿವೃದ್ಧಿಗಾಗಿಯೇ ಪ್ರಮುಖವಾದುದಾಗಿತ್ತು. 70ರ ದಶಕದಲ್ಲಿ ತಾವು ನಡೆಸಿದ ಬಗರ್ ಹುಕುಂ ಹೋರಾಟ, ಸೈಕಲ್ ಯಾತ್ರೆ, ಪಾದಯಾತ್ರೆಯನ್ನು ಮೆಲಕು ಹಾಕಿದರು.

ವೇದಿಕೆಯಲ್ಲಿ ಕೃಷಿ ಸಚಿವ ಚೆಲುವರಾಯ ಸ್ವಾಮಿ, ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು, ಪ್ರಾಚಾರ್ಯರು ಹಾಜರಿದ್ದರು.

ಬದುಕಿನ ಬಹುಪಾಲು ರಾಜ್ಯದ ಅಭಿವೃದ್ಧಿ ಮತ್ತು ರೈತರ ಕಲ್ಯಾಣಕ್ಕಾಗಿ ಶ್ರಮಿಸಿದ, ಶ್ರಮಿಸುತ್ತಿರುವ, ನಮ್ಮ ತಂದೆಯವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ಸಂದಿರುವುದು ಹರ್ಷವನ್ನುಂಟು ಮಾಡಿದೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು.