ಕನ್ನಡ ಸುದ್ದಿ / ಕರ್ನಾಟಕ /
Shivamogga News: ರಾಗಿಗುಡ್ಡ ಪ್ರಕರಣ, ಎನ್‌ಕೌಂಟರ್ ನಡೆದಿಲ್ಲ; ಎಸ್‌ಪಿ ಸ್ಪಷ್ಟನೆ
ಸಾಮಾಜಿಕ ಜಾಲತಾಣದಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್‌ನಿಂದ ಮುಸ್ಲಿಂ ಯುವಕನ ಸಾವಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ರೀತಿ ಘಟನೆ ನಡೆದಿಲ್ಲ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ರಾಗಿಗುಡ್ಡ ಪ್ರಕರಣ, ಎನ್ ಕೌಂಟರ್ ನಡೆದಿಲ್ಲ; ಎಸ್‌ಪಿ ಸ್ಪಷ್ಟನೆ
ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ವೇಳೆ ಮುಸ್ಲಿಂ ಯುವಕನ ಎನ್ ಕೌಂಟರ್ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್‌ನಿಂದ ಮುಸ್ಲಿಂ ಯುವಕನ ಸಾವಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ರೀತಿ ಘಟನೆ ನಡೆದಿಲ್ಲ. ಸುಳ್ಳು ಸುದ್ಧಿಯನ್ನು ಹರಿಬಿಟ್ಟವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಲಭೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಗಾಯಗೊಂಡವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಒಟ್ಟು 12 ಜನ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 60 ಜನರನ್ನು ಬಂಧಿಸಲಾಗಿದೆ. ಮತ್ತು ಕೆಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು.
