ಕನ್ನಡ ಸುದ್ದಿ  /  Karnataka  /  Simple Gentleman Politician R Dhruvanarayan Is No More Tributes From Dignitaries Including Cm Bommai

R Dhruvanarayan: ಸರಳ ಸಜ್ಜನ ರಾಜಕಾರಣಿ ಆರ್ ಧ್ರುವನಾರಾಯಣ ಇನ್ನಿಲ್ಲ; ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಕಂಬನಿ

ಸರಳ ಹಾಗೂ ಸಜ್ಜನ ರಾಜಕಾರಣಿ ಅಂತಲೇ ಗುರುತಿಸಿಕೊಂಡಿದ್ದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರು ಕಂಬನಿ ಮಿಡಿದ್ದಾರೆ.

ಆರ್ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಆರ್ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸಜ್ಜನ ಹಾಗೂ ಸರಣ ರಾಜಕಾರಣಿ ಅಂತಲೇ ಗುರುತಿಸಿಕೊಂಡಿದ್ದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರು ಮೈಸೂರಿ ಖಾಸಗಿ ಆಸ್ಪತ್ರೆಯಲ್ಲಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಆರ್ ಧ್ರುವನಾರಾಯಣ ಅವರ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತ ತಂದಿದೆ. ಒರ್ವ ಉತ್ತಮ ರಾಜಕೀಯ ಪಟುವನ್ನು ಆ ಪಕ್ಷ ಕಳೆದುಕೊಂಡಂತಾಗಿದೆ. ಆರ್ ಧ್ರುವನಾರಾಯಣ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಕಂಬನಿ ಮಿಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಸಂತಾಪ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ ಎಂದು ಹೇಳಿದ್ದಾರೆ.

ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲು ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆರ್.ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ಸಂಸದ ಧೃವನಾರಾಯಣ್ ಅಂತ್ಯಕ್ರಿಯೆ

ಮಾಜಿ ಸಂಸದ ಧೃುವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧೃುವ ನಾರಾಯಣ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು. ಎರಡು ಬಾರಿ ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ ಅಭಿವೃದ್ಧಿ, ಪರಿಶಿಷ್ಟ ಜನಾಂಗದ ಬಗ್ಗೆ ಹಾಗೂ ಚಾಮರಾಜನಗರದ ಬಗ್ಗೆ ಶ್ರೇಷ್ಠ ಕಳಕಳಿ ವ್ಯಕ್ತಪಡಿಸುತ್ತಿದ್ದರು. ಒಳ್ಳೆ ಕೆಲಸ ಮಾಡಿದ್ದರು. ಅವರಿಗೆ ಹೃದಯಾಘಾತವಾಗಿ ಸಾವು ಉಂಟಾಗಿದ್ದು ಆಘಾತ ತಂದಿದೆ. ನಂಬಲಾಗುತ್ತಿಲ್ಲ. ಅತಿ ಕ್ರಿಯಾಶೀಲ ರಾಗಿ ಓಡಾಡುತ್ತಿದ್ದರು ಎಂದು ಹೇಳಿದ್ದಾರೆ.

IPL_Entry_Point