Sir M. V. Birth Anniversary: ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿ ಜಯಂತಿ - ಸಿಎಂ.ಬೊಮ್ಮಾಯಿ
Sir M. Visvesvaraya Birth Anniversary: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘ ಆಯೋಜಿಸಿದ್ದ ಅಭಿಯಂತರರ ದಿನ ಕಾರ್ಯಕ್ರಮದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್ ಎಂ.ವಿ. ಜಯಂತಿ ಆಚರಿಸಲಾಗುವುದು ಎಂದು ಹೇಳಿದರು.
ಬೆಂಗಳೂರು: ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದಲೇ ಜಿಲ್ಲಾ ಕೇಂದ್ರಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯನ್ನು ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಕೆ.ಆರ್.ವೃತ್ತದ ಬಳಿ ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘಗಳು ಆಯೋಜಿಸಿದ್ದ ಅಭಿಯಂತರರ ದಿನ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನವನ್ನು ಇಂಜಿನಿಯರ್ಸ್ ದಿನ ಎಂದು ಆಚರಿಸುತ್ತೇವೆ. ಈ ವರ್ಷ ಭಾರತ ಸರ್ಕಾರವೂ ಅಧ್ಯಯನ ಮಾಡಿ ಎಲ್ಲ ರಾಜ್ಯಗಳಲ್ಲಿ ಸರ್ಕಾರವೇ ಅಭಿಯಂತರರ ದಿನಾಚರಣೆ ಆಚರಿಸಲು ಸೂಚಿಸಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸರ್. ಎಂ. ವಿಶ್ವೇಶ್ವರಯ್ಯ ಅವರು ಕನ್ನಡನಾಡಿನ ಅತ್ಯಂತ ಹೆಮ್ಮೆಯ ಪುತ್ರ. ಅವರು ಸದಾ ಕಾಲ ನಮಗೆ ಪ್ರೇರಣೆ. ಕನ್ನಡ ನಾಡನ್ನು ಕಟ್ಟಿದ ಧೀಮಂತ ವ್ಯಕ್ತಿ ಅವರು. ಸರ್. ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿಯೇ ಸ್ಫೂರ್ತಿ ಇದೆ. 100 ವರ್ಷಕ್ಕಿಂತ ಹೆಚ್ಚು ಕಾಲ ಬಾಳಿ, ಬದುಕಿದ ಅವರ ಬದುಕಿನ ಪ್ರತಿ ಕ್ಷಣವೂ ನಾಡಿನ, ದೇಶನ ಅಭಿವೃದ್ಧಿ, ಜನರ ಒಳಿತಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು.
ಇಷ್ಟು ವೈವಿಧ್ಯಮಯ ಜ್ಞಾನ ಮತ್ತು ಬದ್ಧತೆ ಇರುವ ವ್ಯಕ್ತಿಗಳು ಬಹಳ ಕಡಿಮೆ. ನಿಜವಾದ ದೇಶಭಕ್ತರು, ನಾಡು ಕಟ್ಟಿದವರು ಅವರು. ಕೇವಲ ಅಣೆಕಟ್ಟುಗಳನ್ನು, ರಸ್ತೆಗಳನ್ನು ಮಾತ್ರ ನಿರ್ಮಾಣ ಮಾಡಲಿಲ್ಲ. ಇಂಧನ ಕ್ಷೇತ್ರದಲ್ಲಿಯೂ ಅವರ ಕೊಡುಗೆ ಅಪಾರ. ಬೃಹತ್ ಕಾರ್ಖಾನೆಗಳ ನಿರ್ಮಾಣವನ್ನು ಕೂಡ ಮಾಡಿದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯದ ಅಧೀನದಲ್ಲಿರುವ ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆ, ಸಿಮೆಂಟ್, ಕಾಗದ ಮುಂತಾದ ಕಾರ್ಖಾನೆಗಳನ್ನು ಮೈಸೂರು ಮಹಾರಾಜರ ಆಶ್ರಯದಲ್ಲಿ ಆರಂಭಿಸಿದರು. ಕೆ.ಆರ್.ಎಸ್ ಅಣೆಕಟ್ಟು ಕಟ್ಟಿ ನಮ್ಮ ಕಾವೇರಿ ಜಲಾನಯನ ಭಾಗದ ರೈತರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಬದ್ಧತೆಯನ್ನು ಸಹ ಮೆರೆದ ಅವರು ಹೆಣ್ಣುಮಕ್ಕಳಿಗೆ ವಿಶೇಷವಾಗಿ ಕಾಲೇಜುಗಳ ನಿರ್ಮಾಣ, ಮೀಸಲಾತಿ, ಆರ್ಥಿಕ ವಲಯದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪ್ರಾರಂಭಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಕ್ರಿಯಾಶೀಲತೆ ಮೆರೆದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
Sir M. Visvesvaraya Birth Anniversary: ಇಂದು ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ 161ನೇ ಜಯಂತಿ. ಈ ದಿನವನ್ನು ದೇಶದ ಇಂಜಿನಿಯರ್ ದಿನ ಎಂದು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏನ್ ಟ್ವೀಟ್ ಮಾಡಿದ್ದಾರೆ? ಇಲ್ಲಿದೆ ವಿವರ. Engineer’s Day 2022: ಪ್ರಧಾನಿ ಮೋದಿ, ಕರ್ನಾಟಕದ ಮುಖ್ಯಮಂತ್ರಿ ಏನು ಟ್ವೀಟ್ ಮಾಡಿದ್ದಾರೆ?
ಇಂದು ಇಂಜಿನಿಯರ್‌ಗಳ ದಿನ. ಅಭಿಯಂತರರ ದಿನ ಎಂದೂ ಅಚ್ಚಕನ್ನಡದಲ್ಲಿ ಹೇಳುತ್ತಾರೆ. ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮದಿನವೂ ಹೌದು. Engineers Day Quotes and Wishesಗಾಗಿ ಹುಡುಕುತ್ತಿದ್ದೀರಾ? ಇಲ್ಲಿವೆ ಡೌನ್‌ಲೋಡ್ ಮಾಡಿಕೊಳ್ಳಿ. Engineers Day Quotes and Wishes: ಇಂದು ಇಂಜಿನಿಯರ್ ದಿನ; ಸಿಂಪಲ್ ವಿಶಸ್ ಶೇರ್ ಮಾಡಬೇಕು ಅಂತಿದ್ದೀರಾ? ಇಲ್ಲೇ ಇವೆ ಡೌನ್‌ಲೋಡ್ ಮಾಡಿ
Sir M Visvesvaraya Birth Anniversary: ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನಕ್ಕೆ1955ರಲ್ಲಿ ಪಾತ್ರರಾದರು. ಭಾರತ ಸರ್ಕಾರವು ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ (Engineers' Day) ಎಂದು 1968 ರಲ್ಲಿ ಘೋಷಿಸಿತು. Engineers' Day 2022: ಇಂದು ಇಂಜಿನಿಯರ್ಸ್ ಡೇ- ಇತಿಹಾಸ ಮತ್ತು ಮಹತ್ವ; ನಮ್ಮ ನಾಡಿನ ಚಿರಸ್ಮರಣೀಯ ಸರ್ ಎಂ.ವಿಶ್ವೇಶ್ವರಯ್ಯನವರ ಜಯಂತಿ