Karnataka Rains: ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಗುಡುಗು, ಮಿಂಚು, ಬಿರುಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
Southern Hinterlands Rain: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿದೆ. ಒಂದಿಷ್ಟು ದಿನಗಳಿಂದ ಬಿಸಿಲಿನ ವಾತಾವರಣವಿದ್ದು, ಗುರುವಾರ ಕೆಲ ಭಾಗಗಳಲ್ಲಿ ಮಳೆಯಾಗಿತ್ತು. ಅಲ್ಲಲ್ಲಿ ಮೋಡ ಕವಿದ ವಾತಾವರಣವೂ ಇತ್ತು. ಇಂದು (ಆಗಸ್ಟ್ 11) ದಕ್ಷಿಣ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಗಾಲದಲ್ಲೂ ಬಿಸಿಲಿನ ತಾಪ ಜೋರಾಗಿಯೇ ಇದೆ. ಮಳೆಯ ಅಬ್ಬರ, ಮೋಡ ಕವಿದ ವಾತಾವರಣ, ಗುಡುಗು ಮಿಂಚು ಇದ್ಯಾವುದೋ ಇಲ್ಲದೇ ಮಳೆಗಾಲದ ಅನುಭವವೇ ಇಲ್ಲದಂತಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಕೆಲ ಹೊತ್ತು ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಮೋಡ ಕವಿದ ವಾತಾವರಣವಿದ್ದು, ಮಿಂಚು ಕಾಣಿಸಿತ್ತು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ವಿಭಾಗವಾದ ಐಎಂಡಿ ಬೆಂಗಳೂರು ಪ್ರಕಟಿಸಿದ ವರದಿಯ ಪ್ರಕಾರ ಇಂದು (ಆಗಸ್ಟ್ 11) ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇಂದಿನ ದಕ್ಷಿಣ ಒಳನಾಡಿನ ಹವಾಮಾನ ವರದಿ
ಶುಕ್ರವಾರ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆಯನ್ನೂ ನೀಡಿದೆ ಐಎಂಡಿ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ನಾಳೆಯ ಮಳೆ ವರದಿ ಹೀಗಿದೆ
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶನಿವಾರವೂ (ಆಗಸ್ಟ್ 12) ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತಮಕೂರಿನಲ್ಲಿ ಹಗುರ ಮಳೆಯಾಗಲಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಒಣಹವೆ ಇರಲಿದೆ.
ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆರಾಯ ಗುರುವಾರದಿಂದ ಕೆಲವೆಡೆ ಪ್ರತ್ಯಕ್ಷನಾಗಿದ್ದಾನೆ. ಉತ್ತರ ಭಾರತದ ಹಲವು ಕಡೆ ಮಳೆ ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದಲ್ಲೂ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ ಹವಾಮಾನ ಇಲಾಖೆ. ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 16ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ
South India Rain: ತಮಿಳುನಾಡಿನ ಹಲವೆಡೆ ನಾಳೆ ಭಾರಿ ಮಳೆಯ ಮುನ್ಸೂಚನೆ; ದಕ್ಷಿಣ ಭಾರತದ ಈ 4 ರಾಜ್ಯಗಳಲ್ಲಿ ಮತ್ತೆ ಮುಂಗಾರು ಕೊರತೆ
ಬೆಂಗಳೂರು: ತೆಲಂಗಾಣದಲ್ಲಿ (Telangana Rains) ಕಳೆದ ಕಳೆವು ದಿನಗಳಿಂದ ಮಳೆಯ ಕೊರತೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ಕೆಲವು ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.