Chamarajanagar News: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವ; ಫೋಟೊಸ್
- ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ನಡುವೆ ದಟ್ಟ ಕಾನನದಲ್ಲಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೊಸ್ ಇಲ್ಲಿದೆ.
- ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ನಡುವೆ ದಟ್ಟ ಕಾನನದಲ್ಲಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೊಸ್ ಇಲ್ಲಿದೆ.
(1 / 6)
ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.
(2 / 6)
ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿಯಾದರು. ನೆತ್ತಿ ಸುಡುತ್ತಿದ್ದ ಬಿರು ಬಿಸಿಲಿನ ನಡುವೆಯೂ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
(3 / 6)
ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕೈಂಕರ್ಯಗಳನ್ನು ಪರಂಪರೆಗೆ ಅನುಗುಣವಾಗಿ ಅರ್ಚಕ ವೃಂದ ನೆರವೇರಿಸಿ ಇಡೀ ವಿಶ್ವಕ್ಕೆ ಒಳಿತಾಗುವಂತೆ ಪ್ರಾರ್ಥಿಸಿದೆ.
(4 / 6)
ರಥವನ್ನು ವಿವಿಧ ಬಣ್ಣಗಳ ಬಾವುಟಗಳು ಹಾಗು ಹೂವುಗಳು, ತಳಿರು ತೋರಣಗಳನ್ನು ಕಟ್ಟಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 12.30ರ ಶುಭ ಘಳಿಗೆಯಲ್ಲಿ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
(5 / 6)
ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಗೋಪಾಲಸ್ವಾಮಿಗೆ ವಿವಿಧ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹಿನ್ನೆಲೆಯಲ್ಲಿ, ರಥೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.
ಇತರ ಗ್ಯಾಲರಿಗಳು