ಕನ್ನಡ ಸುದ್ದಿ  /  ಕರ್ನಾಟಕ  /  Mysuru Velodrome: ವಿಜಯಪುರದಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಅಪೂರ್ಣ, ಈಗ ಮೈಸೂರಲ್ಲಿ ನಿರ್ಮಾಣ

Mysuru velodrome: ವಿಜಯಪುರದಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಅಪೂರ್ಣ, ಈಗ ಮೈಸೂರಲ್ಲಿ ನಿರ್ಮಾಣ

Cycling ಕರ್ನಾಟಕದಲ್ಲಿ ಸೈಕ್ಲಿಂಗ್‌ ಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರೂಪಿಸಿರುವ ವೆಲೋಡ್ರೋಮ್‌ ಇನ್ನೂ ವಿಜಯಪುರದಲ್ಲಿ ಮುಗಿಯಬೇಕಿದೆ. ಮೈಸೂರಿನಲ್ಲೂ ಸೈಕ್ಲಿಂಗ್‌ ವೆಲೋಡ್ರೋಮ್‌ಗೆ ಜಾಗ ಗುರುತಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಾಣವಾಗಲಿದೆ.
ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಾಣವಾಗಲಿದೆ.

ಬೆಂಗಳೂರು: ವಿಜಯಪುರದಲ್ಲಿ ಹತ್ತು ವರ್ಷದಿಂದ ನಿರ್ಮಾಣ ಹಂತದಲ್ಲೇ ಇರುವ ಸೈಕ್ಲಿಂಗ್‌ ವೆಲೋಡ್ರೋಂ ಕೆಲಸವೇ ಇನ್ನೂ ಮುಗಿದಿಲ್ಲ. ಕಾಮಗಾರಿ ಮುಗಿಸಲು ಇನ್ನೂ ಗಡುವು ವಿಸ್ತರಿಸಲೇ ಬರಲಾಗುತ್ತಿದೆ. ಸೈಕ್ಲಿಂಗ್‌ ಕಾಶಿ ಎಂದೇ ಹೆಸರು ಪಡೆದಿರುವ ವಿಜಯಪುರಕ್ಕೆ ಸೈಕ್ಲಿಂಗ್‌ ವೆಲೋಡ್ರೋಂ ಬೇಕೇ ಬೇಕು. ಬೇಗನೇ ಕೆಲಸ ಮುಗಿಸಿ ಸೈಕ್ಲಿಸ್ಟ್‌ಗಳ ಬಳಕೆಗೆ ಒದಗಿಸಬೇಕು ಎನ್ನುವ ಬೇಡಿಕೆ ಇದೆ. ಇದರ ನಡುವೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ ಮೈಸೂರಿನಲ್ಲೂ ಸೈಕ್ಲಿಂಗ್‌ ವೆಲೋಡ್ರೋಂ ಸ್ಥಾಪಿಸುವ ಕುರಿತು ಚರ್ಚೆಗಳು ನಡೆದಿವೆ. ಮೈಸೂರಿನವರೇ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬೇಗನೇ ಕೆಲಸ ಶುರು ಮಾಡುವಂತೆಯೂ ಸೂಚನೆ ನೀಡಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಹಲವಾರು ವಿಷಯಗಳು ಚರ್ಚೆಗೆ ಬಂದವು.

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು. ಕೂಡಲೇ ಜಾಗ ಗುರುತಿಸಿ ಕೆಲಸ ಆರಂಭಿಸಬೇಕು ಎನ್ನುವ ಸೂಚನೆಯನ್ನು ನೀಡಲಾಯಿತು.

ಟ್ರೆಂಡಿಂಗ್​ ಸುದ್ದಿ

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ಆಯುಕ್ತ ಶಶಿಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

• ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

• 174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತ ಶಶಿಕುಮಾರ್‌ ತಿಳಿಸಿದರು.

• ಕಂಠೀರವ ಕ್ರೀಡಾಂಗಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣ ಕುರಿತಂತೆ ಯಾವುದೇ ಕ್ರಮ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.

• ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸಬೇಕು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ ಒಂಬತ್ತು ಘೋಷಣೆಗಳ ಪೈಕಿ ಎಂಟು ಘೋಷಣೆಗಳ ಕುರಿತು ಸರ್ಕಾರಿ ಆದೇಶವಾಗಿದ್ದು, ಒಂದು ಆದೇಶ ಮುಖ್ಯಮಂತ್ರಿಯವರ ಅನುಮೋದನೆಗೆ ಕಡತ ಸಲ್ಲಿಸಲಾಗಿದೆ ಎಂದು ತಿಳಿಸಲಾಯಿತು.