Sri Charukeerthi Bhattarak Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಕನ್ನಡ ಸುದ್ದಿ  /  ಕರ್ನಾಟಕ  /  Sri Charukeerthi Bhattarak Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Sri Charukeerthi Bhattarak Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Sri Charukeerthi Bhattarak Swamiji: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತರಾಗಿದ್ಧಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (Sri Charukeerthi Bhattarak Swamiji) ಅಸ್ತಂಗತರಾಗಿದ್ಧಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.

ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಕಳೆದ ನಾಲ್ಕು ತಿಂಗಳಿನಿಂದ ಅನಾರೋಗ್ಯದಿಂದ ಬಳಲಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರುಪೇರಿನಿಂದಾಗಿ ಅಸ್ವಸ್ಥಗೊಂಡು ಸ್ವಾಮೀಜಿಯವರು ಕುಸಿದು ಬಿದ್ದಿದ್ದರು. ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಅನಾರೋಗ್ಯ ಹೆಚ್ಚಾದ ಕಾರಣ ಅವರನ್ನು ಮಠದಿಂದ ಆಂಬ್ಯುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಸ್ವಾಮೀಜಿಯವರು ವಿಧಿವಶರಾದ ವಿಚಾರ ತಿಳಿದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬೆಳ್ಳೂರು ಆಸ್ಪತ್ರೆ ಕಡೆಗೆ ಹೊರಟಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ʻಕರ್ಮಯೋಗಿʼ ಎಂಬ ಬಿರುದೂ ಪಡೆದಿದ್ದರು. ಶ್ರವಣ ಬೆಳಗೊಳದಲ್ಲಿ ನಡೆದ ನಾಲ್ಕು ಮಹಾಮಸ್ತಕಾಭಿಷೇಕ ಇದೇ ಶ್ರೀಗಳ ಉಸ್ತುವಾರಿಯಲ್ಲಿ ನೆರವೇರಿತ್ತು. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಯವರಿಗೆ ಅಪಾರ ಶಿಷ್ಯವರ್ಗವಿದೆ.

ಶ್ರೀಗಳು 1949ರ ಮೇ 3ರಂದು ಜನಿಸಿದ್ದರು. ಶ್ರೀ ಮಠದ ಪೀಠಾಧಿಪತಿಗಳಾಗಿ 1970ರಲ್ಲಿ ನೇಮಕಗೊಂಡಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದ ಅವರು ಬಳಿಕ ಮೈಸೂರು ವಿವಿಯಲ್ಲಿ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

"ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.

ಸುದ್ದಿ ಅಪ್ಡೇಟ್‌ ಆಗುತ್ತಿದೆ.

Whats_app_banner