ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ; ಕರ್ನಾಟಕ ಶಾಲಾ ಪರೀಕ್ಷಾ ಮಂಡಲಿ ಅಧ್ಯಕ್ಷರ ಸ್ಪಷ್ಟನೆ
ಕನ್ನಡ ಸುದ್ದಿ  /  ಕರ್ನಾಟಕ  /  ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ; ಕರ್ನಾಟಕ ಶಾಲಾ ಪರೀಕ್ಷಾ ಮಂಡಲಿ ಅಧ್ಯಕ್ಷರ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ; ಕರ್ನಾಟಕ ಶಾಲಾ ಪರೀಕ್ಷಾ ಮಂಡಲಿ ಅಧ್ಯಕ್ಷರ ಸ್ಪಷ್ಟನೆ

SSLC Question paper: ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸದಲ್ಲಿ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯ ಅಧ್ಯಕ್ಷರಿಂದ ಸ್ಪಷ್ಠೀಕರಣ ಬಂದಿರುವುದಾಗಿ ಕರ್ನಾಟಕ ವಾರ್ತಾ ಇಲಾಖೆ ತಿಳಿಸಿದೆ. ಅದರ ವಿವರ ಇಲ್ಲಿದೆ.

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. (ಸಾಂಕೇತಿಕ ಚಿತ್ರ)
ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ವಿನ್ಯಾಸ ಬದಲಾವಣೆ ಕುರಿತು ತೀರ್ಮಾನ ಆಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. (ಸಾಂಕೇತಿಕ ಚಿತ್ರ) (HT News )

SSLC Question paper: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ವಿನ್ಯಾಸ ಬದಲಾವಣೆ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ಸ್ಪಷ್ಟಪಡಿಸಿರುವುದಾಗಿ ಕರ್ನಾಟಕ ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ. 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಲಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ತಿಳಿಸಿದ್ದಾಗಿ ವಾರ್ತಾ ಇಲಾಖೆ ಹೇಳಿದೆ.

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ ಯಾವಾಗ

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ ಕುರಿತು ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ತಿಳಿಸಿದ್ದಾಗಿ ವಾರ್ತಾ ಇಲಾಖೆ ತಿಳಿಸಿದೆ.

ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ, ಬ್ಲೂ ಪ್ರಿಂಟ್ ಬಿಡುಗಡೆ ವರದಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) 2024-25ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗಳನ್ನು ಪ್ರಕಟಿಸಿದೆ. ಅಷ್ಟೇ ಅಲ್ಲ ಈ ಪರಿಷ್ಕರಣೆಗಳ ರೂಪರೇಖೆಯನ್ನು (ಬ್ಲೂಪ್ರಿಂಟ್‌) ಬಿಡುಗಡೆ ಮಾಡಿದೆ ಎಂದು ದ ಹಿಂದೂ ವರದಿ ಮಾಡಿತ್ತು. ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆಗಳಲ್ಲಿ ಈ ರೀತಿ ಬದಲಾವಣೆ ಈ ಹಿಂದೆ 2019-20ರಲ್ಲಿ ಆಗಿತ್ತು. ಅದಾಗಿ 14 ವರ್ಷಗಳ ಬಳಿಕ ಈಗ ಮತ್ತೊಮ್ಮೆ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆಗೆ ಕೆಎಸ್‌ಇಎಬಿ ಮುಂದಾಗಿದೆ ಎಂದು ದ ಹಿಂದೂ ವರದಿ ಮಾಡಿತ್ತು.

"ಪ್ರಮುಖ ಪರಿಕಲ್ಪನೆಗಳ ಮೇಲೆ ಗಮನ ಕೇಂದ್ರೀಕರಿಸಿ, ಪ್ರತ್ಯೇಕ ಅಧ್ಯಾಯಗಳಿಗಿಂತ ಥೀಮ್‌ಗಳ ಆಧಾರದ ಮೇಲೆ ಈ ಬಾರಿ ಅಂಕಗಳನ್ನು ನೀಡಲಾಗುತ್ತದೆ. ಗುಣಾತ್ಮಕ ಕಲಿಕೆಯನ್ನು ಸುಧಾರಿಸಲು ಮತ್ತು ಕಂಠಪಾಠದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಈ ವಿಧಾನವನ್ನು ವಿನ್ಯಾಸಗೊಳಿಸಲಾಗಿದೆ. ಉದಾಹರಣೆಗೆ, ಭಾಷಾ ಪತ್ರಿಕೆಗಳಲ್ಲಿನ ವಿಷಯಗಳು ಗದ್ಯ, ಕವನ ಮತ್ತು ವ್ಯಾಕರಣವನ್ನು ಒಳಗೊಂಡಿರಬಹುದು. ಆದರೆ ಮುಖ್ಯ ವಿಷಯದ ಪತ್ರಿಕೆಗಳು ಬಹು ಪಾಠಗಳನ್ನು ಸಂಯೋಜಿಸುವ ಪಾಠಗಳನ್ನು ಒಳಗೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಹೇಳಿದ್ದಾಗಿ ದ ಹಿಂದೂ ವರದಿ ವಿವರಿಸಿತ್ತು.

Whats_app_banner