ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ವಿವರ
ಕನ್ನಡ ಸುದ್ದಿ  /  ಕರ್ನಾಟಕ  /  ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ವಿವರ

ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ವಿವರ

ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಶಿಬುಲಾಲ್ ಮತ್ತು ಕುಮಾರಿ ಶಿಬುಲಾಲ್ ಸ್ಥಾಪಿಸಿದ ಸರೋಜಿನಿ ದಾಮೋದರನ್ ಫೌಂಡೇಶನ್ ಮೂಲಕ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ (ಸಾಂಕೇತಿಕ ಚಿತ್ರ)
ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ (ಸಾಂಕೇತಿಕ ಚಿತ್ರ) (HT)

ಬೆಂಗಳೂರು: 2025ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‌ಡಿಎಫ್ -Sarojini Damodaran Foundation) ಕೊಡಮಾಡುವ ವಿದ್ಯಾಧನ್ ವಿದ್ಯಾರ್ಥಿವೇತನ 2025 (Vidyadhan Scholarship 2025)ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬಹುದು.

ಈ ಉಪಕ್ರಮವು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿ ಹೊಂದಿದೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ಬೆಂಬಲ ನೀಡುವ ಸಲುವಾಗಿ ಮಾರ್ಗದರ್ಶನ, ಸಾಫ್ಟ್ ಸ್ಕಿಲ್‌ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನದೊಂದಿಗೆ ಆರ್ಥಿಕ ಸಹಾಯ ನೀಡುತ್ತದೆ.

ಯಶಸ್ವಿಯಾಗಿ ಅರ್ಜಿ ಸಲ್ಲಿಸಿದವರಿಗೆ ಪಿಯುಸಿ ಅಧ್ಯಯನಕ್ಕೆ ವರ್ಷಕ್ಕೆ 10,000 ರೂ. ವಿದ್ಯಾರ್ಥಿವೇತನ ಸಿಗುತ್ತದೆ. ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಪದವಿ ಕೋರ್ಸ್‌ಗಳಿಗೆ ವಾರ್ಷಿಕವಾಗಿ ರೂ. 15,000 ರಿಂದ ರೂ. 75,000 ವರೆಗಿನ ಬೆಂಬಲ ಸಿಗುತ್ತದೆ.

ಅರ್ಹತಾ ಮಾನದಂಡಗಳು

  • ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಎಲ್ಲಾ ವಿಷಯಗಳಲ್ಲಿ ಕನಿಷ್ಠ 90 ಶೇ. ಫಲಿತಾಂಶ ಅಥವಾ ಎ+ ಗ್ರೇಡ್ ಇರಬೇಕು. ವಿಕಲಚೇತನ ವಿದ್ಯಾರ್ಥಿಗಳಿಗೆ 75 ಶೇ. ಇರಬೇಕು.
  • ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂ.ಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಕೆ ವಿವರ

ಆನ್‌ಲೈನ್ ಅರ್ಜಿಗಳನ್ನು http://www.vidyadhan.org ಮೂಲಕ ಅಥವಾ SDF ವಿದ್ಯಾ ಅಪ್ಲಿಕೇಶನ್ (ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ) ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 19ರಿಂದ ಜುಲೈ 08ರವರೆಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗೆ ವಿದ್ಯಾರ್ಥಿಗಳು ವಿದ್ಯಾಧನ್ ಸಹಾಯವಾಣಿ +91 8068333500 ಅನ್ನು ಸಂಪರ್ಕಿಸಬಹುದು. vidyadhan.karnataka@sdfoundationindia.com ಮೂಲಕವೂ ಮಾಹಿತಿ ಪಡೆಯಬಹುದು.

1999ರಲ್ಲಿ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಮತ್ತು ಮಾಜಿ ಸಿಇಒ ಎಸ್.ಡಿ. ಶಿಬುಲಾಲ್ ಮತ್ತು ಕುಮಾರಿ ಶಿಬುಲಾಲ್ ಅವರಿಂದ ಸ್ಥಾಪಿಸಲ್ಪಟ್ಟ ಸರೋಜಿನಿ ದಾಮೋದರನ್ ಫೌಂಡೇಶನ್ ಮೂಲಕ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 50,000 ಕ್ಕೂ ಹೆಚ್ಚು ವಿದ್ಯಾರ್ಥಿವೇತನ ನೀಡಿದೆ. 2014ರಿಂದ ಕರ್ನಾಟಕದಲ್ಲಿ ಸ್ಕಾಲರ್‌ಶಿಪ್‌ ನೀಡಲಾಗುತ್ತಿದ್ದು, ಕರ್ನಾಟಕದಲ್ಲಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿವೇತನ ಪಡೆದಿದ್ದಾರೆ.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.