ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್ ಸಲ್ಲಿಕೆ; ಹೊಸ ಜಾಮೀನು ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ-submission of 1652 page 2nd chargesheet against prajwal revanna his files fresh bail application heard on sep 12 prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್ ಸಲ್ಲಿಕೆ; ಹೊಸ ಜಾಮೀನು ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್ ಸಲ್ಲಿಕೆ; ಹೊಸ ಜಾಮೀನು ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ

Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ ಎರಡನೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇದೇ ವೇಳೆ ಪ್ರಜ್ವಲ್​ ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಸೆಪ್ಟೆಂಬರ್‌ 12ರಂದು ನಡೆಯಲಿದೆ. (ವರದಿ- ಎಚ್​ ಮಾರುತಿ)

ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್ ಸಲ್ಲಿಕೆ; ಹೊಸ ಜಾಮೀನು ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ
ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್ ಸಲ್ಲಿಕೆ; ಹೊಸ ಜಾಮೀನು ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 113 ಸಾಕ್ಷ್ಯಗಳನ್ನು ಒಳಗೊಂಡ ಒಟ್ಟು 1652 ಪುಟಗಳ ಎರಡನೇ ದೋಷಾರೋಪಣ ಪಟ್ಟಿಯನ್ನು ಸೆಪ್ಟೆಂಬರ್ 9ರ ಸೋಮವಾರ ಸಲ್ಲಿಸಲಾಗಿದೆ. ಈ ಪ್ರಕರಣ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ವಿಶೇಷ ತನಿಖಾ ದಳವು (ಎಸ್‌ಐಟಿ) ಬೆಂಗಳೂರಿನ ಸಿಸಿಹೆಚ್-42 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

113 ಸಾಕ್ಷಿದಾರರು, ಸಂತ್ರಸ್ಥೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರ ಹೇಳಿಕೆಗಳು, ಹಲವು ಕಡೆ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ಥಳ ಮತ್ತು ಅಮಾನತು ಮಹಜರ್ ಕ್ರಮಗಳನ್ನು ಜರುಗಿಸಿ ಜೈವಿಕ, ಭೌತಿಕ, ವೈಜ್ಞಾನಿಕ, ಮೊಬೈಲ್, ಡಿಜಿಟಲ್ ಹಾಗೂ ಇತರೆ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಯಿತು. ನಂತರ ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಪ್ರಯೋಗಾಲಯ ತಜ್ಞರ ಪರೀಕ್ಷಾ ವರದಿಗಳನ್ನು ಸ್ವೀಕರಿಸಿ, ತಜ್ಞರ ಅಭಿಪ್ರಾಯಗಳನ್ನು ಪಡೆದು ದೋಷಾರೋಪಣ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಎಸ್​ಐಟಿ ತಿಳಿಸಿದೆ.

ಮೊದಲ ಚಾರ್ಜ್​​ಶೀಟ್​ನಲ್ಲಿ 2,144 ಪುಟ

ಆಗಸ್ಟ್ 23 ರಂದು 123 ಸಾಕ್ಷ್ಯಗಳ 2,144 ಪುಟಗಳ ಮೊದಲ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ಹಿಂಸೆ ಮತ್ತು ದೌರ್ಜನ್ಯದ ಖಾಸಗಿ ವಿಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಲ್ಲದೇ, ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿತ್ತು.

ಈ ಕಿರುಕುಳದ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿಯುಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ಹಾಗೂ ಆರೋಪಿಯ ವಿರುದ್ಧ ಕಠಿಣ ಕ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿತ್ತು.

ಈ ಲೈಂಗಿಕ ದೌರ್ಜನ್ಯ ಕುರಿತು ಸಿಐಡಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ನಂತರ ಸಮಗ್ರ ತನಿಖೆಗಾಗಿ ಹಾಗೂ ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ಏಪ್ರಿಲ್ 28 ರಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಪ್ರಜ್ವಲ್‌ ಜಾಮೀನು ಅರ್ಜಿ ವಿಚಾರಣೆ ಸೆ. 12ಕ್ಕೆ ಮುಂದೂಡಿಕೆ

ಈ ಮಧ್ಯೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸೆಪ್ಟೆಂಬರ್‌ 12ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ನಡೆಸಿತು. ಗೌಪ್ಯ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಆದೇಶ ಪಡೆಯಲಾಗುವುದು ಎಂದು ಅವರು ಮತ್ತೊಮ್ಮೆ ತಿಳಿಸಿದ್ದಾರೆ. ಸಂತ್ರಸ್ತೆಯರ ಖಾಸಗಿತನವನ್ನು ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕೋರಿತ್ತು. ಈ ಮನವಿಯನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಭರವಸೆ ನೀಡಿತ್ತು.

ಪ್ರಜ್ವಲ್‌ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ನಮಗೆ ಆರೋಪ ಪಟ್ಟಿ ನೀಡಬೇಕು ಎಂದು ಮನವಿ ಮಾಡಿಕೊಂಡರು. ವಿಚಾರಣಾಧೀನ ನ್ಯಾಯಾಲಯ ಪರಿಗಣಿಸಿದ ಬಳಿಕ ನಿಮಗೆ ಆರೋಪ ಪಟ್ಟಿ ನೀಡುವುದಾಗಿ ಪೀಠ ಹೇಳಿದೆ. ಪ್ರಜ್ವಲ್‌ ರೇವಣ್ಣ ಹೊಸದಾಗಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯೂ ಸೆಪ್ಟೆಂಬರ್​ 12 ರಂದು ನಡೆಯಲಿದೆ.

ಪ್ರಜ್ವಲ್ ಅವರಿಂದ ಶೋಷಣೆಗೊಳಗಾದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ಜಾಮೀನು ನೀಡಲಾಗಿದೆ. ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಹೊಳೆನರಸೀಪುರದ ಮನೆಯಲ್ಲಿ ನಿರಂತರವಾಗಿ ಮತ್ತು ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿದ್ದಾರೆ. ಸಂತ್ರಸ್ತೆಯನ್ನು ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ. ಹೊಳೆನರಸೀಪುರದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಎಸಗಿದ್ದಾರೆ ಎಂದೂ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಮತದಾನ ಮಾಡಿದ ಬಳಿಕ ಪ್ರಜ್ವಲ್ ಜರ್ಮನಿಗೆ ಹೋಗಿದ್ದರು. ಅವರು ಮೇ 30 ರಂದು ಮಧ್ಯರಾತ್ರಿ ಆಗಮಿಸಿದಾಗ ಅವರನ್ನು ಎಸ್ಐಟಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು. ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಪ್ರಜ್ವಲ್ ಅವರ ಲೈಂಗಿಕ ಶೋಷಣೆಯ ವಿಡಿಯೋ ಬಹಿರಂಗಗೊಂಡಿತ್ತು. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರಭಾವಗೊಂಡಿದ್ದರು. ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 40 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದರು.

mysore-dasara_Entry_Point