DK Shivakumar: ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ : ಡಿಸಿಎಂ ಡಿಕೆಶಿ ನಿರಾಳ, ಹೈಕೋರ್ಟ್‌ ನಲ್ಲಿ ಇಂದು ವಿಚಾರಣೆ ಮುಂದುವರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Dk Shivakumar: ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ : ಡಿಸಿಎಂ ಡಿಕೆಶಿ ನಿರಾಳ, ಹೈಕೋರ್ಟ್‌ ನಲ್ಲಿ ಇಂದು ವಿಚಾರಣೆ ಮುಂದುವರಿಕೆ

DK Shivakumar: ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ : ಡಿಸಿಎಂ ಡಿಕೆಶಿ ನಿರಾಳ, ಹೈಕೋರ್ಟ್‌ ನಲ್ಲಿ ಇಂದು ವಿಚಾರಣೆ ಮುಂದುವರಿಕೆ

ಡಿಕೆ ಶಿವಕುಮಾರ್​ ವಿರುದ್ಧ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆಶಿ​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಸಿಬಿಐ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶವಿಲ್ಲ ಎಂದು ತಿಳಿಸಿದೆ.

ಡಿಕೆಶಿ ವಿರುದ್ದದ ಪ್ರಕರಣವನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.
ಡಿಕೆಶಿ ವಿರುದ್ದದ ಪ್ರಕರಣವನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಹೊಸದಿಲ್ಲಿ:ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ದೊರೆತಿದೆ.

ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಉಲ್ಲೇಖಿಸಿದೆ. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಇದೇ ವಿಚಾರವಾಗಿ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ಮುಂದುವರಿಯಲಿದೆ. ಸೋಮವಾರ ಮಧ್ಯಾಹ್ನ ಈ ಸಂಬಂಧದ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಮೂಲಗಳು ಖಚಿತಪಡಿಸಿವೆ. ನಾಲ್ಕು ದಿನದ ಹಿಂದೆಯಷ್ಟೇ ಡಿಕೆಶಿ ಪರ ವಕೀಲರು ಹೈಕೋರ್ಟ್‌ನಲ್ಲಿ ವಿಚಾರ ಮಂಡಿಸಿದ್ದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಡಿಕೆಶಿ ಹಾಗೂ ಅವರ ಕುಟುಂಬದ ಸದಸ್ಯರು ನಿರೀಕ್ಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎರಡು ವರ್ಷದ ಹಿಂದೆ ದಾಳಿ ನಡೆಸಿತ್ತು.ಡಿಕೆಶಿ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಆನಂತರ ಈ ಕುರಿತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದು ತಡೆಯಾಜ್ಞೆ ನೀಡಲಾಗಿತ್ತು, ಆದರೆ ಸಿಬಿಐ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

Whats_app_banner