ಕನ್ನಡ ಸುದ್ದಿ  /  ಕರ್ನಾಟಕ  /  Hosadurga: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಉಚಿತ ಯೋಜನೆಗಳನ್ನ ಟೀಕಿಸಿ ಫೇಸ್‌ಬುಕ್‌ನಲ್ಲಿ ಬರಹ; ಶಿಕ್ಷಕ ಅಮಾನತು

Hosadurga: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಉಚಿತ ಯೋಜನೆಗಳನ್ನ ಟೀಕಿಸಿ ಫೇಸ್‌ಬುಕ್‌ನಲ್ಲಿ ಬರಹ; ಶಿಕ್ಷಕ ಅಮಾನತು

ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳನ್ನು ಟೀಕಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಹೊಸದುರ್ಗ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳನ್ನು ಟೀಕಿಸಿ ಎಫ್‌ಬಿನಲ್ಲಿ ಪೋಸ್ಟ್ ಮಾಡಿದ್ದ ಹೊಸದುರ್ಗ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳನ್ನು ಟೀಕಿಸಿ ಎಫ್‌ಬಿನಲ್ಲಿ ಪೋಸ್ಟ್ ಮಾಡಿದ್ದ ಹೊಸದುರ್ಗ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 2,42,000 ಕೋಟಿ ಸಾಲ ಮಾಡಿದ್ದಾರೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತು (Govt Teacher Suspend) ಮಾಡಲಾಗಿದೆ.

ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ (Hosadurga) ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಶಾಲೆಯ ಶಾಂತಮೂರ್ತಿ ಎಂಜಿ ಎಂಬುವರೇ ಸಸ್ಪೆಂಡ್ ಆಗಿರುವ ಶಿಕ್ಷಕ.

ಶಾಂತಮೂರ್ತಿ ಎಂಬಿ ಅವರ ಈ ನಡೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ಉಂಟಾಗಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತಮೂರ್ತಿಯನ್ನು ಅಮಾನತುಗೊಳಿಸಿರುವುದಾಗಿ ಹೊಸದುರ್ಗ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳು ರಾಜ್ಯಕ್ಕಾಗಿ ಮಾಡಿದ ಸಾಲ (ಕೋಟಿಗಳಲ್ಲಿ) ಎಂದು ಬರೆದುಕೊಂಡಿರುವ ಅಮಾನತ್ತಾಗಿರುವ ಶಿಕ್ಷಕ ಶಾಂತಮೂರ್ತಿ, ಎಸ್‌ಎಂ ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ 3,590 ಕೋಟಿ ರೂ., ಧರ್ಮಸಿಂಗ್ ಅವರ ಕಾಲದಲ್ಲಿ 15,635 ಕೋಟಿ ರೂ., ಎಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ 3,545 ಕೋಟಿ ರೂಪಾಯಿ, ಬಿಎಸ್ ಯಡಿಯೂರಪ್ಪ ಅವರು ಕಾಲದಲ್ಲಿ 25,653 ಕೋಟಿ ರೂಪಾಯಿ, ಸದಾನಂದ ಗೌಡ ಅವರ ಅವಧಿಯಲ್ಲಿ 9,464, ಜಗದೀಶ್ ಶೆಟ್ಟರ್ ಅಧಿಕಾರದ ಅವಧಿಯಲ್ಲಿ 13,464, ಸಿದ್ದರಾಮಯ್ಯ ಅವರ ಅವಧಿಯಲ್ಲಿ 2,42,000 ಕೋಟಿ ಸಾಲ ಮಾಡಲಾಗಿದೆ.

ಎಸ್‌ಎಂ ಕೃಷ್ಣ ಅವರಿಂದ ಹಿಡಿದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿಗಳು ಸಿದ್ದರಾಮಯ್ಯ ಅವರು ಮಾಡಿದ ಸಾಲ 2,42,000 ಕೋಟಿ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಶಿಕ್ಷಕ ಶಾಂತಮೂರ್ತಿ ಎಂಜಿ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ಪೋಸ್ಟ್‌ಅನ್ನು ಹಂಚಿಕೊಂಡ ನಂತರ ಅವರು ನಾಗರಿಕ ಸೇವಾ ನೀತಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೊಸದುರ್ಗ ಬಿಇಒ ಜಯಪ್ಪ ಅವರು ಶಿಕ್ಷಕನನ್ನು ಅಮಾನತು ಮಾಡಿದ್ದಾರೆ. ಅಲ್ಲದೆ, ಶಾಂತಮೂರ್ತಿ ಅವರ ಕಾರ್ಯವೈಖರಿ ಬಗ್ಗೆ ಇಲಾಖಾ ಮಟ್ಟದ ತನಿಗೂ ಆದೇಶಿಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಶನಿವಾರ (ಮೇ 20)ವಷ್ಟೇ ಸಿದ್ದರಾಮಯ್ಯದ ರಾಜ್ಯ ಮುಖ್ಯಮಂತ್ರಿಯಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ದಿನದಂದೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಚುನಾವಣೆಯಲ್ಲಿ ಹೇಳಿದ್ದ ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ಪಡೆದಿದ್ದು, ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಐದು ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

IPL_Entry_Point