ಕನ್ನಡ ಸುದ್ದಿ  /  Karnataka  /  Ten Minutes Yoga And Moral Education In Schools And Pu Colleges, Karnataka Govt Formed Committee

ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಯೋಗ ಮತ್ತು ನೈತಿಕ ಶಿಕ್ಷಣ, ಸಮಿತಿ ರಚಿಸಿ ಆದೇಶ ಹೊರಡಿಸಿದ ಸರಕಾರ

ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷಗಳ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಕುರಿತು ಕರ್ನಾಟಕ ಸರಕಾರ ನಡವಳಿ ಪ್ರಕಟಿಸಿದೆ.

ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಯೋಗ ಮತ್ತು ನೈತಿಕ ಶಿಕ್ಷಣ, ಸಮಿತಿ ರಚಿಸಿ ಆದೇಶ ಹೊರಡಿಸಿದ ಸರಕಾರ
ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಯೋಗ ಮತ್ತು ನೈತಿಕ ಶಿಕ್ಷಣ, ಸಮಿತಿ ರಚಿಸಿ ಆದೇಶ ಹೊರಡಿಸಿದ ಸರಕಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷಗಳ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಕುರಿತು ಕರ್ನಾಟಕ ಸರಕಾರ ನಡವಳಿ ಪ್ರಕಟಿಸಿದೆ. ಇದಕ್ಕಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಅನುಭವ ಇರುವ ತಜ್ಞರಿಂದ ವರದಿ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಐವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ. .

ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ಈ ಸಮಿತಿಗೆ ಡಾ. ಗುರುರಾಜ ಕರಜಗಿ ಅಧ್ಯಕ್ಷರಾಗಿದ್ದಾರೆ. ಇವರು ಅಕಾಡೆಮಿ ಫರ್‌ ಕ್ರಿಯೇಟಿವ್‌ ಟೀಚಿಂಗ್‌ ಟ್ರಸ್ಟ್‌ನ ಅಧ್ಯಕ್ಷರು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಪಿಜಿ ದ್ವಾರಕಾನಾಥ್‌ ಅವರು ಇದರ ಸದಸ್ಯರಾಗಿದ್ದಾರೆ. ವಿಭು ಅಕಾಡೆಮಿಯ ಡಾ. ವಿಬಿ ಆರತಿ, ಡ್ರೀಮ್‌ ಎ ಡ್ರೀಮ್‌ನ ಸಿಇಒ ಸುಚೇತಾ ಭಟ್‌, ಸೋಫಿಯಾ ಪ್ರೌಢಶಾಲೆಯ ಪ್ರಾಂಶುಪಾಲರಾದ ಸಿಸ್ಟರ್‌ ಅಲ್ಲನ ಎಸ್‌ಎನ್‌ಡಿ, ಚಿಕ್ಕಬ್ಳಾಪರು ಜಿಲ್ಲೆಯ ಬಾಗೇಪಲ್ಲಿ ಟೌನ್‌ನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಬಿ. ಅಮೀರ್‌ ಜಾನ್‌ ಅವರು ಸದಸ್ಯರಾಗಿದ್ದಾರೆ.

ಸದರಿ ಸಮಿತಿಯ ಬಗ್ಗೆ ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ನೀಡಲು ಕೋರಲಾಗಿದೆ. ಸದರಿ ಸಮಿತಿಯ ಸಭೆಯನ್ನು ಆಯೋಜಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಗತ್ಯ ಕ್ರಮವಹಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾಕೆ ನೈತಿಕ ಶಿಕ್ಷಣ ಮತ್ತು ಧ್ಯಾನ?

ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ, ಪ್ರದಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ವಿದ್ಯಾರ್ಥಿಗಳಿಗೆ ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದರಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಾಗಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳಲು ಸಹಕಾರಿಯಾಗುತ್ತದೆ. ಅಲ್ಲದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲ ಪ್ರವೃತ್ತಿ ವೃದ್ಧಿಯಾಗಲು ಧ್ಯಾನವು ಸಹಕಾರಿಯಾಗುತ್ತದ ವಿದ್ಯಾರ್ಥಿಯು ಶಾಲೆಯಲ್ಲಿ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಹಾಗೂ ಧ್ಯಾನವು ವಿದ್ಯಾರ್ಥಿಗಳ ಭೌತಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಧ್ಯಾನವನ್ನು ಶಾಲೆಗಳಿಗೆ ಅಳವಡಿಸಿಕೊಳ್ಳುವುದು ಸೂಕ್ತವಾಗಿರುತ್ತದೆ. ಇದರಿಂದಾಗಿ, ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪುಜೆಯಾಗಲು ಸಹಕಾರಿಯಾಗುತ್ತದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಬೋಧಿಸುವ ಅವಶ್ಯಕತೆ ಇರುತ್ತದೆ. ಈ ನೈತಿಕ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ, ಸಹನೆ, ಅನುಕಂಪ, ಸತ್ಯ, ನ್ಯಾಯ, ಸತ್ಕಾರಿತ್ರ್ಯ, ಅಹಿಂಸೆ, ಸಹಕರ, ಸಹೋದರತ್ವ, ಸಹಿಷ್ಣುತ ಮನೋಭಾವ ಇತ್ಯಾದಿ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ರೂಪಿಸುವುದು ನೈತಿಕ ಶಿಕ್ಷಣದ ಪ್ರಮುಖ ಕರ್ತವ್ಯವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಭೌಧಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಗುರಿಗಳನ್ನು ಹುಟ್ಟುಹಾಕಲು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉತ್ತಮನಾಗಕರನ್ನಾಗಿ ಮಾರ್ಪಾಡು ಮಾಡಲು ನೈತಿಕ ಶಿಕ್ಷಣವು ಸಹಕಾರಿಯಾಗುವುದರಿಂದ, ನೈತಿಕ ಶಿಕ್ಷಣವನ್ನು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸುವುದು ಸೂಕ್ತವಾಗಿರುತ್ತದೆ ಎಂದು ಸರಕಾರದ ನಡವಳಿಯಲ್ಲಿ ತಿಳಿಸಲಾಗಿದೆ.

IPL_Entry_Point