Karnataka News Live December 2, 2024 : Bangalore Metro 5G Service: ಬೆಂಗಳೂರು ಮೆಟ್ರೋ ರೈಲುಗಳಲ್ಲೂ ಸದ್ಯವೇ ಸಿಗಲಿದೆ 5ಜಿ ಸೇವೆ, ಟೆಂಡರ್ ಪ್ರಕ್ರಿಯೆ ಆರಂಭಿಸಿದ ನಮ್ಮ ಮೆಟ್ರೋ
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Mon, 02 Dec 202403:20 PM IST
- Bangalore Metro 5G Service: ಬೆಂಗಳೂರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ನೆಟ್‌ವರ್ಕ್ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುವುದು ಇನ್ನು ತಪ್ಪಲಿದೆ. 5ಜಿ ನೆಟ್‌ವರ್ಕ್ ಬಲಪಡಿಸಲು ಬಿಎಂಆರ್‌ಸಿಎಲ್ ಟೆಂಡರ್ ಅನ್ನು ಆಹ್ವಾನಿಸಿದೆ.
Mon, 02 Dec 202403:15 PM IST
- KSRP Constables Recruitment: ಕೆಎಸ್‌ಆರ್‌ಪಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಅವರು ಹೊಸ ಬೆಟಾಲಿಯನ್ ಆರಂಭಿಸವಂತೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
Mon, 02 Dec 202402:37 PM IST
- Karnataka Forest Sniffer Dogs: ಹಲವು ಹಿರಿಮೆಗಳ ಮೂಲಕ ಇಡೀ ಭಾರತದ ಗಮನ ಸೆಳೆದಿರುವ ಕರ್ನಾಟಕ ಅರಣ್ಯ ಇಲಾಖೆಯು ಹುಲಿ ಯೋಜಿತ ಪ್ರದೇಶಗಳಲ್ಲಿ ಶ್ವಾನದಳ ಬಳಕೆಗೆ ಪ್ರತ್ಯೇಕ ಶ್ವಾನದಳ ತರಬೇತಿ ಕೇಂದ್ರವನ್ನು ಬಂಡೀಪುರದಲ್ಲಿ ಆರಂಭಿಸಿದೆ. ಇದರ ವಿಶೇಷ ಇಲ್ಲಿದೆ.
Mon, 02 Dec 202401:32 PM IST
- School Holiday Due to Heavy Rain: ಮೈಸೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 3ರ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Mon, 02 Dec 202411:43 AM IST
- Kodagu Rain Updates: ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದಾಗಿ ಪದವಿಪೂರ್ವವರೆಗಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.
Mon, 02 Dec 202411:27 AM IST
- Pet Cat: ಬೆಂಗಳೂರಿನ ಫ್ಲ್ಯಾಟ್ವೊಂದರಲ್ಲಿ ಬೆಕ್ಕು ಮಲ ವಿಸರ್ಜನೆ ಮಾಡಿದ ಕಾರಣಕ್ಕೆ ಹಲ್ಲೆಗೈದ ಕಾರಣಕ್ಕೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mon, 02 Dec 202411:17 AM IST
- Tumkur Development Fund: ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಆಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಇಲ್ಲಿಯೇ ನಿರ್ಮಿಸಬೇಕು ಎನ್ನುವ ಬೇಡಿಕೆಯೂ ಕೇಳಿ ಬಂದಿದೆ.
Mon, 02 Dec 202409:00 AM IST
- Karntaka Rain Updates: ಕರ್ನಾಟಕದ ನಾನಾ ಭಾಗಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆ ಇರಲಿದೆ. ಮಂಗಳವಾರವೂ ಹಳೆ ಮೈಸೂರು ಭಾಗ, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆಯಿದೆ.
Mon, 02 Dec 202407:55 AM IST
- Karnataka 2nd PUC Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ಸೆಕೆಂಡ್ ಪಿಯುಸಿ ಎಕ್ಸಾಂ ನಡೆಯಲಿದೆ.
Mon, 02 Dec 202407:52 AM IST
- SSLC exam time table 2025 karnataka pdf download: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿಯನ್ನು kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷಾ ವೇಳಾಪಟ್ಟಿಯ ಪಿಡಿಎಫ್ ಪ್ರತಿ, ಪರೀಕ್ಷಾ ದಿನಗಳ ಮಾಹಿತಿ ಮತ್ತು ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.
Mon, 02 Dec 202406:48 AM IST
ಮೈಸೂರಿನಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಸೇರಬೇಕಾಗಿದ್ದ ಐಪಿಎಸ್ ಅಧಿಕಾರಿ, ಮಧ್ಯಪ್ರದೇಶ ಮೂಲದ ಹರ್ಷವರ್ಧನ್ ಅವರು ಭಾನುವಾರ ಸಂಭವಿಸಿದ ಹಾಸನ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಸನ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಯಾರು, ಅಪಘಾತದ ಕಾರಣ ಎಂಬಿತ್ಯಾದಿ ವಿವರ ಇಲ್ಲಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)
Mon, 02 Dec 202406:04 AM IST
BBMP Property Tax: ಬೆಂಗಳೂರಿನಲ್ಲಿ ಒನ್ ಟೈಮ್ ಸೆಟಲ್‌ಮೆಂಟ್ ಉಪಕ್ರಮದ ಮೂಲಕ ನವೆಂಬರ್ 30ರ ಹೊತ್ತಿಗೆ 4284 ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಿಬಿಎಂಪಿ ಸಂಗ್ರಹಿಸಿದೆ. ದಂಡ ಮತ್ತು ಬಡ್ಡಿ ಸಹಿತ ಆಸ್ತಿ ತೆರಿಗೆ ವಸೂಲಿ ಶುರುವಾಗಿದ್ದು, ಮಾರ್ಚ್ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ ಇಟ್ಟುಕೊಂಡಿದೆ. (ವರದಿ- ಎಚ್.ಮಾರುತಿ, ಬೆಂಗಳೂರು)
Mon, 02 Dec 202404:45 AM IST
Tumakuru Bus Accident: ತುಮಕೂರು ಶಿರಾ ಸಮೀಪ ಇಂದು (ಡಿಸೆಂಬರ್ 2) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.
Mon, 02 Dec 202403:33 AM IST
Cyclone Fengal: ಫೆಂಗಲ್ ಚಂಡಮಾರುತದ ಕಾರಣ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿಸೆಂಬರ್ 2) ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಏನಿದೆ ಪರಿಸ್ಥಿತಿ ಇಲ್ಲಿದೆ ಆ ವಿವರ.
Mon, 02 Dec 202402:26 AM IST
Cyclon Fengal: ಫೆಂಗಲ್ ಚಂಡಮಾರುತದ ಪರಿಣಾಮ ಇಂದು (ಡಿಸೆಂಬರ್ 2) ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ 14 ಜಿಲ್ಲೆಗಳಲ್ಲಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ. ಕರ್ನಾಟಕ ಹವಾಮಾನ ವಿವರ ಹೀಗಿದೆ.
Mon, 02 Dec 202402:00 AM IST
- HSRP Number Plate Deadline: ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಕರ್ನಾಟಕ ಸಾರಿಗೆ ಇಲಾಖೆಯ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆಯ ಅಂತಿಮ ಗಡುವು ಒಂದು ತಿಂಗಳು ಮುಂದೆ ಹೋಗಿದೆ. ಅದರ ವಿವರ ಇಲ್ಲಿದೆ.