Karnataka News Live January 10, 2025 : ಸರ್ಕಾರಿ ಸೌಲಭ್ಯ ನಿರಾಕರಿಸಿದ್ದಕ್ಕೆ ವೃದ್ಧ ಆತ್ಮಹತ್ಯೆ; ಕೇಂದ್ರ ಹಾಗೂ ಕರ್ನಾಟಕ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Fri, 10 Jan 202505:15 PM IST
- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದೆ.
Fri, 10 Jan 202504:11 PM IST
- ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ವಿರುಪಾಕ್ಷಿಪುರ ಗ್ರಾಮದಲ್ಲಿ ನಡೆದಿದೆ. (ವರದಿ: ಈಶ್ವರ್, ತುಮಕೂರು)
Fri, 10 Jan 202502:01 PM IST
ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ 13 ವರ್ಷದ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ತಾಯಿ ಇಲ್ಲದ ಸಮಯದಲ್ಲಿ ಡೇತ್ ನೋಟ್ ಬರೆದಿಟ್ಟು ಈ ಕೃತ್ಯವೆಸಗಿದ್ದಾನೆ ಎಂಬ ಮಾಹಿತಿ ಲಭಿಸಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fri, 10 Jan 202512:52 PM IST
Army Day 2025: ನಿಮ್ಮ ಸೇನೆ ಬಗ್ಗೆ ತಿಳ್ಕೊಳ್ಳಿ ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಸೇನೆ ಆಯೋಜಿಸಿದೆ. ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾರತೀಯ ಸೇನಾ ಪ್ರದರ್ಶನ ನಾಳೆ ನಡೆಯಲಿದ್ದು, ಏನೇನಿರುತ್ತೆ ಕಾರ್ಯಕ್ರಮ ಎಂಬ ವಿವರ ಇಲ್ಲಿದೆ.
Fri, 10 Jan 202510:58 AM IST
- Karnataka SSLC-PUC Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2024-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
Fri, 10 Jan 202508:26 AM IST
Yakshagana Academy Awards: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ರ ಪ್ರಶಸ್ತಿ ಘೋಷಣೆಯಾಗಿದೆ. ಮಾಂಬಾಡಿ ಗುರುಗಳು ಎಂದು ಪ್ರಸಿದ್ಧರಾಗಿರುವ ತೆಂಕತಿಟ್ಟು ಯಕ್ಷಗಾನ ಕಲಾವಿದ ಬಂಟ್ವಾಳದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಪ್ರಕಟವಾಗಿದೆ. 10 ಕಲಾವಿದರಿಗೆ ಯಕ್ಷಸಿರಿ ಗೌರವ ಘೋಷಣೆಯಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
Fri, 10 Jan 202506:58 AM IST
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ 17 ಆರೋಪಿಗಳು ಇಂದು (ಜನವರಿ 10) ಕೋರ್ಟ್‌ಗೆ ಹಾಜರಾದರು. ಜಾಮೀನು ಪಡೆದು ಹೊರಬಂದ ಬಳಿಕ ಕೋರ್ಟ್ ಸಮೀಪ ಆರೋಪಿಗಳಾದ ದರ್ಶನ್, ಪವಿತ್ರ ಗೌಡ ಮುಖಾಮುಖಿಯಾದರು. ಈ ಕೇಸ್ ವಿಚಾರಣೆ ಫೆ.25ಕ್ಕೆ ಮುಂದೂಡಿಕೆಯಾಗಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)
Fri, 10 Jan 202504:40 AM IST
BPL ration card: ಕೇಂದ್ರ ಸರ್ಕಾರದ ಮಾನದಂಡ ಪ್ರಕಾರವೇ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸುವ ಕೆಲಸ ಮಾಡಬೇಕು. ಅದನ್ನು ಹಂತ ಹಂತವಾಗಿ ನೆರವೇರಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ 4 ಅಂಶಗಳ ಸೂಚನೆ ನೀಡಿದರು. ಅದರ ವಿವರ ಇಲ್ಲಿದೆ.
Fri, 10 Jan 202502:05 AM IST
- ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ–ಯತ್ನಾಳ್ ಬಣಗಳ ನಡುವೆ ಹೆಚ್ಚುತ್ತಿರುವ ಭಿನ್ನಮತವು ಪಕ್ಷದ ತಟಸ್ಥ ಬಣಕ್ಕೆ ಸಮಸ್ಯೆ ತಂದೊಡ್ಡಿದೆ. ಭಿನ್ನಮತ ಬಗೆಹರಿಸುವಂತೆ ತಟಸ್ಥ ಬಣವು ರಾಜ್ಯ ಮತ್ತು ದೆಹಲಿಯ ವರಿಷ್ಠರ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. (ವರದಿ: ಎಚ್.ಮಾರುತಿ)
Fri, 10 Jan 202501:22 AM IST
- ಕರ್ನಾಟಕದಾದ್ಯಂತ ಮೈ ಕೊರೆವ ಚಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಶೀತ ವಾತಾವರಣವಿದೆ. ಮುಂದಿನ 5 ದಿನಗಳ ಕಾಲ ಅಂದರೆ ಜನವರಿ 15ವರೆಗೆ ಥಂಡಿ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಮುನ್ಸೂಚನೆಯನ್ನೂ ನೀಡಿದೆ ಹವಾಮಾನ ಇಲಾಖೆ. ಇಂದು (ಜನವರಿ 10) ಯಾವ ಜಿಲ್ಲೆಗಳಲ್ಲಿ ಚಳಿ ಹೆಚ್ಚಿರಲಿದೆ ನೋಡೋಣ.