
Karnataka News Live March 14, 2025 : BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Fri, 14 Mar 202504:52 PM IST
- Bengaluru News: ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್ ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಕಳ್ಳಿಯರನ್ನು ಬಸ್ ನಿರ್ವಾಹಕಿ ಮತ್ತು ಚಾಲಕ ಚಾಣಾಕ್ಷ್ಯತನದಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊಬೈಲ್ ಕಳ್ಳರ ಕಳ್ಳತನವನ್ನು ಮೊದಲು ಗುರುತಿಸಿದ ನಿರ್ವಾಹಕಿ ಈ ವಿಚಾರವನ್ನ ಚಾಲಕನ ಗಮನಕ್ಕೆ ತಂದಿದ್ದಾರೆ.
Fri, 14 Mar 202503:27 PM IST
- ಅಧಿವೇಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಅಪಘಾತವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
Fri, 14 Mar 202503:09 PM IST
- Education News: ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣದ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಪ್ರಯೋಗ ಸಂಸ್ಥೆಯ ಮರ್ಕ್ ಸಂಸ್ಥೆ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಿದೆ.
Fri, 14 Mar 202502:35 PM IST
- Forest News: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು, ಜನ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.
Fri, 14 Mar 202511:38 AM IST
- ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಲ್ಲಿ ಆಗಿರುವ ಅವ್ಯವಹಾರ ತನಿಖೆಗೆ ತನಿಖಾ ತಂಡ ರಚಿಸುವುದಾಗಿ ಸಚಿವ ಕೃಷ್ಣಬೈರೇಗೌಡ ಪ್ರಕಟಿಸಿದ್ದಾರೆ.
Fri, 14 Mar 202511:18 AM IST
- SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಂದಿನ ವಾರ ಶುರುವಾಗಲಿದೆ. ಇದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳಲು ವಿದ್ಯಾರ್ಥಿಗಳು, ಪೋಷಕರಿಗೆ ಪ್ರಮುಖ ಸೂಚನೆ ನೀಡಲಾಗಿದೆ.
Fri, 14 Mar 202508:54 AM IST
- BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಖುದ್ದು ಹಾಜರಾತಿ ವಿಚಾರಣೆಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶಿಸಿದೆ.
- ವರದಿ: ಎಚ್. ಮಾರುತಿ, ಬೆಂಗಳೂರು
Fri, 14 Mar 202508:45 AM IST
Fish Market Update: ಬೆಂಗಳೂರು ವ್ಯಾಪ್ತಿಯಲ್ಲಿ ಮೀನುಗಳ ದರ ಶೇಕಡ 30 ಹೆಚ್ಚಳವಾಗಿದ್ದರೆ, ಇತ್ತ ಕರಾವಳಿಯಲ್ಲಿ ಕಡಲ ಮೀನು ದರ ಏರಿಳಿತ ದಾಖಲಾಗಿದೆ. ದಕ್ಷಿಣ ಕನ್ನಡದಲ್ಲಿ ಮೀನು ರೇಟ್ ವಿವರ ಇಲ್ಲಿದೆ.
Fri, 14 Mar 202508:39 AM IST
- ಕರ್ನಾಟಕದಲ್ಲಿ ಮೂರು ವರ್ಷದ ಹಿಂದೆ ಆರಂಭಗೊಂಡಿದ್ದ ಒಂಬತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Fri, 14 Mar 202507:56 AM IST
ಮಂಗಳೂರು: ಅಕ್ರಮ ಪಿಸ್ತೂಲ್ ಹಾಗೂ ಗಾಂಜಾ ಮಾರಾಟ ಜಾಲವನ್ನು ಪತ್ತೆಹಚ್ಚಿ ಕೇರಳ ಮೂಲದ ಐವರು ನಟೋರಿಯಸ್ ಕ್ರಿಮಿನಲ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ 3 ಪಿಸ್ತೂಲ್, 13 ಕೆಜಿ ಗಾಂಜಾ ವಶ ಪಡಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
Fri, 14 Mar 202507:23 AM IST
ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆಗಳು ಚಾಲ್ತಿಯಲ್ಲಿವೆ. ಇದರಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂಪಾಯಿವರೆಗೂ ವೈದ್ಯಕೀಯ ಪರಿಹಾರ ಒದಗಿಸಲಾಗುತ್ತಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
Fri, 14 Mar 202506:07 AM IST
Bengaluru Garbage Problem: ಬೆಂಗಳೂರು ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿದ್ದು, ಕಣ್ಣೂರು ಗ್ರಾಮದ ಮಿಟ್ಟಗಾನಹಳ್ಳಿ ಭೂಭರ್ತಿ ಪ್ರದೇಶದಲ್ಲಿ ಕಸ ಸುರಿಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. 300 ಟ್ರಕ್‌ಗಳನ್ನು ತಡೆಹಿಡಿದಿರುವುದಾಗಿ ಗ್ರಾಮಸ್ಥರು ಹೇಳಿದ್ದು, ಬೆಂಗಳೂರಿನ ಕೆಲವು ಕಡೆ ಮನೆ, ರಸ್ತೆಗಳಲ್ಲೇ ಕಸ ಉಳಿದಿದೆ.
Fri, 14 Mar 202504:55 AM IST
- ವರಕವಿ ಬೇಂದ್ರೆ ಅವರಿಗೆ ಜ್ಞಾನಪೀಠ ಪುರಸ್ಕಾರ ದೊರೆತು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದೊಡ್ಡಬಳ್ಳಾಪುರದ ಮಂಗಳ ಶಾಲೆಯಲ್ಲಿ ನಾಕುತಂತಿ ಷಷ್ಟಿಪೂರ್ತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
Fri, 14 Mar 202502:30 AM IST
- Karnataka Reservoirs: ಕರ್ನಾಟಕದಲ್ಲಿ ಬೇಸಿಗೆ ಪ್ರಮಾಣ ಹೆಚ್ಚುತ್ತಿದ್ದರೂ ಕೆಲವು ಜಲಾಶಯಗಳಲ್ಲಿ ನೀರಿನ ಸಂಗ್ರಹ ಈಗಲೂ ಚೆನ್ನಾಗಿದೆ. ಇದರ ವಿವರ ಇಲ್ಲಿದೆ
Fri, 14 Mar 202501:30 AM IST
- Bangalore News: ಬೆಂಗಳೂರಿನಲ್ಲಿ ನೀರು ಹಿಡಿಯುವ ವೇಳೆ ಮಹಿಳೆಯೊಬ್ಬರು ಅಕ್ರಮ ವಿದ್ಯುತ್ ಸಂಪರ್ಕದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
- ವರದಿ: ಎಚ್.ಮಾರುತಿ, ಬೆಂಗಳೂರು
Fri, 14 Mar 202501:00 AM IST
- Karnataka Weather: ಕರ್ನಾಟಕದ ಕೆಲವು ಭಾಗಗಳಲ್ಲಿ ಮೂರು ದಿನ ಮಳೆಯಾಗಿ ತಂಪೆರೆದಿದೆ. ಮತ್ತೆ ಎರಡು ದಿನಗಳ ಬಳಿಕ ಭಾನುವಾರ ಮಳೆಯಾಗುವ ಮುನ್ಸೂಚನೆಯಿದೆ.