Karnataka News Live October 7, 2024 : Indian Railways: ಮೈಸೂರು ದಸರಾ ಪ್ರಯಾಣಿಕರ ರಶ್; ಬೆಳಗಾವಿ ಎಕ್ಸ್‌ಪ್ರೆಸ್ ರೈಲು 6 ಕಡೆ ತಾತ್ಕಾಲಿಕ ನಿಲುಗಡೆಗೆ ವ್ಯವಸ್ಥೆ
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Mon, 07 Oct 202402:38 PM IST
- ದಸರಾ ವೇಳೆ ಪ್ರವಾಸಿಗರು ಮೈಸೂರಿಗೆ ಬಂದು ಹೋಗಲು ಮೈಸೂರು- ಬೆಳಗಾವಿ ಎಕ್ಸ್‌ಪ್ರೆಸ್ ರೈಲು 6 ಕಡೆ ತಾತ್ಕಾಲಿಕವಾಗಿ ನಿಲುಗಡೆಯಾಗಲಿದೆ.
Mon, 07 Oct 202402:24 PM IST
- Bitcoin Case: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಎಂಬವರನ್ನು ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈವರೆಗೂ ನಾಲ್ವರು ಪೊಲೀಸರು ಅಧಿಕಾರಿಗಳು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ. (ವರದಿ-ಎಚ್. ಮಾರುತಿ)
Mon, 07 Oct 202402:02 PM IST
- ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಹೊರಟಿದ್ದವರ ವಾಹನದ ಮೇಲೆ ಚಿರತೆ ದಾಳಿ ಮಾಡಿರುವ ಘಟನೆಯ ವೀಡಿಯೋ ವೈರಲ್ ಆಗಿದೆ. ಯಾವುದೇ ಅನಾಹುತಗಳು ಆಗಿಲ್ಲ. ಅದರ ವಿವರ ಇಲ್ಲಿದೆ.
Mon, 07 Oct 202401:50 PM IST
- Government Jobs: ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ದಸರಾ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Mon, 07 Oct 202412:00 PM IST
- Chief Minister Siddaramaiah: ವಿಪಕ್ಷಗಳ ನಾಯಕರೂ ಸೇರಿ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Mon, 07 Oct 202410:34 AM IST
- ಕರ್ನಾಟಕದ ಮಲೆನಾಡ ಹೃದಯಭಾಗವಾದ ಚಿಕ್ಕಮಗಳೂರು- ಶಿವಮೊಗ್ಗ ಜಿಲ್ಲೆಯಲ್ಲಿ ಹಬ್ಬಿರುವ ಭದ್ರಾ ಹುಲಿ ಯೋಜನೆಗೆ 25 ವರ್ಷ ತುಂಬಿದ್ದು. ಇದರ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ.
Mon, 07 Oct 202408:48 AM IST
ಕಳೆದ ಮೂರು ವಾರಗಳಿಂದ ಟೊಮೆಟೊ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಭಾರಿ
ಮಳೆಯಿಂದಾಗಿ ಕಳೆದ ಎರಡು ತಿಂಗಳಿನಿಂದ ರೈತರು ಟೊಮೆಟೊ ಬೆಳೆದಿಲ್ಲ. ಜೊತೆಗೆ ಟೊಮೆಟೊ ಬೆಳೆಗೆ ರೋಗ ಕಾಣಿಸಿಕೊಂಡಿದ್ದು, ಉತ್ಪಾದನೆಯಲ್ಲಿ ಕುಸಿತವಾಗಿದೆ. (ವರದಿ: ಎಚ್.ಮಾರುತಿ, ಬೆಂಗಳೂರು)
Mon, 07 Oct 202408:02 AM IST
ಆಧಾರ್ ಸೇವೆ ಮಾನ್ಯತೆ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಆಧಾರ್ ಸೇವಾ ಕೇಂದ್ರ ಜಿಲ್ಲೆಯ ಹಲವೆಡೆ ಸ್ಥಳೀಯ ಪಂಚಾಯಿತಿ, ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆದು ಅಭಿಯಾನವನ್ನು ಮಾಡುತ್ತಿದೆ. ನಿಗದಿಪಡಿಸಿದ ಶುಲ್ಕದೊಂದಿಗೆ ಹಳ್ಳಿಗಳಲ್ಲಿ ಈ ಕ್ಯಾಂಪ್‌ಗಳನ್ನು ನಡೆಸುತ್ತಿರುವ ಕಾರಣ ಇದು ಸಹಕಾರಿಯೂ ಆಗಿದೆ. (ವರದಿ: ಹರೀಶ ಮಾಂಬಾಡಿ, ಮಂಗಳೂರು)
Mon, 07 Oct 202407:27 AM IST
- Bangalore Namma Metro: ಬೆಂಗಳೂರು ನಮ್ಮ ಮೆಟ್ರೋದ ಬಹು ನಿರೀಕ್ಷಿತ ಹಳದಿ ಮಾರ್ಗ ಆರಂಭ ವಿಳಂಬವಾಗಲಿದೆ. ಎರಡರಿಂದ ಮೂರು ತಿಂಗಳು ತಡವಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಿಸಿದೆ.
Mon, 07 Oct 202406:10 AM IST
ಎರಡು ದಿನದ ಹಿಂದೆ ಕಾಣೆಯಾಗಿದ್ದ ಮಂಗಳೂರಿನ ಉದ್ಯಮಿ ಹಾಗೂ ಮಾಜಿ ಶಾಸಕರ ಸಹೋದರ ಮುಮ್ತಾಜ್ ಆಲಿ ಶವ ಮಂಗಳೂರು ಸಮೀಪದಲ್ಲಿಯೇ ಪತ್ತೆಯಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಮಹಿಳೆ ಸಹಿತ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ವರದಿ: ಹರೀಶ ಮಾಂಬಾಡಿ, ಮಂಗಳೂರು
Mon, 07 Oct 202405:51 AM IST
- ಮೈಸೂರು ದಸರಾಗೆ ಬಂದಿರುವ ಆನೆಗಳ ತೂಕದ ಪರೀಕ್ಷೆ ಸೋಮವಾರ ನಡೆಯಿತು. ಕ್ಯಾಪ್ಟನ್ ಅಭಿಮನ್ಯುವೇ ಬಲಶಾಲಿಯಾಗಿ ಹೊರಹೊಮ್ಮಿದ. ಆನೆಗಳ ತೂಕದ ವಿವರ ಇಲ್ಲಿದೆ.
Mon, 07 Oct 202404:09 AM IST
- ಕರ್ನಾಟಕದ ಹಲವು ಭಾಗಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು. ಸೋಮವಾರವೂ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಕೊಡಗು ಸಹಿತ ಎಂಟು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Mon, 07 Oct 202402:17 AM IST
- ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟಗೊಂಡು ಭಾರಿ ಪ್ರವಾಹ ಸೃಷ್ಟಿಯಾಗಿದೆ. ಇದರಿಂದಾಗಿ ಕಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಅತ್ತ, ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಜೆ ಜಲದುರ್ಗಾದೇವಿ ದೇವಾಲಯ ಅಂಗಣ ಜಲಾವೃತಗೊಂಡಿದೆ.