Bangalore Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ನಾಳೆ ಈ ಏರಿಯಾಗಳಲ್ಲಿ 4 ಗಂಟೆಗಳ ಕಾಲ ಪವರ್ ಕಟ್‌
ಕನ್ನಡ ಸುದ್ದಿ  /  ಕರ್ನಾಟಕ  /  Bangalore Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ನಾಳೆ ಈ ಏರಿಯಾಗಳಲ್ಲಿ 4 ಗಂಟೆಗಳ ಕಾಲ ಪವರ್ ಕಟ್‌

Bangalore Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ನಾಳೆ ಈ ಏರಿಯಾಗಳಲ್ಲಿ 4 ಗಂಟೆಗಳ ಕಾಲ ಪವರ್ ಕಟ್‌

ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ಏಪ್ರಿಲ್ 13ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ಗೆ ಸಂಬಂಧಿಸಿದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣಕ್ಕಾಗಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ (ಸಾಂಕೇತಿಕ ಚಿತ್ರ - File)

ಬೆಂಗಳೂರು: ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ಏಪ್ರಿಲ್ 13ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ಗೆ ಸಂಬಂಧಿಸಿದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣಕ್ಕಾಗಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯದ ವಿವರ

ದಿನಾಂಕ 13.04.2025 (ರವಿವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರ ಭಾಗದ ಕೆಲ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಿಮ್ಮ ಏರಿಯಾದಲ್ಲಿ ನಾಳೆ ಕರೆಂಟ್‌ ಇರುತ್ತಾ? ಇಲ್ವಾ? ಎಂಬುದನ್ನು ಈಗಲೇ ತಿಳಿದುಕೊಳ್ಳಿ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ವಿಧಾನಸೌಧ, ಗಣೇಶ ದೇವಸ್ಥಾನ ಆರ್.ಎಂ.ಯು., ಮಿಲ್ಲರ್ ರಸ್ತೆ., ಜಯಮಹಲ್, ಎಂ.ಕೆ. ಬೀದಿ., ಕನ್ನಿಂಗ್ಹ್ಯಾಮ್ ರಸ್ತೆ, ಕೆಂಪ್ ರಸ್ತೆ, ಬೆನ್ಸನ್ ಟೌನ್, ಸ್ಪೆನ್ಸರ್ ರಸ್ತೆ, ಎಸ್.ಜಿ. ರೋಡ್, ಆರ್.ಎಂ.ಝಡ್. ಮಿಲೇನಿಯಾ, ಬಿ & ಎಲ್ಸಿ ಆಸ್ಪತ್ರೆ, ಚಿಕ್ಕಬಜಾರ್ ರಸ್ತೆ, ಜಿನೀವಾ ಹೌಸ್, ತಿಮ್ಮಯ್ಯ ರಸ್ತೆ, ಟಾಸ್ಕರ್ ಪಟ್ಟಣ, ಪಿ.ಜಿ. ಹಳ್ಳಿ, ಹೈನ್ಸ್ ರಸ್ತೆ, ಚಂದ್ರಯ್ಯ, ಮುನೇಶ್ವರ ನಗರ, ಶಿವಾಜಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ರೈತಸಂತೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇಂದಿನಿಂದ ಮೂರು ದಿನ ರೈತಸಂತೆ ನಡೆಯುತ್ತಿದೆ. ನೇರ ಮಾರಾಟದ ಮೂಲಕ ನಮ್ಮ ಹೋರಾಟ’ ‘ನಮ್ಮ ಬೆಳೆಗೆ ನಮ್ಮದೇ ಬೆಲೆ’ ಶೀರ್ಷಿಕೆಯಡಿಯಲ್ಲಿ ಈ ರೈತಸಂತೆಯನ್ನು ಆಯೋಜಿಸಲಾಗಿದೆ. ಆರ್‌ ಆರ್‌ ನಗರದ ಐಡಿಯಲ್‌ ಹೋಮ್ಸ್‌ ಲೇಔಟ್‌ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಏಪ್ರಿಲ್‌ 12 ರಿಂದ 14ರವರೆಗೆ ಪ್ರತಿದಿನ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಕುಸಿಯುತ್ತಿರುವ ಬೆನ್ನಲ್ಲೇ ರೈತರೇ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ಮಾರಾಟ ಮಾಡಲು ಮುಂದಾಗಿರುವುದು ಈ ರೈತ ಸಂತೆಯ ಉದ್ದೇಶ.

Suma Gaonkar

eMail
Whats_app_banner