ಹಲಸೂರು ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆ; ಸೆ 7 ರಿಂದ 9ರ ತನಕ ಈ ಸಂಚಾರ ಮಾರ್ಗ ಬದಲಾವಣೆ-traffic diversion in jurisdiction of pulakeshi nagar police station due to ganesh immersion in halasuru lake prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಹಲಸೂರು ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆ; ಸೆ 7 ರಿಂದ 9ರ ತನಕ ಈ ಸಂಚಾರ ಮಾರ್ಗ ಬದಲಾವಣೆ

ಹಲಸೂರು ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆ; ಸೆ 7 ರಿಂದ 9ರ ತನಕ ಈ ಸಂಚಾರ ಮಾರ್ಗ ಬದಲಾವಣೆ

Traffic diversion: ಹಲಸೂರು ಕೆರೆ ಕಲ್ಯಾಣಿಯಲ್ಲಿ 40,000ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಸಾಧ್ಯತೆ ಇದ್ದು, ಸೆಪ್ಟೆಂಬರ್​​ 7 ರಿಂದ ಸೆಪ್ಟೆಂಬರ್​ 9ರ ತನಕ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. (ವರದಿ-ಎಚ್. ಮಾರುತಿ)

ಹಲಸೂರು ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆ; ಸೆ 7 ರಿಂದ 9ರ ತನಕ ಈ ಸಂಚಾರ ಮಾರ್ಗ ಬದಲಾವಣೆ
ಹಲಸೂರು ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆ; ಸೆ 7 ರಿಂದ 9ರ ತನಕ ಈ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಪುಲಕೇಶಿನಗರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್​​ 7 ರಿಂದ 9 ರವರೆಗೆ ಹಲಸೂರು ಕೆರೆ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000 ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಆದ್ದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಸೆಪ್ಟೆಂಬರ್ 7ರ ಶನಿವಾರದಿಂದ ಸೆಪ್ಟೆಂಬರ್​ 9ರ ಸೋಮವಾರದ ತನಕ ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 4 ಗಂಟೆವರೆಗೆ ಹಲಸೂರು ಕೆರೆಯ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಈ ಸಂಚಾರ ಮಾರ್ಪಾಡು ಮಾಡಲಾಗಿದೆ.

ಸಂಚಾರ ನಿರ್ಬಂಧ

  • ಕೆನ್ಸಿಂಗ್​ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂಇಜಿ ಮೂಲಕ ಹಲಸೂರು ಕೆರೆ ಕಡೆಗೆ ಕೆನ್ಸಿಂಗ್​​ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಕೇವಲ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ - ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
  • ತಿರುವಳ್ಳವರ್ ಪ್ರತಿಮೆ ಜಂಕ್ಷನ್ - ಅಣ್ಣ ಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್​ಬಿಐ ಜಂಕ್ಷನ್ ಮುಖಾಂತರ ಹಲಸೂರು ಕೆರೆ ಕಡೆಗೆ ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.

ಇದನ್ನೂ ಓದಿ: Tata Curvv vs Grand Vitara: ಹೊಸ ಟಾಟಾ ಕರ್ವ್‌ ಕಾರು ತೆಗೆದುಕೊಳ್ಳುವಿರಾ ಅಥವಾ ಮಾರುತಿ ಸುಜುಕಿ ಗ್ರ್ಯಾಂಡ್‌ ವಿಟಾರ ಚೆನ್ನಾಗಿರುವುದೇ?

ಪರ್ಯಾಯ ವ್ಯವಸ್ಥೆ ಹೀಗಿದೆ

  • ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂಇಜಿ ಮೂಲಕ - ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ಕಡೆಯಿಂದ ಗುರದ್ವಾರ ಜಂಕ್ಷನ್ ಬಲ ತಿರುವು - ಗಂಗಾಧರ ಚೆಟ್ಟಿ, ರಸ್ತೆ - ಡಿಕನ್‌ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ - ಶ್ರೀ ಸರ್ಕಲ್ - ಲಾವಣ್ಯ ಥಿಯೇಟರ್ ಜಂಕ್ಷನ್ - ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ - ಪ್ರಾಮಿನೇಡ್ ರಸ್ತೆ - ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಸಾಗಬಹುದಾಗಿದೆ.
  • ತಿರುವಳ್ಳವರ್ ಪ್ರತಿಮೆ ಜಂಕ್ಷನ್ - ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್​​ಬಿಎನ್​ಎಂಎಸ್ ಹತ್ತಿರ ಎಡ ತಿರುವು ಪಡೆದು ಡಿಕನ್ಸ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ - ಶ್ರೀ ಸರ್ಕಲ್ - ಲಾವಣ್ಯ ಥಿಯೇಟರ್ ಜಂಕ್ಷನ್ ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: Parenting Tips: ಮಗ ಎಂದಿಗೂ ಅತ್ಯಾಚಾರಿ ಆಗಬಾರದು ಅಂದ್ರೆ ಪೋಷಕರಿಗೆ ಈ 7 ಅಂಶ ಗೊತ್ತಿರಬೇಕು; ಚಿಕ್ಕಂದಿನಲ್ಲೇ ಸರಿದಾರಿಗೆ ತನ್ನಿ -ಮನದ ಮಾತು