Tumakuru Bus Accident: ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  Tumakuru Bus Accident: ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Tumakuru Bus Accident: ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Tumakuru Bus Accident: ತುಮಕೂರು ಶಿರಾ ಸಮೀಪ ಇಂದು (ಡಿಸೆಂಬರ್ 2) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣವಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣವಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tumakuru Bus Accident: ತುಮಕೂರು ಜಿಲ್ಲೆಯ ಶಿರಾ ತಾಲೂಕು ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಡಿಸೆಂಬರ್ 2) ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ 20 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಗೋವಾದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಶಿರಾ ಸಮೀಪ ಬಸ್ ದುರಂತ; ಮೂವರು ಮಹಿಳೆಯರ ದುರ್ಮರಣ

ತುಮಕೂರು ಜಿಲ್ಲೆ ಶಿರಾ ತಾಲೂಕು ಚಿಕ್ಕನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 4.30ರ ಹೊತ್ತಿಗೆ ಈ ಅಪಘಾತ ಸಂಭವಿಸಿತು. ಗೋವಾರದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ ಚಿಕ್ಕನಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಡಿವೈಡರ್‌ಗೆ ಡಿಕ್ಕಿಯಾದ ಖಾಸಗಿ ಬಸ್‌ ಪಲ್ಟಿಯಾಗಿದೆ. ಬಸ್‌ ಪಲ್ಟಿಯಾದ ಕೂಡಲೇ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರು. ಬಸ್‌ನಲ್ಲಿ 29 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದ್ದು, 20ಕ್ಕೂ ಹೆಚ್ಚು ಜನರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಟ್ವೀಟ್ ಮಾಡಿದ್ದು, “ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಅಪಘಾತವಾಗಿದ್ದು ಸ್ಥಳಕ್ಕೆ ತೆರಳಿ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಯಿತು” ಎಂದು ಹೇಳಿಕೊಂಡಿದ್ದಾರೆ.

ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಗುರುತು ಪತ್ತೆಯಾಗಿಲ್ಲ. ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮ ಟ್ವೀಟ್‌ನಲ್ಲಿ ರಸ್ತೆ ಅಪಘಾತ ಸ್ಥಳದ ಫೋಟೋಗಳನ್ನು ಶೇರ್ ಮಾಡಿದ್ದಾರೆ.

Whats_app_banner