Tumakuru News; ತುಮಕೂರಿನ ಐತಿಹಾಸಿಕ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಬಾಗಿನ ಅರ್ಪಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌-tumakuru news home minister dr g parameshwara offers bagina to amanikere esp ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Tumakuru News; ತುಮಕೂರಿನ ಐತಿಹಾಸಿಕ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಬಾಗಿನ ಅರ್ಪಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Tumakuru News; ತುಮಕೂರಿನ ಐತಿಹಾಸಿಕ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಬಾಗಿನ ಅರ್ಪಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರಿನಲ್ಲಿ ವ್ಯಾಪಕ ಮಳೆಯಾದ ಕಾರಣ ಇತಿಹಾಸ ಪ್ರಸಿದ್ಧ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇಂದು (ಆಗಸ್ಟ್ 21) ಬಾಗಿನ ಅರ್ಪಿಸಿದರು. (ವರದಿ-ಈಶ್ವರ, ತುಮಕೂರು)

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಇಂದು ಕೋಡಿ ಬಿದ್ದ ಅಮಾನಿಕೆರೆಗೆ ಬಾಗಿನ ಅರ್ಪಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಇಂದು ಕೋಡಿ ಬಿದ್ದ ಅಮಾನಿಕೆರೆಗೆ ಬಾಗಿನ ಅರ್ಪಿಸಿದರು.

ತುಮಕೂರು: ಉತ್ತಮ ಮಳೆಯಾಗುತ್ತಿರುವುದರಿಂದ ನಗರದ ಕೇಂದ್ರ ಭಾಗದಲ್ಲಿರುವ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಮಾನಿಕೆರೆಗೆ ಬಾಗಿನ ಅರ್ಪಣೆ ಮಾಡಿದರು.

ಕೆರೆಗೆ ಬಾಗಿನ ಅರ್ಪಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಪ್ರತಿ ವರ್ಷವು ಸಹ ಉತ್ತಮ ಮಳೆಯಾಗಿ ಜಿಲ್ಲೆಯ ಜನರು ಸಮೃದ್ಧಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು.

ಅಮಾನಿಕೆರೆ ಅತ್ಯಂತ ಪುರಾತನವಾದ ಇತಿಹಾಸ ಹೊಂದಿರುವ ಕೆರೆ, ಬ್ರಿಟೀಷರ ಕಾಲದಲ್ಲಿ ರಸ್ತೆ ಸಂಪರ್ಕಗಳು ಇಲ್ಲದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ನಿವಾಸದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಬೋಟ್‌ನ ಸಹಾಯದಿಂದ ಅಮಾನಿಕೆರೆ ದಾಟಿ ಕಚೇರಿ ತಲುಪುತ್ತಿದ್ದರು ಎಂದು ಸಚಿವ ಪರಮೇಶ್ವರ ಇತಿಹಾಸ ಮೆಲುಕು ಹಾಕಿದರು.

ಸೆಪ್ಟಂಬರ್ 15 ರೊಳಗಾಗಿ ಎಸ್. ಮಾಲ್ ಬಳಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು, ಎಸ್.ಮಾಲ್ ಮಾಲೀಕರು ರಾಜಕಾಲುವೆ ಒತ್ತುವರಿ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಒತ್ತುವರಿಯಾಗಿರುವುದು ಕಂಡು ಬಂದಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅನೇಕ ಕೆರೆಗಳು ತುಂಬಿ ಕೋಡಿ ಹರಿದಿವೆ, ತುಮಕೂರು ನಗರದ ಅಮಾನಿಕೆರೆ ತುಂಬುವುದೇ ಬಹಳ ವಿರಳ, ಕಳೆದ ವರ್ಷ ಹೆಚ್ಚು ಬರಗಾಲವಿದ್ದ ಪರಿಣಾಮ ಕೆರೆಗೆ ನೀರು ಬರಲಿಲ್ಲ, ಆದಾಗ್ಯೂ ಇದ್ದ ನೀರನ್ನು ರಕ್ಷಸಿಕೊಂಡು ಬಂದಿದ್ದೇವೆ, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ಸಿದ್ದೇಶ್ ಸೇರಿ ಮತ್ತಿತರರು ಹಾಜರಿದ್ದರು.

(ವರದಿ-ಈಶ್ವರ, ತುಮಕೂರು)