ಕನ್ನಡ ಸುದ್ದಿ  /  ಕರ್ನಾಟಕ  /  ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ; ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ

ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ; ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ

ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಗೆ ಗೌವ ಸಲ್ಲಿಸಿದ ಬಳಿಕ ಮಾತನಾಡುತ್ತ, ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ವರದಿ- ಈಶ್ವರ್, ತುಮಕೂರು)

ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಹೇಳಿದರು.
ನೂತನ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ದೂರದೃಷ್ಟಿಗೆ ತಕ್ಕಂತೆ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಹೇಳಿದರು.

ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ಕೇಂದ್ರದ ನೂತನ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಹಿರಿಯ ಶ್ರೀ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಟ್ರೆಂಡಿಂಗ್​ ಸುದ್ದಿ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಎನ್‌ಡಿಎ ಒಕ್ಕೂಟದಿಂದ ನನ್ನನ್ನು ರಾಷ್ಟ್ರದ ಮಂತ್ರಿಯಾಗಿ ನೇಮಕ ಮಾಡುವ ಮೂಲಕ ಎರಡು ಉಪಯುಕ್ತ ಇಲಾಖೆಗಳ ಜವಾಬ್ದಾರಿ ನೀಡಿದ್ದಾರೆ, ದೇಶದ ಜನತೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ತಕ್ಕಂತೆ ಕೆಲಸ ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.

ಪ್ರಚಲಿತ ರಾಷ್ಟ್ರದಲ್ಲಿರುವ ಎರಡು ಇಲಾಖೆಗಳಿಂದ ಜನಸಾಮಾನ್ಯರಿಗೆ ಸಿಗಬೇಕಾಗಿರುವ ಅವಶ್ಯತೆಗಳ ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಜಿಲ್ಲೆಯ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಆಗಿರುವ ಕಹಿ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ, ಈ ಘಟನೆ ಯಾವ ರೀತಿ ಆಗಿದೆ ಎಂಬ ವಿಮರ್ಶೆ ಮಾಡುತ್ತಿದ್ದು, ಅಧಿಕಾರಿಗಳಿಂದ ಅಗತ್ಯ ವರದಿ ಕೇಳಿದ್ದೇವೆ ಎಂದರು.

ನನ್ನನ್ನು ಕೇಂದ್ರ ಸಚಿವನಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಮಂತ್ರಿ ಅಮಿತ್ ಶಾ, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ ಅವರು ಭಾನುವಾರ ಎರಡೂ ಪಕ್ಷದ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ನಾನು ಸಹ ಭಾಗಿಯಾಗುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಚಿದಾನಂದ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಎಂ.ವಿ. ವೀರಭದ್ರಯ್ಯ, ದಿಲೀಪ್ ಕುಮಾರ್, ಅನಿಲ್‌ಕುಮಾರ್, ವೈ.ಹೆಚ್. ಹುಚ್ಚಯ್ಯ, ಕೊಂಡವಾಡಿ ಚಂದ್ರಶೇಖರ್, ಸಿ.ಎಂ.ರಾಜಪ್ಪ, ವಿಶ್ವನಾಥಗೌಡ, ಸ್ಫೂರ್ತಿ ಚಿದಾನಂದ್ ಮತ್ತಿತರರು ಹಾಜರಿದ್ದರು.

(ವರದಿ- ಈಶ್ವರ್, ತುಮಕೂರು)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)