Tumkur News: ತುಮಕೂರು ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಕ್ಷೇತ್ರದಲ್ಲಿ ಭಕ್ತ ಸಾಗರ: ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ವೈಭವ
ಕನ್ನಡ ಸುದ್ದಿ  /  ಕರ್ನಾಟಕ  /  Tumkur News: ತುಮಕೂರು ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಕ್ಷೇತ್ರದಲ್ಲಿ ಭಕ್ತ ಸಾಗರ: ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ವೈಭವ

Tumkur News: ತುಮಕೂರು ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಕ್ಷೇತ್ರದಲ್ಲಿ ಭಕ್ತ ಸಾಗರ: ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ವೈಭವ

Tumkur News: ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಭಕ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ವರದಿ: ಈಶ್ವರ್‌ ತುಮಕೂರು

ತುಮಕೂರು ಜಿಲ್ಲೆ ದೇವರಾಯದುರ್ಗದ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ ಜರುಗಿತು,
ತುಮಕೂರು ಜಿಲ್ಲೆ ದೇವರಾಯದುರ್ಗದ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ ಜರುಗಿತು,

Tumkur News: ಇತಿಹಾಸ ಪ್ರಸಿದ್ದ ತುಮಕೂರು ಜಿಲ್ಲೆಯ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ ಲಕ್ಷ್ಮಿನರಸಿಂಹಸ್ವಾಮಿಯ ಬ್ರಹ್ಮರಥೋತ್ಸವವು ಮಧ್ಯಾಹ್ನ ಭಕ್ತಾದಿಗಳ ಹರ್ಷೋದ್ಘಾರದ ನಡುವೆ ಗರುಡ ಬಂದು ರಥ ಪ್ರದಕ್ಷಿಣೆ ಹಾಕಿದ ನಂತರ ವಿದ್ಯುಕ್ತವಾಗಿ ನೆರವೇರಿತು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಶಾಸಕ ಬಿ. ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಟಿ. ಸುನೀಲ್ ಕುಮಾರ್ ಅವರು ಶ್ರೀಲಕ್ಷ್ಮಿ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು, ನಂತರ ರಥೋತ್ಸವಕ್ಕೆ ಚಾಲನೆ ದೊರೆಯಿತು.

ರಥೋತ್ಸವದ ಅಂಗವಾಗಿ ಮುಂಜಾನೆಯೇ ಶ್ರೀಸ್ವಾಮಿಗೆ ಅಭಿಷೇಕ ನೆರವೇರಿತು, ದೇವರು ಮತ್ತು ರಥಕ್ಕೆ ಗೆ ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ವೇಳೆ ಭಕ್ತರು ಬೆಳಿಗ್ಗೆಯಿಂದಲೇ ಬೆಟ್ಟಕ್ಕೆ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುವ ಉತ್ಸಾಹದಲ್ಲಿದ್ದರು. ಕೆಲವರು ಕುಟುಂಬದವರೊಂದಿಗೆ ಬಂದಿದ್ದರು.

ಜಾತ್ರೆ ಸಡಗರ

ಮುಂಜಾನೆಯಿಂದಲೇ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದ್ದು, 7 ಗಂಟೆಯ ನಂತರ ಶ್ರೀಲಕ್ಷ್ಮಿನರಸಿಂಹ ಸ್ವಾಮಿ ಭಕ್ತರ ಮನೆಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆಯಾದ ನಂತರ ಮಧ್ಯಾಹ್ನ ರಥದ ಬಳಿ ಬಂದ ದೇವರನ್ನು ರಥಕ್ಕೆ ಕೂರಿಸಲಾಯಿತು.

ರಥಕ್ಕೆ ಗರುಡ ಪ್ರದಕ್ಷಿಣೆ ಹಾಕಿದ ನಂತರ ಭಕ್ತರ ಜೈಕಾರ, ವೇದ ಘೋಷದೊಂದಿಗೆ ರಥ ಮುಂದಕ್ಕೆ ಎಳೆಯಲಾಯಿತು, ರಥದ ಗಾಲಿಗಳು ಮುಂದಕ್ಕೆ ಚಲಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು, ಭಕ್ತಾದಿಗಳು ರಥಕ್ಕೆ ಹೂ, ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.

ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಭಕ್ತಾದಿಗಳಿಗೆ ಅಲ್ಲಲ್ಲಿ ಕೊಪ್ಪಲು ಹಾಕಿಕೊಂಡಿದ್ದ ಭಕ್ತರು ಪಾನಕ, ಮಜ್ಜಿಗೆ ನೀಡಿ ಅವರ ದಣಿವನ್ನು ತಣಿಸಿದರು, ಹಾಗೆಯೇ ದೇವಾಲಯದ ವತಿಯಿಂದಲೂ ಭಕ್ತಾದಿಗಳಿಗಾಗಿ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿತ್ತು, ರಥೋತ್ಸವದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸಂಭ್ರಮಿಸಿದರು.

ಶ್ರೀ ಕ್ಷೇತ್ರದ ಇತಿಹಾಸ

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯವು ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿದ್ದು, ಇದು ತುಮಕೂರು ನಗರದಿಂದ ಸುಮಾಋು 15 ಕಿಲೋಮೀಟರ್ ದೂರದಲ್ಲಿರುವ ದೇವರಾಯನದುರ್ಗದ ಗುಡ್ಡಗಾಡು ಪ್ರದೇಶದಲ್ಲಿ ನೆಲೆಗೊಂಡಿರುತ್ತವೆ. ಇದು ಅತ್ಯಂತ ಜನಪ್ರಿಯ ಮತ್ತು ಪ್ರಾಚೀನ ನರಸಿಂಹ ದೇವಾಲಯಗಳಲ್ಲಿ ಒಂದಾಗಿದೆ. ನರಸಿಂಹ ದೇವರಿಗೆ ಎರಡು ದೇವಾಲಯಗಳನ್ನು ನಿರ್ಮಿಸಲಾಗಿದೆ.

ಒಂದನ್ನು ಶ್ರೀ ಭೋಗಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಎಂದು ಕರೆಯಲಾಗುತ್ತದೆ ಮತ್ತು ಇನ್ನೊಂದು ದೇವಾಲಯ ಬೆಟ್ಟದ ಮೇಲೆ ತುದಿಯಲ್ಲಿ ಇದ್ದು, ಇದನ್ನು ಯೋಗಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಎಂದು ಕರೆಯಲಾಗುತ್ತದೆ.

ದೇವಾಲಯದ ವಿಶೇಷ

ಈ ದೇವಾಲಯವು 2000 ವರ್ಷಗಳಷ್ಟು ಹಳೆಯದಾಗಿದ್ದು, ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಭೋಗಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯವನ್ನು ದೂರ್ವಾಸ ಮಹಾಮುನಿಯು ಹಲವಾರು ವರ್ಷಗಳ ಕಾಲ ತಪಸ್ಸಿನಿಂದ ಸ್ಥಾಪಿಸಿದನೆಂದು ಭಕ್ತರ ನಂಬಿಕೆಯಾಗಿದೆ. ಬೆಟ್ಟದ ಮೇಲಿರುವ ಶ್ರೀ ಯೋಗಲಕ್ಷ್ಮಿ ನರಸಿಂಹಸ್ವಾಮಿಯ ಪುರಾತನದಾಗಿದ್ದು, ಇದನ್ನು ಬ್ರಹ್ಮ ದೇವರಿಂದ ಸ್ಥಾಪನೆಯಾಗಿದೆ ಎಂದು ಹೇಳಲಾಗುತ್ತದೆ. ದ್ವಾಪರ ಯುಗದಲ್ಲಿ ಶ್ರೀ ವಿಷ್ಣುವಿನ ಹೆಸರಿನಲ್ಲಿ ಹಲವಾರು ವರ್ಷಗಳ ಕಾಲ ತಪಸ್ಸು ಮಾಡಿದನೆಂದು ಮತ್ತು ಈ ಭಗವಾನ್ ವಿಷ್ಣುವು ಇಲ್ಲಿ ನರಸಿಂಹನಾಗಿ ಅವತರಿಸಿದನೆಂದು ನಂಬಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner