DK Shivakumar: ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ; ಕಾಂಗ್ರೆಸ್ ನುಡಿದಂತೆ ನಡೆದಿದೆ ಎಂದ ಡಿಕೆ ಶಿವಕುಮಾರ್
ಕನ್ನಡ ಸುದ್ದಿ  /  ಕರ್ನಾಟಕ  /  Dk Shivakumar: ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ; ಕಾಂಗ್ರೆಸ್ ನುಡಿದಂತೆ ನಡೆದಿದೆ ಎಂದ ಡಿಕೆ ಶಿವಕುಮಾರ್

DK Shivakumar: ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ; ಕಾಂಗ್ರೆಸ್ ನುಡಿದಂತೆ ನಡೆದಿದೆ ಎಂದ ಡಿಕೆ ಶಿವಕುಮಾರ್

Tumkuru News: ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನೀಡುವ ಅವಶ್ಯಕತೆ ಇಲ್ಲ. ಮಧ್ಯವರ್ತಿಗಳಿಗೆ ಅವಕಾಶ ನೀಡದೆ ನೇರವಾಗಿ ಫಲಾನುಭವಿಗಳೇ ಅರ್ಜಿ ಸಲ್ಲಿಸಬಹುದು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ತುಮಕೂರು: ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲ ಮೀತಿ ನಿಗದಿ ಮಾಡಿಲ್ಲ. ಯಾವುದೇ ಗೊಂದಲವಿಲ್ಲದೆ ನಿಗದಿಪಡಿಸಿದ ದಾಖಲಾತಿಯೊಂದಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯದಲ್ಲಿನ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನುಡಿದಂತೆ ನಡೆದುಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಸಬ್ಬೇನಹಳ್ಳಿಯ ಸಿದ್ದರಬೆಟ್ಟದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗಲಿ ಎಂದು ಶ್ರೀ ಸಿದ್ದೇಶ್ವರಸ್ವಾಮಿ ಬಳಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಮ್ಮ ಪ್ರಾರ್ಥನೆ ಫಲ ನೀಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನೀಡುವ ಅವಶ್ಯಕತೆ ಇಲ್ಲ. ಮಧ್ಯವರ್ತಿಗಳಿಗೆ ಅವಕಾಶ ನೀಡದೆ ನೇರವಾಗಿ ಫಲಾನುಭವಿಗಳೇ ಅರ್ಜಿ ಸಲ್ಲಿಸಬಹುದಾಗಿದೆ. ಯಾರಾದರು ಅಧಿಕಾರಿಗಳು ಲಂಚ ಕೇಳಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪ್ರತಿ ಭೇಟಿಯೂ ಸಾಕ್ಷಿಯಾಗಿರಬೇಕು

ಶ್ರೀ ಹರಿಹರೇಶ್ವರ ದೇವಾಲಯ ಹಳೆಯದಾಗಿದ್ದು ಜೀರ್ಣೋದ್ಧಾರ ಮಾಡಲು ತಹಶೀಲ್ದಾರ್ ಅವರಿಗೆ ತಿಳಿಸಿದ್ದೇನೆ. ಈ ಭಾಗಕ್ಕೆ ನನ್ನಿಂದ ಏನಾದರು ಸಹಾಯ ಬೇಕಿದ್ದರೆ ಸ್ಥಳೀಯ ನಾಯಕರಿಗೆ ತಿಳಿಸಿ. ನಾನು ಅಭಿವೃದ್ಧಿ ಕೆಲಸಕ್ಕೆ ಪೂರಕವಾದ ಯೋಜನೆ ನೀಡುತ್ತೇನೆ, ಪುಣ್ಯಸ್ಥಳಕ್ಕೆ ಭೇಟಿ ನೀಡಿದ್ದು ಸಾಕ್ಷಿಯಾಗಿರಬೇಕು ಎಂದರು.

ಪಕ್ಷಾತೀತವಾಗಿ ಡಿಕೆಶಿಗೆ ಸ್ವಾಗತ

ಉಪ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತಾಲೂಕಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರಿಗೆ ಪಕ್ಷಾತೀತವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಖಾಸಗಿ ಕಾರ್ಯಕ್ರಮವಾದರೂ ಕ್ಷೇತ್ರದ ಶಾಸಕ ಸಿಬಿ ಸುರೇಶ್ ಬಾಬು ಸಹ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಶಯ ತಿಳಿಸಿದರು.

ರೋಡ್ ಶೋ ಮೂಲಕ ಶ್ರೀ ಸಿದ್ದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್, ದೇವರಿಗೆ ವಿಶೇಷ ಪೂಜೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಣಿಗಲ್ ಶಾಸಕ ರಂಗನಾಥ್, ತಿಪಟೂರು ಶಾಸಕ ಷಡಕ್ಷರಿ, ಮಾಜಿ ಶಾಸಕ ಕೆಎಸ್ ಕಿರಣ್ ಕುಮಾರ್, ಬಿ ಲಕಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಬೆಂಗಳೂರು: ಭಾರತೀಯ ಆಹಾರ ನಿಗಮವು ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಮಾರಾಟ ಮಾಡುವುದಕ್ಕೆ ತಡೆ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು (ಜೂನ್ 16, ಶುಕ್ರವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಸೋತರೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸುತ್ತೇವೆ ಅಂತ ಹೇಳಿದ್ದರು. ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಅವರು ನುಡಿದಂತೆ ನಡೆದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ವರದಿ: ಈಶ್ವರ್‌, ತುಮಕೂರು

Whats_app_banner