Siddaganga Math: ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ನೇಮಕ, ಸಾಂಗವಾಗಿ ನಡೆದ ಪಟ್ಟಾಭಿಷೇಕ
ತುಮಕೂರಿನ (Tumkuru News) ಸಿದ್ದಗಂಗಾ ಮಠಕ್ಕೆ (Siddaganga Math) ನೂತನ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ನೇಮಕವಾದರು. ಭಾನುವಾರ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಸರಳವಾಗಿ ನಡೆಯಿತು. ಬಂಡೆ ಮಠ ಮತ್ತು ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೂ ಪಟ್ಟಾಭಿಷೇಕ ನಡೆದಿದೆ.
ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ನೇಮಕವಾದರು. ಭಾನುವಾರ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಸರಳವಾಗಿ ನಡೆಯಿತು. ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯ ಜರುಗಿದವು.
ಸಿದ್ಧಗಂಗಾ ಮಠದ ಜೊತೆ ಬಂಡೆ ಮಠ ಮತ್ತು ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಗಳಾಗಿ ನೂತನವಾಗಿ ಆಯ್ಕೆಯಾಗಿರುವ ಮೂವರಿಗೂ ಉತ್ತರಾಧಿಕಾರಿಯಾಗಿ ಪಟ್ಟಾಭಿಷೇಕ ನಡೆಸಲಾಯಿತು.
ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಬಸವ ಜಯಂತಿ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಿತು.
ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಪಟ್ಟಾಧಿಕಾರ ಸ್ವೀಕರಿಸಿದ ಮನೋಜ್ ಕುಮಾರ್ ಅವರಿಗೆ ಶ್ರೀ ಶಿವಸಿದ್ದೇಶ್ವರ ಮಹಾ ಸ್ವಾಮೀಜಿ ಎಂದು ಮರು ನಾಮಕರಣ ಮಾಡಲಾಗಿದೆ.
ಬೆಳಿಗ್ಗೆ ಸಿದ್ಧಲಿಂಗೇಶ್ವರ ದೇಗುಲದಲ್ಲಿ ಪೂಜೆ, ಧಾರ್ಮಿಕ ಕ್ರಿಯಾ ವಿಧಾನ, ಭಿಕ್ಷಾಟನೆ ಮೂಲಕ ವಟುವಾಗಿ ಸ್ವೀಕರಿಸಿದ ನಂತರ ಉತ್ತರಾಧಿಕಾರಿಯನ್ನು ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಕೈ ಹಿಡಿದು ಕರೆ ತಂದರು.
ನಂತರದ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ಧಲಿಂಗಸ್ವಾಮೀಜಿ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶಯದಂತೆ ಶ್ರೀ ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದ್ದು, ಭಕ್ತರು ಹಾಗೂ ಮಠದ ಹಿತೈಷಿಗಳು ಸಹಕಾರ ನೀಡಬೇಕು ಎಂದು ಕೋರಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಬೇಲಿಮಠದ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ, ಹಿರೇಮಠದವ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಹರಗುರು ಶರಣರು ಭಾಗಿಯಾಗಿದ್ದರು.
ಜಗಜ್ಯೋತಿ ಬಸವೇಶ್ವರರ ಜಯಂತಿ ದಿನವಾದ ಇಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ನಡೆದಿದೆ.. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ.
ನಡೆದಾಡುವ ದೇವರ ಪುಣ್ಯಕ್ಷೇತ್ರ ಶ್ರೀ ಸಿದ್ಧಗಂಗಾ ಮಠದ ಪರಂಪರೆಯಂತೆ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕವು ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗೇಶ್ವರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆದಿದೆ. ಶ್ರೀ ಬಸವಜಯಂತಿ ಹಾಗೂ ಅಕ್ಷಯ ತೃತೀಯದ ಪವಿತ್ರ ದಿನದಂದು ಈ ಕಾರ್ಯಕ್ರಮ ನಡೆದಿದೆ.
ವರದಿ: ಈಶ್ವರ್ ಎಂ
ವಿಭಾಗ