ಕನ್ನಡ ಸುದ್ದಿ  /  ಕರ್ನಾಟಕ  /  ತುಮಕೂರು ಮಳೆ ಅವಾಂತರ; ರಸ್ತೆ ಮೇಲೆ ಬಿದ್ದ ಮರಗಳು ವಿದ್ಯುತ್‌ ಕಂಬಗಳು, ಬೆಸ್ಕಾಂ ಸಿಬ್ಬಂದಿಯಿಂದ ತೆರವು

ತುಮಕೂರು ಮಳೆ ಅವಾಂತರ; ರಸ್ತೆ ಮೇಲೆ ಬಿದ್ದ ಮರಗಳು ವಿದ್ಯುತ್‌ ಕಂಬಗಳು, ಬೆಸ್ಕಾಂ ಸಿಬ್ಬಂದಿಯಿಂದ ತೆರವು

Tumkur News: ಗುರುವಾರ ತುಮಕೂರಿನಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್‌ ಕಂಬಗಳು, ಮರಗಳು ಧರೆಗೆ ಉರುಳಿವೆ. ವಿಷಯ ತಿಳಿದ ಬೆಸ್ಕಾಂ , ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಕಂಬಗಳು, ಮರಗಳನ್ನು ತೆರವುಗೊಳಿಸಲು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. (ವರದಿ: ಈಶ್ವರಪ್ಪ, ತುಮಕೂರು)

ತುಮಕೂರು ಮಳೆ ಅವಾಂತರ; ರಸ್ತೆ ಮೇಲೆ ಬಿದ್ದ ಮರಗಳು ವಿದ್ಯುತ್‌ ಕಂಬಗಳು, ಬೆಸ್ಕಾಂ ಸಿಬ್ಬಂದಿಯಿಂದ ತೆರವು
ತುಮಕೂರು ಮಳೆ ಅವಾಂತರ; ರಸ್ತೆ ಮೇಲೆ ಬಿದ್ದ ಮರಗಳು ವಿದ್ಯುತ್‌ ಕಂಬಗಳು, ಬೆಸ್ಕಾಂ ಸಿಬ್ಬಂದಿಯಿಂದ ತೆರವು

ತುಮಕೂರು: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕೆಲವೆಡೆ ಸಾಧಾರಣ ಮಳೆ ಆದರೆ ಇನ್ನೂ ಕೆಲವೆಡೆ ಜೋರು ಗಾಳಿ, ಗುಡುಗು ಸಹಿತ ಮಳೆ ಆಗಿದೆ. ಭಾರೀ ಮಳೆಯಿಂದಾಗಿ ಕೆಲವೆಡೆ ಮರಗಳು ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿವೆ. ಕರೆಂಟ್‌ ಇಲ್ಲದೆ ಜನ ಜೀವನ ಅಸ್ತವ್ಯಸ್ತವಾಗಿದೆ. ತುಮಕೂರು ಜಿಲ್ಲೆಯ ಬಹುತೇಕ ಕಡೆ ಕೆಲವು ದಿನಗಳಿಂದ ಬಿಡದೆ ಮಳೆಯಾಗುತ್ತಿದೆ.

ಬಿರುಗಾಳಿಗೆ ನೆಲಕ್ಕೆ ಉರುಳಿದ ಮರಗಳು, ವಿದ್ಯುತ್‌ ಕಂಬಗಳು

ತುಮಕೂರು ನಗರದಲ್ಲಿ ಗುರುವಾರ ಸಂಜೆ 4.15ರ ವೇಳೆಗೆ ಸುರಿದ ಬಿರುಗಾಳಿ ಮಳೆಗೆ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ನಗರದ ರೈಲ್ವೆ ನಿಲ್ದಾಣದ ಮುಂಭಾಗವೇ ಬಿರುಗಾಳಿ ಮಳೆಗೆ 2 ವಿದ್ಯುತ್ ಕಂಬಗಳು ಅರ್ಧಕ್ಕೆ ಮುರಿದು ಬಿದ್ದಿದೆ, ಹಾಗೆಯೇ ರೈಲ್ವೆ ನಿಲ್ದಾಣ ರಸ್ತೆಯಲ್ಲೇ ಬಿರುಗಾಳಿಗೆ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದರಿಂದ ಮತ್ತೆ 2 ವಿದ್ಯುತ್ ಕಂಬಗಳು ಮುರಿದು ರಸ್ತೆ ಮೇಲೆ ಬಿದ್ದಿವೆ. ವಿದ್ಯುತ್ ಕಂಬಗಳು ಮುರಿದು ಬೀಳುತ್ತಿದ್ದಂತೆ ರೈಲ್ವೆ ನಿಲ್ದಾಣ ರಸ್ತೆಯ ಫುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವರ್ತಕರು ಜೀವ ಬಿಗಿ ಹಿಡಿದು ಅಲ್ಲಿಂದ ಓಡಿ ಹೋಗಿದ್ದಾರೆ, ವಿದ್ಯುತ್ ಕಂಬಗಳು ಮುರಿದು ಬಿದ್ದಾಗ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಟ್ರೆಂಡಿಂಗ್​ ಸುದ್ದಿ

ರೈಲ್ವೆ ನಿಲ್ದಾಣದ ಮುಂಭಾಗದಲ್ಲೇ ವಿದ್ಯುತ್ ಕಂಬಗಳು ಬಿರುಗಾಳಿಗೆ ಅರ್ಧಕ್ಕೆ ಮುರಿದು ಎಲ್‌ಐಸಿ ಕಚೇರಿ ಕಡೆಗೆ ಹೋಗುವ ರಸ್ತೆಗೆ ವಿದ್ಯುತ್ ತಂತಿಗಳ ಸಮೇತ ಅಡ್ಡಲಾಗಿ ಬಿದ್ದಿದ್ದರಿಂದ ರಸ್ತೆಯನ್ನು ಬಂದ್ ಮಾಡಲಾಗಿತ್ತು, ಇನ್ನೊಂದೆ ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ವಸತಿ ಗೃಹಗಳ ಪಕ್ಕದಲ್ಲಿದ್ದ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಸಮೀಪದಲ್ಲೇ ಇದ್ದ 2 ವಿದ್ಯುತ್ ಕಂಬ ಧರೆಗುರುಳಿವೆ. ಈ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ಫುಟ್‌ಪಾತ್ ವ್ಯಾಪಾರಿಗಳು ತಕ್ಷಣ ತಮ್ಮ ಜೀವ ರಕ್ಷಣೆಗಾಗಿ ಅಂಗಡಿಗಳಿಂದ ಹೊರ ಓಡಿ ಬಂದಿದ್ದಾರೆ, ಆದರೆ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.ಸುದ್ದಿ ತಿಳಿದ ಕೂಡಲೇ ಮಹಾ ನಗರ ಪಾಲಿಕೆ, ಪೊಲೀಸ್ ಇಲಾಖೆ, ಬೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಧರೆಗುರುಳಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದರು.

ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಇಂದು( ಜೂನ್‌ 21) ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ಮೈಸೂರು ಜಿಲ್ಲೆಯ ಹಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಚಂಡಮಾರುತದ ಹವಾಮಾನವು ಗಂಟೆಗೆ 35 ರಿಂದ 45 ಕಿಮೀ ವೆೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ವರದಿ: ಈಶ್ವರಪ್ಪ, ತುಮಕೂರು 

ವಿಭಾಗ