Umesh Katti funeral: ಉಮೇಶ ಕತ್ತಿಗೆ ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ
ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಬೆಲ್ಲದ ಬಾಗೇವಾಡಿ ಗ್ರಾಮದ ಅವರ ತೋಟದಲ್ಲಿ ಬುಧವಾರ ರಾತ್ರಿ ಸಕಲ ಸರ್ಕಾರಿ ಗೌರವದೊಂದಿಗೆ, ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ (Umesh Katti funeral) ನೆರವೇರಿತು.
ಬೆಳಗಾವಿ: ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದ ಅವರ ತೋಟದಲ್ಲಿ ಬುಧವಾರ ರಾತ್ರಿ ಸಕಲ ಸರ್ಕಾರಿ ಗೌರವದೊಂದಿಗೆ, ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ (Umesh Katti funeral) ನೆರವೇರಿತು.
ಸಚಿವ ಉಮೇಶ್‌ಕತ್ತಿ ಅವರ ನಿಧನದ ವಿಷಯ ತಿಳಿಯುತ್ತಿದ್ದಂತೆಯೇ ಬೆಲ್ಲದ ಬಾಗೇವಾಡಿಯ ಅವರ ನಿವಾಸದಲ್ಲಿ ಅಭಿಮಾನಿಗಳು, ಹಿತೈಷಿಗಳು, ಬಂಧುಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.
ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರು ನಿವಾಸದಲ್ಲಿ ಕುಸಿದು ಬಿದ್ದಿದ್ದರು. ತತ್‌ಕ್ಷಣವೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು.
ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ಕೊಂಡೊಯ್ಯಲು ನಿರ್ಧರಿಸಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ವಿಶೇಷ ವಿಮಾನ ಬರುವುದು ತಡವಾಗಿತ್ತು. ಮಧ್ಯಾಹ್ನದ ವೇಳೆಗೆ ವಾತಾವರಣ ತಿಳಿಯಾದ ನಂತರ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಚಿವ ಕತ್ತಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲಾಯಿತು. ಉಮೇಶ್ ಕತ್ತಿ ಅವರ ಪತ್ನಿ, ಪುತ್ರ ಹಾಗೂ ಪುತ್ರಿ ಸಹ ಇದೇ ವಿಮಾನದಲ್ಲಿ ಬೆಳಗಾವಿಗೆ ತೆರಳಿದರು.
ಸಚಿವ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಕಳುಹಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರು, ಗಣ್ಯರು ಮತ್ತೊಂದು ವಿಶೇಷ ವಿಮಾನದಲ್ಲಿ ತೆರಳಿದ್ದರು. ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಕನ್ಯಾಕುಮಾರಿಗೆ ಹೋಗದೆ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಶಿವಮೊಗ್ಗದಲ್ಲಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಅಲ್ಲಿಂದಲೇ ಬೆಳಗಾವಿಗೆ ಪ್ರಯಾಣಿಸಿ ಕತ್ತಿ ಅವರ ಅಂತಿಮ ದರ್ಶನ ಪಡೆದರು.
ಬೆಳಗಾವಿಯಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಕತ್ತಿ ಅವರ ಹುಟ್ಟೂರು ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿತ್ತು. ಬಳಿಕ ಸೂರ್ಯಾಸ್ತದ ಒಳಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದ ಸದಸ್ಯರು ಪ್ರಯತ್ನಿಸಿದ್ದರು.
ಆದರೂ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಜನದಟ್ಟಣೆ ಹೆಚ್ಚಾಗಿದ್ದರಿಂದ ಅದಕ್ಕೆ ಅವರು ಅವಕಾಶ ಮಾಡಿಕೊಟ್ಟರು. ರಾತ್ರಿಯಾಗುತ್ತಿದ್ದಂತೆ ಉಮೇಶ್ ಕತ್ತಿ ಅವರ ತಂದೆ-ತಾಯಿಯ ಸಮಾಧಿಯ ಪಕ್ಕವೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್ ಮತ್ತು ಟ್ವಿಟರ್ ನಲ್ಲಿ ಫಾಲೋಮಾಡಿ.
ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದು, ಇಂದು ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಸಂಸ್ಕಾರ ನೆರವೇರುತ್ತಿದೆ. ಅಗಲಿದ ನಾಯಕನಿಗೆ ಅಂತಿಮ ನಮನದ ಕ್ಷಣಗಳು ಫೋಟೋಗಳಲ್ಲಿ ಸೆರೆಯಾಗಿರುವುದು ಹೀಗೆ.. Umesh Katti: ಅಗಲಿದ ನಾಯಕನಿಗೆ ಅಂತಿಮ ನಮನದ ಕ್ಷಣಗಳು; ಕೆಲವು ಫೋಟೋಸ್ ಇಲ್ಲಿವೆ..
ಕರ್ನಾಟಕ ಅರಣ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟರು. ಹೃದಯಾಘಾತಕ್ಕೆ ಒಳಗಾಗಿದ್ದ ಉಮೇಶ್ ಕತ್ತಿ ಅವರ ಬದುಕಿನ ಕೊನೆಯ ಕ್ಷಣದ ವಿಡಿಯೋ ಈಗ ವೈರಲ್ ಆಗಿದೆ. Last minutes of Umesh Katti: ಉಮೇಶ್ ಕತ್ತಿ ಅವರ ಬದುಕಿನ ಕೊನೆಯ ಕ್ಷಣ; ವಿಡಿಯೋ ಇಲ್ಲಿದೆ.