ಯಲ್ಲಾಪುರ ರಸ್ತೆ ಅಪಘಾತ: ಲಾರಿಯಲ್ಲಿದ್ದರು 40ಕ್ಕೂ ಹೆಚ್ಚು ಮಂದಿ, 9 ಜನರ ಸಾವು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರ; ಇಲ್ಲಿದೆ ಘಟನೆಯ ವಿವರ
ಕನ್ನಡ ಸುದ್ದಿ  /  ಕರ್ನಾಟಕ  /  ಯಲ್ಲಾಪುರ ರಸ್ತೆ ಅಪಘಾತ: ಲಾರಿಯಲ್ಲಿದ್ದರು 40ಕ್ಕೂ ಹೆಚ್ಚು ಮಂದಿ, 9 ಜನರ ಸಾವು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರ; ಇಲ್ಲಿದೆ ಘಟನೆಯ ವಿವರ

ಯಲ್ಲಾಪುರ ರಸ್ತೆ ಅಪಘಾತ: ಲಾರಿಯಲ್ಲಿದ್ದರು 40ಕ್ಕೂ ಹೆಚ್ಚು ಮಂದಿ, 9 ಜನರ ಸಾವು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರ; ಇಲ್ಲಿದೆ ಘಟನೆಯ ವಿವರ

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರೆಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಇಂದು (ಜನವರಿ 22) ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಲಾರಿಯಲ್ಲಿ 40ಕ್ಕೂ ಹೆಚ್ಚು ಜನ ಇದ್ದರು ಎಂದು ಹೇಳಲಾಗುತ್ತಿದೆ. ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. (ವರದಿ: ಹರೀಶ್ ಮಾಂಬಾಡಿ)

ಯಲ್ಲಾಪುರ ರಸ್ತೆ ಅಪಘಾತದ ದೃಶ್ಯಗಳು
ಯಲ್ಲಾಪುರ ರಸ್ತೆ ಅಪಘಾತದ ದೃಶ್ಯಗಳು

ಕಾರವಾರ: ಹಣ್ಣು ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕ್ಕಕ್ಕೆ ಉರುಳಿ 9 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರೆಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ.

ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಲಾರಿಯಡಿ ಸಿಲುಕಿದ್ದವರನ್ನು ಹೊರತೆಗೆದರು. ಆದರೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಹಾವೇರಿಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು.

ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ‌. ಪರಿಣಾಮ ಲಾರಿಯಲ್ಲಿದ್ದ 9 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಗಾಯಗೊಂಡವರನ್ನು ಯಲ್ಲಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಯಲ್ಲಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳದಲ್ಲಿ ಪೋಲಿಸರು ಕಾರ್ಯಾಚರಣೆ ನಡೆಸಿದ್ದು ಅಪಘಾತಕ್ಕೊಳಗಾದವರ ರಕ್ಷಣೆಯಲ್ಲಿ ತೊಡಗಿದ್ದಾರೆ.

ಘಟನೆಯಲ್ಲಿ ಮೃತ ಪಟ್ಟವರ ವಿವರ 

ಯಲ್ಲಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ವಿವರ ಹೀಗಿದೆ. ಫಯಾಜ್ ಇಮಾಮ್ ಸಾಬ್ ಜಮಖಂಡಿ (45), ವಾಸೀಮ್ ವಿರುಲ್ಲಾ ಮುಡಗೇರಿ (35), ಇಜಾಜ್ ಮುಸ್ತಕಾ ಮುಲ್ಲಾ (20), ಸಾದೀಕ್ ಭಾಷ್ ಫಾರಷ್ (30), ಗುಲಾಮ್ಉಷೇನ್ ಜವಳಿ (40), ಇಮ್ತಿಯಾಜ್ ಮಮಜಾಪರ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ( 25), ಅಸ್ಲಂ ಬಾಬುಲಿ ಬೆಣ್ಣಿ (24). 

Whats_app_banner