ವಿಜಯಪುರದ ಬಿಎಲ್‌ಡಿಇ ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರಿಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ, ಆಯ್ಕೆ ಹೇಗೆ-vijaya pura news vijaya pura blde university 2 senior professors selected in world best scientists list kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ವಿಜಯಪುರದ ಬಿಎಲ್‌ಡಿಇ ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರಿಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ, ಆಯ್ಕೆ ಹೇಗೆ

ವಿಜಯಪುರದ ಬಿಎಲ್‌ಡಿಇ ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರಿಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ, ಆಯ್ಕೆ ಹೇಗೆ

ವಿಜಯಪುರದ ಬಿಎಲ್‌ಡಿಇ ವಿಶ್ವವಿದ್ಯಾನಿಲಯದ ಇಬ್ಬರು ಹಿರಿಯ ಪ್ರಾಧ್ಯಾಪಕರು ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ವಿಜಯಪುರ ಬಿಎಲ್ ಡಿಇ ಇಬ್ಬರು ಪ್ರಾಧ್ಯಾಪಕರು ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ವಿಜಯಪುರ ಬಿಎಲ್ ಡಿಇ ಇಬ್ಬರು ಪ್ರಾಧ್ಯಾಪಕರು ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ವಿಜಯಪುರ: ನಗರದ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ಶಾಸ್ತ್ರವಿಜ್ಞಾನದ ವಿಭಾಗದ ಪ್ರಾಧ್ಯಾಪಕ ಹಾಗೂ ಡಿಸ್ಟಿಂಗ್ವಿಷ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರು ಪ್ರಸಕ್ತ 2024ನೇ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಔಷಧ ವಿಜ್ಞಾನ, ಶರೀರಶಾಸ್ತ್ರ ಹಾಗೂ ಪಾಲಿಮರ್‌ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಇಬ್ಬರೂ ಸಂಶೋಧಕರಿಗೆ ಈ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್‌ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ನೀಡುತ್ತದೆ.

ಡಾ. ರಾಘವೇಂದ್ರ ಕುಲಕರ್ಣಿ ಸತತ 4ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದ ಭಾರತದ ಸಂಶೋಧಕರ ಪೈಕಿ 20ನೇ ಸ್ಥಾನ ಮತ್ತು ವಿಶ್ವದಲ್ಲಿ 146ನೇ ಸ್ಥಾನ ಪಡೆದಿದ್ದಾರೆ.

ಡಾ. ರಾಘವೇಂದ್ರ ಕುಲಕರ್ಣಿ ಅವರು 130 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ, 10 ಪೇಟೆಂಟ್‌ಗಳನ್ನೂ ಪಡೆದಿದ್ದಾರೆ ಮತ್ತು ಇವರು ನಡೆಸಿದ ಸಂಶೋಧನೆಗಾಗಿ ರೂ. 97 ಲಕ್ಷ ಅನುದಾನವೂ ಒಲಿದು ಬಂದಿದೆ.

ಡಾ. ಕುಸಾಲ ದಾಸ ಸತತ 2ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಶರೀರ ಶಾಸ್ತ್ರ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿರುವ ಭಾರತದ ಸಂಶೋಧಕರ ಪೈಕಿ 229ನೇ ಸ್ಥಾನ ಹಾಗೂ ವಿಶ್ವದಲ್ಲಿ 2730ನೇ ಸ್ಥಾನ ಪಡೆದಿದ್ದಾರೆ.

ಅವರು 146 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ, 03 ಪೇಟೆಂಟ್‌ಗಳನ್ನೂ ಪಡೆದಿದ್ದಾರೆ ಹಾಗೂ ಸಂಶೋಧನೆಗಾಗಿ ರೂ. 40 ಲಕ್ಷ ಅನುದಾನವನ್ನೂ ಪಡೆದುಕೊಂಡಿದ್ದಾರೆ.

ಇವರ ಸಾಧನೆಗೆ ಬಿ. ಎಲ್. ಡಿ. ಇ. ಡೀಮ್ಟ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಬಿ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಅಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಕೊಡಗಿನ ಮಂಜುನಾಥ್‌ ಆಯ್ಕೆ

ಮಡಿಕೇರಿ ವರದಿ: ಯು.ಎಸ್.ಎ.ಯ ಸ್ಟ್ಯಾನ್‍ ಫೋರ್ಡ್ ವಿ.ವಿ. ಮತ್ತು ಎಲ್ಸ್‍ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥರವರು ಸತತ ಐದನೇ ಬಾರಿ ಸ್ಥಾನ ಪಡೆದಿದ್ದಾರೆ.

ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಗಳಿಸಿದ್ದಾರೆ. (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‍ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರತಂದಿರುತ್ತಾರೆ. 27 ಜರ್ನಲ್‍ಗಳಲ್ಲಿ ಎಡಿಟೋರಿಯಲ್ ಬೋರ್ಡ್‍ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‍ನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

mysore-dasara_Entry_Point