Vijayapura Accident: ವಿಜಯಪುರ ಕನ್ನಾಳ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ
ಕನ್ನಡ ಸುದ್ದಿ  /  ಕರ್ನಾಟಕ  /  Vijayapura Accident: ವಿಜಯಪುರ ಕನ್ನಾಳ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ

Vijayapura Accident: ವಿಜಯಪುರ ಕನ್ನಾಳ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ

Vijayapura Accident: ವಿಜಯಪುರ ತಾಲೂಕು ಕನ್ನಾಳ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ದುರ್ಮರಣಕ್ಕೀಡಾದರು.

ವಿಜಯಪುರ ಕನ್ನಾಳ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದರು.
ವಿಜಯಪುರ ಕನ್ನಾಳ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದರು.

Vijayapura Accident: ವಿಜಯಪುರ ತಾಲೂಕು ಕನ್ನಾಳ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಚರಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ಹೋಗಿದ್ದು, ಸ್ಥಳಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡರು. ಶವಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ. ರಾಜು ಕಾಂಬಳೆ, ಪೋಳ ಎಂಬವವರು ವಿಜಯಪುರ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Whats_app_banner