Vijayapura News: ಗಣರಾಜ್ಸೋತ್ಸವ ವೇಳೆ ಗುಂಡು ಹಾರಿಸಿದ ವ್ಯಕ್ತಿ, ಗ್ರಾಪಂ ಅಧ್ಯಕ್ಷೆಗೆ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  Vijayapura News: ಗಣರಾಜ್ಸೋತ್ಸವ ವೇಳೆ ಗುಂಡು ಹಾರಿಸಿದ ವ್ಯಕ್ತಿ, ಗ್ರಾಪಂ ಅಧ್ಯಕ್ಷೆಗೆ ಗಾಯ

Vijayapura News: ಗಣರಾಜ್ಸೋತ್ಸವ ವೇಳೆ ಗುಂಡು ಹಾರಿಸಿದ ವ್ಯಕ್ತಿ, ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ ಜಿಲ್ಲೆ ಹಿರೇ ರೂಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ವಿಜಯಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.
ವಿಜಯಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ವಿಜಯಪುರ: ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿಯನ್ನು ಅದೇ ಗ್ರಾಮದ ಮಲ್ಲು ಗಿನ್ನಿ ಎನ್ನಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಮಲ್ಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಈ ವೇಳೆ ಗುಂಡು ಗ್ರಾಮ ಪಂಚಾಯತ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ಇನ್ನು ಮಿಸ್ ಫೈರ್ ನಿಂದ ಗ್ರಾಮ ಪಂಚಾಯತ ಅಧ್ಯಕ್ಷೆಗೆ ಗುಂಡು ತಾಗಿದೆ ಎನ್ನಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಯತ್ನ ನಡೆಸಿದ್ದು ಆತ ಪರಾರಿಯಾಗಿದ್ದಾನೆ.

ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಇದನ್ನು ಮಾಡಿದ್ದೂ ಅಲ್ಲದೇ ಗ್ರಾಮಪಂಚಾಯತಿ ಅಧ್ಯಕ್ಷೆಗೂ ಗಾಯವಾಗಿದೆ. ಈ ಕುರಿತು ವಿಚಾರಣೆ ನಡೆಸಿದ್ದು. ಆತ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Whats_app_banner