ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆ ಇದೆ, ಆದರೆ ಕೇಂದ್ರದ ಅಧಿಸೂಚನೆ ಆಗಬೇಕು; ಪ್ಲಾನ್‌ನ ವಿವರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ಕರ್ನಾಟಕ  /  ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆ ಇದೆ, ಆದರೆ ಕೇಂದ್ರದ ಅಧಿಸೂಚನೆ ಆಗಬೇಕು; ಪ್ಲಾನ್‌ನ ವಿವರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆ ಇದೆ, ಆದರೆ ಕೇಂದ್ರದ ಅಧಿಸೂಚನೆ ಆಗಬೇಕು; ಪ್ಲಾನ್‌ನ ವಿವರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Almatti Dam Height; ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಆಲಮಟ್ಟಿಯಲ್ಲಿ ವಿವರಿಸಿದರು. ಪ್ಲಾನ್‌ನ ವಿವರ ಹೀಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಆಗಸ್ಟ್ 21) ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಆಗಸ್ಟ್ 21) ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನ ಅನ್ವಯ ಕರ್ನಾಟಕಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದೆ. ಆದ್ದರಿಂದ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಆಗಸ್ಟ್ 21) ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್. ಇದನ್ನು 524.25 ಮೀಟರ್ ಎತ್ತರಕ್ಕೆ ಏರಿಸಬೇಕು. ಈ ರೀತಿ ಮಾಡುವುದಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಬೇಕು. ಇದಕ್ಕೆ ಅಗತ್ಯ ಪ್ರಸ್ತಾವನೆ, ಮನವಿಯನ್ನು ರಾಜ್ಯ ಸರ್ಕಾರದಿಂದ ಸಲ್ಲಿಸಲಾಗಿದೆ. ಆದಾಗ್ಯೂ, ಕೇಂದ್ರ ಅಧಿಸೂಚನೆ ಪ್ರಕಟಿಸದ ಕಾರಣ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆಲಮಟ್ಟಿ ಜಲಾಯಶದ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಆಗಬೇಕಾಗಿರುವುದೇನು

ಆಲಮಟ್ಟಿ ಅಣೆಕಟ್ಟು ಹೆಚ್ಚಿಸಲು ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವುದಕ್ಕೆ ಇರುವ ಅಡ್ಡಿಗಳನ್ನು ಇತ್ಯರ್ಥ ಮಾಡಬೇಕು. ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಪ್ರಕಟಿಸಬೇಕು ಎಂದು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ಅಣೆಕಟ್ಟೆಯ ಎತ್ತರ ಹೆಚ್ಚಿಸುವುದರಿಂದ ನಿರಾಶ್ರಿತರಾಗುವ ಜನರಿಗೆ ಪುನರ್‌ ವಸತಿ ಮತ್ತು ಅವರ ಬದುಕಿನ ಪುನರ್‌ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸಿದ್ಧವಿದೆ. ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂಪಾಯಿ ಅಂದಾಜಿನ ಪ್ರಸ್ತಾವನೆಯನ್ನು ಅನುಮೋದಿಸಲಾಗಿತ್ತು.ಈಗ ಈ ಮೊತ್ತ 80 ಸಾವಿರ ಕೋಟಿ ರೂಪಾಯಿ ಆಗಬಹುದು. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ರೂಪಾಯಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂಪಾಯಿಯನ್ನು ವೆಚ್ಚ ಮಾಡಬೇಕೆಂದು ಉದ್ದೇಶಿಸಲಾಗಿದೆ. ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಟವಾಗಬೇಕು. ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ಇದು ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪುರ್ನವಸತಿ ಮತ್ತು ಪುನರ್‌ನಿರ್ಮಾಣದ ಪ್ರದೇಶವೆಷ್ಟು

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

Whats_app_banner