Karnataka Weather: ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ

Karnataka Weather: ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅತ್ತ ಬೆಳಗಾವಿ ಜಿಲ್ಲೆಯಲ್ಲೂ ಬಿರುಸಿನ ಮಳೆ ಸಂಭವವಿದ್ದು, ರಾಜಧಾನಿ ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದೆ.

ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ
ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್‌ 26ರ ಸೋಮವಾರದಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅದರಲ್ಲೂ ಉಡುಪಿಯಲ್ಲಿ ಅತಿಯಾಗಿ ಮಳೆಯಾಗಲಿದೆ ಎಂದು ಹೇಳಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ಇರುವ ಸಾಧ್ಯತೆ ಇದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯ ಸೂಚನೆ ಇದೆ. ಇಲ್ಲಿ ಗಾಳಿಯ ವೇಗವು 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಲ್ಲಿಯೂ ಭಾರಿ ಮಳೆಯ ಜೊತೆಗೆ ಗಾಳಿಯ ವೇಗ 40ರಿಂದ 50 kmph ಇರಲಿದೆ. ಉಳಿದಂತೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಸುರಿಯಲಿದೆ. ಗಾಳಿಯ ವೇಗ 40ರಿಂದ 50 kmph ಆಗುವ ಸಾಧ್ಯತೆಯಿದೆ. ಅತ್ತ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.‌

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಂಭಾವ್ಯತೆ ಇದೆ ಎಂದು ವೆದರ್‌ ಪ್ರೆಡಿಕ್ಷನ್ ಹೇಳಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಗಸ್ಟ್‌ 29ರಿಂದ 31ರವೆರೆಗ ಅತಿಯಾದ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರಿಗೆ ಸೂಚನೆ

ಕರಾವಳಿ ಭಾಗದಲ್ಲಿ ಸಮುದ್ರ ತೀರದ ಉದ್ದಕ್ಕೂ ಗಾಳಿಯ ವೇಗವು 35ರಿಂದ 45 ಕಿಮೀ ವೇಗದಲ್ಲಿ ಗಂಟೆಗೆ 55 ಕಿಮೀ ವೇಗದವರೆಗೂ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೀನುಗಾರಿಗೆ ಸೂಚನೆ ನೀಡಿದೆ.

ಬೆಂಗಳೂರು ಹವಾಮಾನ

ಕರ್ನಾಟಕ ರಾಜಧಾನಿ ಬೆಂಗಳೂರು ಮತ್ತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರವಾಗಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 30 ಡಿಗ್ರಿ ಮತ್ತು ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್‌ ಎಂದು ಅಂದಾಜಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿಯೂ ಉದ್ಯಾನ ನಗರಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್‌ 25ರಂದು ಎಲ್ಲೆಲ್ಲಿ ಮಳೆ?

ಕಳೆದ (ಆಗಸ್ಟ್‌ 25) ದಿನ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ನೆೈರುತ್ಯ ಮಾನ್ಸೂನ್ ಕರಾವಳಿ ಜಿಲ್ಲೆಗಳಲ್ಲಿ ಸಕ್ರಿಯವಾಗಿತ್ತು. ಇದೇ ವೇಳೆ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮತ್ತು ಉಳನಾಡಿನ ಹಲವು ಸ್ಥಳಗಳಲ್ಲಿ ನಿನ್ನೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸೆಲ್‌ರಾಕ್‌ನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಉಳಿದಂತೆ ಅಂಕೋಲಾ, ಕದರಾ, ಗೇರ್ಸೊಪ್ಪಾ, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೂ ಹೆಚ್ಚು ಮಳೆಯಾಗಿದೆ.

Whats_app_banner