ಕರ್ನಾಟಕ ಹವಾಮಾನ ಏಪ್ರಿಲ್‌ 1; ಬೆಳಗಾವಿ, ಬಾಗಲಕೋಟೆ, ವಿಜಯಪುರ ಒಂದೆರಡು ಕಡೆ ಸಾಧಾರಣ ಮಳೆ ನಿರೀಕ್ಷೆ, ಬೆಂಗಳೂರು ಒಣಹವೆ-weather today apr 1 rain forecast ni karnataka belagavi vijayapura bagalkot bengaluru weather imd weather report uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 1; ಬೆಳಗಾವಿ, ಬಾಗಲಕೋಟೆ, ವಿಜಯಪುರ ಒಂದೆರಡು ಕಡೆ ಸಾಧಾರಣ ಮಳೆ ನಿರೀಕ್ಷೆ, ಬೆಂಗಳೂರು ಒಣಹವೆ

ಕರ್ನಾಟಕ ಹವಾಮಾನ ಏಪ್ರಿಲ್‌ 1; ಬೆಳಗಾವಿ, ಬಾಗಲಕೋಟೆ, ವಿಜಯಪುರ ಒಂದೆರಡು ಕಡೆ ಸಾಧಾರಣ ಮಳೆ ನಿರೀಕ್ಷೆ, ಬೆಂಗಳೂರು ಒಣಹವೆ

ಕರ್ನಾಟಕ ಹವಾಮಾನ ಏಪ್ರಿಲ್ 1; ಕರ್ನಾಟಕದಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮೆಳ ನಿರೀಕ್ಷೆ ಮಾಡಬಹುದು. ಬೆಂಗಳೂರು, ಕರಾವಳಿ ಮತ್ತು ದಕ್ಷಿಣ ಒಳನಾಡುಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 1
ಕರ್ನಾಟಕ ಹವಾಮಾನ ಏಪ್ರಿಲ್‌ 1

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಚದುರಿದ ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ, ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನಾ ವರದಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರ ಪ್ರಕಟಿಸಿರುವ ವರದಿ ಪ್ರಕಾರ ನಾಳೆ (ಏಪ್ರಿಲ್ 2) ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಚದರಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಈ ಅವಧಿಯಲ್ಲಿ ಗುಡುಗು ಮಿಂಚು ಕೂಡ ನಿರೀಕ್ಷಿಸಬಹುದು ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.

ಮುಂದಿನ ಎರಡು ದಿನಗಳ ಅವಧಿಯಲ್ಲಿ ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗುವ ಬಹಳಷ್ಟು ಸಾಧ್ಯತೆ ಇದೆ. ಇದೇ ರೀತಿ ಶಾಖದ ಅಲೆಗಳ ಅಥವಾ ಉಷ್ಣ ಅಲೆಗಳ ಕುರಿತು ಎಚ್ಚರಿಕೆ ನೀಡಿರುವ ಮುನ್ಸೂಚನಾ ವರದಿಯು, ಏಪ್ರಿಲ್ 3 ರಿಂದ 5ರ ತನಕ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಜಿಲ್ಲೆಗಳ ಸುತ್ತಮುತ್ತಲಿನ ಜನರು ಈ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಏ.1), ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರಿನ ತಾಪಮಾನ 36 ರಿಂದ 37 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿ ಹಳೆಯ ದಾಖಲೆಗಳನ್ನು ಮುರಿಯುವಂತೆ ಮುನ್ನುಗ್ಗಿದೆ. ನೀರಿನ ಸಮಸ್ಯೆ ಜೊತೆಗೆ ತಾಪಮಾನದ ಸಂಕಷ್ಟವೂ ಬೆಂಗಳೂರು ಸುತ್ತಮುತ್ತಲಿನ ಜನರನ್ನು ಕಾಡಿದೆ.

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 1) ತಾಪಮಾನ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.31) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 31) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 20.4 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 29 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 37)

ಮಂಗಳೂರು – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)

ಚಿತ್ರದುರ್ಗ – 25.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)

ಗದಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 29)

ಹೊನ್ನಾವರ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 69)

ಕಲಬುರಗಿ – 27.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 30)

ಬೆಳಗಾವಿ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಾರವಾರ – 33.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 69 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)