ಕರ್ನಾಟಕ ಹವಾಮಾನ ಏಪ್ರಿಲ್ 11; ಕರಾವಳಿಗೆ ಬಿಸಿಲು, ಕೊಪ್ಪಳ ಬಿಟ್ಟು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ
ಕರ್ನಾಟಕ ಹವಾಮಾನ ಏಪ್ರಿಲ್ 11: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಬಿಸಿಲು ಕಾಡಲಿದೆ. ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹಗುರ, ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ 5 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಕರ್ನಾಟಕ ಮಳೆ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರಲಿದ್ದು, ಬಿಸಿಲು ಕಾಡಲಿದೆ. ಈ ಕರಾವಳಿ ಜಿಲ್ಲೆಗಳಲ್ಲಿ ಒಣಹವೆಯ ತಾಪಮಾನ ಮತ್ತು ಆರ್ದ್ರತೆಯ ಕಾರಣ ಜನ ಸಂಕಟ ಅನುಭವಿಸಲಿದ್ದಾರೆ. ಇನ್ನುಳಿದಂತೆ, ಉತ್ತರ ಒಳನಾಡಿನ ಕೊಪ್ಪಳ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಬೀಳಬಹುದು. ದಕ್ಷಿಣ ಒಳನಾಡಿನಲ್ಲಿ 5 ಜಿಲ್ಲೆಗಳಲ್ಲಿ ಮಳೆ ಬೀಳಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಹಗುರ ಮಳೆ ಬೀಳಬಹುದು. ಗುಡುಗು ಮಿಂಚಿನ ಎಚ್ಚರಿಕೆಯನ್ನು ಹವಾಮಾನ ವರದಿ ನೀಡಿದೆ. ಇಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಒಣಹವೆ ಮತ್ತು ಬಿಸಿಗಾಳಿ ಮುಂದುವರಿದಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರುಗಳಲ್ಲಿ ಮಳೆ ಬೀಳಬಹುದು. ಬೇರಾವುದೇ ಎಚ್ಚರಿಕೆ ಇಲ್ಲ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ, ಏಪ್ರಿಲ್ 18 ರ ತನಕ ಮಳೆ ಮುನ್ಸೂಚನೆ ವರದಿ ಲಭ್ಯವಾಗಿದ್ದು, ಏಪ್ರಿಲ್ 12, 13, 14, 17 ಮತ್ತು 18 ರಂದು ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆ, ಏಪ್ರಿಲ್ 10, 11, 15 & 16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಹವಾಮಾನ ಇಂದು (ಏಪ್ರಿಲ್ 11), ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್ 11) ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 10) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22.5 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 10) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.7 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 11) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)
ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)
ಚಿತ್ರದುರ್ಗ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 55)
ಗದಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)
ಹೊನ್ನಾವರ – 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)
ಕಲಬುರಗಿ – 30.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)
ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಕಾರವಾರ – 32.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)