ಕರ್ನಾಟಕ ಹವಾಮಾನ ಏಪ್ರಿಲ್‌ 22; ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ, ಉಳಿದೆಡೆ ಒಣಹವೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 22; ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಏಪ್ರಿಲ್‌ 22; ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಏಪ್ರಿಲ್ 22: ರಾಜ್ಯದಲ್ಲಿ ಇಂದು ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡಬರಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 22; ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಮುನ್ಸೂಚನೆ ನಕ್ಷೆ
ಕರ್ನಾಟಕ ಹವಾಮಾನ ಏಪ್ರಿಲ್‌ 22; ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಮುನ್ಸೂಚನೆ ನಕ್ಷೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಏಪ್ರಿಲ್ 22) ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ, , ರಾಯಚೂರು, ವಿಜಯಪುರ, ಕೊಪ್ಪಳ ಸೇರಿ 16 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು. ಉಳಿದೆಡೆ ಒಣಹವೆ ಕಂಡುಬರಲಿದೆ. ಅದೇ ರೀತಿ ಬೆಂಗಳೂರು ಮತ್ತು ಸುತ್ತಮುತ್ತ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಪ್ರಕಾರ ಏಪ್ರಿಲ್ 23ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಒಂದೆರಡು ಕಡೆ ಮಳೆ ಬೀಳಬಹುದು. ಗುಡುಗು ಮಿಂಚು ಕೂಡ ಕಾಣಿಸಿಕೊಳ್ಳಬಹುದು. ಉಡುಪಿ ಮತ್ತು ಉತ್ತರ ಕನ್ನಡಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನುಳಿದಂತೆ ಏಪ್ರಿಲ್‌ 27 ರ ತನಕ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಬೀಳಬಹುದು. ಜೊತೆಗೆ ಗುಡುಗು ಮಿಂಚು ಕೂಡ ಕಾಣಿಸಬಹುದು. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನುಳಿದಂತೆ ಈ ಪ್ರೇಶಗಳಲ್ಲಿ ತಾಪಮಾನವು ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗಬಹುದು. ಗುಡುಗು ಮತ್ತು ಮಿಂಚಿನ ಎಚ್ಚರಿಕೆಯನ್ನೂ ಮಳೆ ಮುನ್ಸೂಚನೆ ವರದಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 22), ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 22) ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 21) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 21) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 34.5 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 22 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಮಂಗಳೂರು – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)

ಗದಗ – 28.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 73)

ಹೊನ್ನಾವರ – 29.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಕಲಬುರಗಿ – 28.1 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)

ಬೆಳಗಾವಿ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 45)

ಕಾರವಾರ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner