ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 25; ಬಾಗಲಕೋಟೆ, ಬೆಳಗಾವಿ, ಮೈಸೂರು, ಮಂಡ್ಯ ಸೇರಿ 15 ಜಿಲ್ಲೆಗಳಲ್ಲಿ ಶಾಖದ ಅಲೆ, ಉಳಿದೆಡೆ ತಾಪಮಾನ ಹೆಚ್ಚಳ

ಕರ್ನಾಟಕ ಹವಾಮಾನ ಏಪ್ರಿಲ್‌ 25; ಬಾಗಲಕೋಟೆ, ಬೆಳಗಾವಿ, ಮೈಸೂರು, ಮಂಡ್ಯ ಸೇರಿ 15 ಜಿಲ್ಲೆಗಳಲ್ಲಿ ಶಾಖದ ಅಲೆ, ಉಳಿದೆಡೆ ತಾಪಮಾನ ಹೆಚ್ಚಳ

ಕರ್ನಾಟಕ ಹವಾಮಾನ ಏಪ್ರಿಲ್ 25: ಕರ್ನಾಟಕದಲ್ಲಿ ಇಂದು ಬಾಗಲಕೋಟೆ, ಬೆಳಗಾವಿ ಮೈಸೂರು, ಮಂಡ್ಯ ಸೇರಿ 15 ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದು, ತಾಪಮಾನ ಹೆಚ್ಚಳವಾಗಬಹುದು. ಬೆಂಗಳೂರು ಸುತ್ತಮುತ್ತ ತಾಪಮಾನ ಹೆಚ್ಚಳ ಕಂಡಬರಬಹುದು ಎಂದು ಎಚ್ಚರಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 25
ಕರ್ನಾಟಕ ಹವಾಮಾನ ಏಪ್ರಿಲ್‌ 25

ಬೆಂಗಳೂರು: ಬೆಳಗಾವಿ, ಬಾಗಲಕೋಟೆ, ಮೈಸೂರು, ಮಂಡ್ಯ ಸೇರಿ 15 ಜಿಲ್ಲೆಗಳಲ್ಲಿ ಇಂದು ಶಾಖದ ಅಲೆಗಳು ಗೋಚರಿಸಲಿವೆ. ಉಳಿದೆಡೆ ತಾಪಮಾನ ಹೆಚ್ಚಳವಾಗಲಿದ್ದು, ಇಂದು ಕರ್ನಾಟಕದಲ್ಲಿ ಬಹುತೇಕ ಭಾಗಗಳಲ್ಲಿ ಒಣಹವೆ ಅತಿಯಾಗಿ ಕಾಡಲಿದೆ. ಕರಾವಳಿಯಲ್ಲಿ ಬಿಸಿಲಿನ ಜೊತೆಗೆ ಆರ್ದ್ರತೆಯೂ ಇರಲಿದ್ದು, ತಾಪಮಾನ ಹೆಚ್ಚಳದ ಅನುಭವ ತೀವ್ರವಾಗಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಪ್ರಕಾರ, ಏಪ್ರಿಲ್ 26ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 28ರ ತನಕ ಗರಿಷ್ಠ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 24 ರಿಂದ 28ರ ತನಕದ ಅವಧಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪ್ರಮಾಣ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ವಿಜಯಪುರ, ಯಾದಗಿರಿಗಳಲ್ಲಿ ಇಂದು ಶಾಖದ ಅಲೆಗಳು ಉಂಟಾಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ಬೀದರ್, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಬಹುದು ಎಂದು ವರದಿ ಎಚ್ಚರಿಸಿದೆ. ಈ ಪ್ರದೇಶಗಳಲ್ಲಿ ಏಪ್ರಿಲ್ 28ರ ತನಕ ತಾಪಮಾನವು 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ಉಂಟಾಗಬಹುದು. ಉಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದಾಗ್ಯೂ ಏಪ್ರಿಲ್ 25ರ ತನಕ ದಕ್ಷಿಣ ಒಳಾನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಿಕೆಯಾಗಬಹುದು ಎಂದು ವರದಿ ಎಚ್ಚರಿಸಿದೆ.

ಶಾಖದ ಅಲೆಗಳ ಮುನ್ನೆಚ್ಚರಿಕೆ

ಕರ್ನಾಟಕದಲ್ಲಿ ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಏಪ್ರಿಲ್ 27ರ ತನಕ ಶಾಖದ ಅಲೆಗಳು ಉಂಟಾಗಬಹುದು. ಆದ್ದರಿಂದ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲುಸ್ತುವಾರಿ ಕೇಂದ್ರದ ವರದಿ ಎಚ್ಚರಿಸಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 25), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 25) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮುಂಜಾನೆ ವೇಳೆ ಸ್ವಲ್ಪ ಹೊತ್ತು ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 24) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 24) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 37.5 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22.3 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 25 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 37)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)

ಗದಗ – 28.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59)

ಹೊನ್ನಾವರ – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)

ಕಲಬುರಗಿ – 29.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)

ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಕಾರವಾರ – 34.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point