ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 30; ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ಕರ್ನಾಟಕ ಹವಾಮಾನ ಏಪ್ರಿಲ್‌ 30; ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ಕರ್ನಾಟಕ ಹವಾಮಾನ ಏಪ್ರಿಲ್ 30: ಕರಾವಳಿ ಜಿಲ್ಲೆಗಳನ್ನು ಹೊರತು ಪಡಿಸಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರುವ ಕಾರಣ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸಲ್ಲಿರಲಿದೆ ಎಂದು ವರದಿ ಎಚ್ಚರಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 30 ರಂದು ಬಿಸಿಗಾಳಿ, ರಣಬಿಸಿಲು ಕಾರಣ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದ್ದು, ಅದರ ನಕ್ಷೆ (ಬಲ ಚಿತ್ರ) ಇಲ್ಲಿದೆ.
ಕರ್ನಾಟಕ ಹವಾಮಾನ ಏಪ್ರಿಲ್‌ 30 ರಂದು ಬಿಸಿಗಾಳಿ, ರಣಬಿಸಿಲು ಕಾರಣ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದ್ದು, ಅದರ ನಕ್ಷೆ (ಬಲ ಚಿತ್ರ) ಇಲ್ಲಿದೆ.

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ತೀವ್ರ ಏರಿಕೆ ಆಗಲಿದ್ದು, ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿ ಇರಲಿದೆ. ಶುಷ್ಕ ವಾತಾವರಣದ ಕಾರಣ ಸೆಖೆ ಹೆಚ್ಚಾಗಿರಲಿದೆ. ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರುವ ಕಾರಣ ಆರೆಂಜ್ ಅಲರ್ಟ್‌ ಘೋಷಣೆಯಾಗಿದೆ. ಈ ಪೈಕಿ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ರಾತ್ರಿ ವೇಳೆ ಕೂಡ ಹೆಚ್ಚಿನ ತಾಪಮಾನ ಅನುಭವಕ್ಕೆ ಬರಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಎಚ್ಚರಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆಯೊಂದಿಗೆ ಆರೆಂಜ್ ಅಲರ್ಟ್ ಘೋ‍ಷಣೆಯಾಗಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆಗಳ ಎಚ್ಚರಿಕೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋ‍ಷಣೆ ಮಾಡಲಾಗಿದೆ.

ಮಳೆ ಮುನ್ಸೂಚನೆ ಪ್ರಕಾರ, ಮೇ 5 ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಂದರೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರಗಳಲ್ಲಿ ಒಂದೆರಡು ಕಡೆ ಮಳೆ ಬೀಳಬಹುದು ಎಂಬ ಮುನ್ಸೂಚನೆ ಇದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 30), ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 30) ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 29) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 38.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 29) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 23.5 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 30 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 40)

ಮಂಗಳೂರು – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)

ಚಿತ್ರದುರ್ಗ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 77)

ಗದಗ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)

ಹೊನ್ನಾವರ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)

ಕಲಬುರಗಿ – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 37)

ಬೆಳಗಾವಿ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)

ಕಾರವಾರ – 34.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point