ಕರ್ನಾಟಕ ಹವಾಮಾನ ಏಪ್ರಿಲ್‌ 5; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು, ಮಂಡ್ಯ, ಮೈಸೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 5; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು, ಮಂಡ್ಯ, ಮೈಸೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕ ಹವಾಮಾನ ಏಪ್ರಿಲ್‌ 5; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು, ಮಂಡ್ಯ, ಮೈಸೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕ ಹವಾಮಾನ ಏಪ್ರಿಲ್ 5; ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಕಲಬುರಗಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು ಮತ್ತು ಉಷ್ಣದ ಅಲೆಗಳನ್ನು ಇಂದು ನಿರೀಕ್ಷಿಸಬಹುದು. ಅದೇ ರೀತಿ, ಮಂಡ್ಯ, ಮೈಸೂರು ಸೇರಿ 5 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಚದುರಿದ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 5; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು
ಕರ್ನಾಟಕ ಹವಾಮಾನ ಏಪ್ರಿಲ್‌ 5; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ರಣಬಿಸಿಲು

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ ಸೇರಿ 6 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 5) ರಣಬಿಸಿಲು ಮತ್ತು ಉಷ್ಣದ ಅಲೆಗಳನ್ನು ನಿರೀಕ್ಷಿಸಬಹುದು. ಇನ್ನೊಂದೆಡೆ ಮಂಡ್ಯ, ಮೈಸೂರು ಸೇರಿ 5 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಚದುರಿದ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉಷ್ಣ ಅಲೆಗಳು ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ವಿಜಯಪುರ, ಕೊಪ್ಪಳ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿಯಲ್ಲಿ ಕಾಡಲಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಗರಿಷ್ಠ ತಾಪಮಾನವು ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಶಿಯಸ್‌ವೆರೆಗೂ ಹೆಚ್ಚಾಗಬಹುದು. ಮೂರು ದಿನಗಳ ಕಾಲ ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯ ವಾತಾವರಣವೂ ಬೆಚ್ಚಗೆ ಇರುವ ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಹಲವು ಕಡೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿಯಲ್ಲಿ ಏಪ್ರಿಲ್ 6 ರ ತನಕ ಉಷ್ಣ ಅಲೆ ಕಾಡಲಿದೆ. ಗರಿಷ್ಠ ತಾಪಮಾನವು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 5), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 5) ಬೆಳಗ್ಗೆ ಭಾಗಶಃ ಮೋಡದ ವಾತಾವರಣ ಇರಲಿದೆ. ಬಳಿಕ ತಿಳಿ ಆಕಾಶವಿರಲಿದ್ದು, ತಾಪಮಾನ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 4) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 4) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.5 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 5) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಚಿತ್ರದುರ್ಗ – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67)

ಹೊನ್ನಾವರ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)

ಕಲಬುರಗಿ – 31.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 35)

ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಕಾರವಾರ – 32.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner