ಕರ್ನಾಟಕ ಹವಾಮಾನ ಏಪ್ರಿಲ್ 9; ಬಾಗಲಕೋಟೆ, ಬಳ್ಳಾರಿ ಸೇರಿ 6 ಜಿಲ್ಲೆಗಳಲ್ಲಿ ಶಾಖದ ಅಲೆ, ಮೈಸೂರು,ಕೊಡಗು ಸೇರಿ 3 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕ ಹವಾಮಾನ ಏಪ್ರಿಲ್ 9; ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಕಲಬುರಗಿ ಸೇರಿ 6 ಜಿಲ್ಲೆಗಳಲ್ಲಿ ಶಾಖದ ಅಲೆಗಳನ್ನು ಇಂದು ನಿರೀಕ್ಷಿಸಬಹುದು. ಪರಿಣಾಮ ರಣಬಿಸಿಲು ಜನರನ್ನು ಕಂಗಾಲು ಮಾಡಲಿದೆ. ಅದೇ ರೀತಿ, ಕೊಡಗು, ಮೈಸೂರು ಸೇರಿ 3 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಚದುರಿದ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ ಸೇರಿ 4 ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ ಒಟ್ಟು 6 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 9) ತೀವ್ರ ಉಷ್ಣದ ಅಲೆಗಳನ್ನು ನಿರೀಕ್ಷಿಸಬಹುದು. ಇನ್ನೊಂದೆಡೆ ಚಿಕ್ಕಮಗಳೂರು, ಮೈಸೂರು ಸೇರಿ 3 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಚದುರಿದ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉಷ್ಣ ಅಲೆಗಳು ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರಗಳಲ್ಲಿ ಕಾಡಲಿದೆ. ಮುಂದಿನ ಎರಡು ದಿನಗಳ ಕಾಲ ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಗಾಳಿಯ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ರಾಯಚೂರು, ಕೊಪ್ಪಳ ಮತ್ತು ಕಲಬುರಗಿಗಳಲ್ಲಿ ರಾತ್ರಿ ವಾತಾವರಣವೂ ಹಗಲಿನಂತೆಯೇ ಹೆಚ್ಚಿನ ತಾಪಮಾನ ಹೊಂದಿರಲಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಮುಂದಿನ 4 ದಿನಗಳ ಕಾಲ ಬಿಸಿಗಾಳಿ ಮತ್ತು ಆರ್ದ್ರತೆಯ ಪರಿಸ್ಥಿತಿ ಇರಲಿದೆ. ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರಗಳಲ್ಲಿ ಮುಂದಿನ ಎರಡು ದಿನ ಉಷ್ಣ ಅಲೆ, ಬಿಸಿಗಾಳಿ ತೀವ್ರವಾಗಿ ಕಾಡಲಿದೆ. ಗರಿಷ್ಠ ತಾಪಮಾನವು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು ಸೇರಿ ಬಹುತೇ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು (ಏಪ್ರಿಲ್ 9), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್ 9) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 8) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 8) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 37.4 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 9) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 41)
ಮಂಗಳೂರು – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)
ಚಿತ್ರದುರ್ಗ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)
ಗದಗ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 54)
ಹೊನ್ನಾವರ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)
ಕಲಬುರಗಿ – 29.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 55)
ಬೆಳಗಾವಿ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)
ಕಾರವಾರ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)